ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ನಮ್ಮಲ್ಲಿರುವ ಆತ್ಮವಿಶ್ವಾಸ ಎಂದಿಗೂ ಸೋಲಬಾರದು-ಶೋಭಾ ವೆಂಕಟರಮಣ

ಶಿವಮೊಗ್ಗ : ನಮ್ಮಲ್ಲಿರುವ ಆತ್ಮವಿಶ್ವಾಸ ಎಂದಿಗೂ ಸೋಲಬಾರದು ಎಂದು ರಾಮಕೃಷ್ಣ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಶೋಭಾ ವೆಂಕಟರಮಣ ಹೇಳಿದರು.
ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಶಿವಮೊಗ್ಗ ಶಾಖೆಯ  ಗುರುಪುರದಲ್ಲಿರುವ ಬಿಜಿಎಸ್ ಶಾಲೆಯಲ್ಲಿ ಶಿಕ್ಷಣ  ಇಲಾಖೆ ಹಾಗೂ ಬಿಜಿಎಸ್ ವಿದ್ಯಾಸಂಸ್ಥೆ ಹಾಗೂ ಅನುದಾರಹಿತ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಶಿವಮೊಗ್ಗ. ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಅನುದಾನ ರಹಿತ ಎ.ಬಿ.ಮತ್ತು ಸಿ.ಡಿ ವಲಯ ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಯಲ್ಲಿ ಸೋಲುವುದು ಸಾಮಾನ್ಯ ಆದರೆ ಕ್ರೀಡಾಪಟು ಎಂದೂ ಕೂಡ ತಮ್ಮ ಆತ್ಮ ವಿಶ್ವಾಸವನ್ನು ಕಳೆದುಕೊಳ್ಳಬಾರದು ಎಂದು ಸಲಹೆ ನೀಡಿದರು.
ಆಟದಲ್ಲಿ ಸೋಲು ಗೆಲುವು ಸರ್ವೇ ಸಾಮಾನ್ಯ ಆದರೆ ಭಾಗವಹಿಸುವಿಕೆ ಅತ್ಯಂತ ಮುಖ್ಯವಾಗಿರುತ್ತದೆ ಎಂದ ಅವರು, ಕ್ರೀಡೆಯಲ್ಲಿ ತಮ್ಮ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯವನ್ನು ಪರೀಕ್ಷಿಸಿಕೊಳ್ಳಬಹುದಾಗಿದೆ ಅಲ್ಲದೇ ಕ್ರೀಡೆ ಶಿಸ್ತನ್ನು ಕಲಿಸುತ್ತದೆ ಎಂದು ಹೇಳಿದರು.
ಕ್ರೀಡಾಪಟುಗಳಲ್ಲಿ ಅತ್ಯಂತ ಸಾಮರಸ್ಯವಿರುತ್ತದೆ ಇದು ಕ್ರೀಡಾ ಕ್ಷೇತ್ರದ ಗುಟ್ಟಾಗಿದೆ ಎಂದ ಅವರು, ಕ್ರೀಡೆ ತಮ್ಮ ಮಾನಸಿಕ ಬುದ್ದಿಮಟ್ಟವನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಕೂಡ ಶೈಕ್ಷಣಿಕ ಚಟುವಟಿಕೆಯ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲೂ ಕೂಡ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದರು.
ಶರಾವತಿ ನಗರದ ಬಿಜಿಎಸ್ ವಸತಿ ಶಾಲೆಯ ಪ್ರಾಂಶುಪಾಲೆ ಹೇಮಾ ಎಸ್. ಆರ್. ಮಾತನಾಡಿ, ಕ್ರೀಡೆ ಪ್ರತಿಯೊಬ್ಬ ವಿದ್ಯಾರ್ಥಿಗೆ ಆತ್ಮ ವಿಶ್ವಾಸವನ್ನು ತಂದುಕೊಡುತ್ತದೆ. ವಿದ್ಯಾರ್ಥಿಗಳಾದ ನಿಮ್ಮನ್ನು ಕ್ರೀಡೆಯಲ್ಲಿ ಸಾಮರ್ಥ್ಯಗೊಳಿಸುವ ಕಾರ್ಯಕವನ್ನು ನಿಮ್ಮ ದೈಹಿಕ ಶಿಕ್ಷಕರು ಸಮರೋಪಾದಿಯಲ್ಲಿ ಮಾಡುತ್ತಿದ್ದಾರೆ. ಅವರಿಗೆ ವಂದನೆಯನ್ನು ಸಲ್ಲಿಸುವುದು ಕೂಡ ನಿಮ್ಮ ಕರ್ತವ್ಯವಾಗಿದೆ ಎಂದರು.
ಗುರುಪುರ ಬಿಜಿಎಸ್ ಶಾಲೆಯಲ್ಲಿ ಪ್ರಾಂಶುಪಾಲ ಸುರೇಶ್ ಎಸ್. ಹೆಚ್. ಮಾತನಾಡಿ, ಕ್ರೀಡೆಯಲ್ಲಿ ಸೋಲು ಗೆಲುವು ಸರ್ವೆ ಸಾಮಾನ್ಯ  ಆದರೆ ಭಾಗವಹಿಸುವಿಕೆ ಅತ್ಯಂತ ಮುಖ್ಯವಾಗಿರುತ್ತದೆ. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತಮ್ಮ ಆಸಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಇದೇ ಸಂಧರ್ಭದಲ್ಲಿ ಜಿಲ್ಲಾ ಸಂಘದ ಅಧ್ಯಕ್ಷರಾದ ರಾ. ಹ. ತಿಮ್ಮೇನಹಳ್ಳಿ, ಕಾರ್ಯದರ್ಶಿ ಕೆ. ಜಿ. ಮಠಪತಿ, ತಾಲ್ಲೂಕು ಸಂಘದ ಅಧ್ಯಕ್ಷ ಜಗದೀಶ್, ಕಾರ್ಯದರ್ಶಿ ತೇಜಸ್ ಇನ್ನು ಮುಂತಾದವರು ಉಪಸ್ಥಿತ ರಿದ್ದರು.

Related posts

ಶ್ರಾವಣ ಮಾಸದಲ್ಲಿ ಮಾಂಸಾಹಾರ ಸೇವೆನೆ ಮಾಡಲ್ಲ ಯಾಕೆ..? ವೈಜ್ಞಾನಿಕ ಕಾರಣವೇನು ಗೊತ್ತೆ..?

ನ.5 ರಂದು ಬಿ. ಆರ್. ಪಿ. ಶಾಂತಿ ನಗರದ ಬಿಜಿಎಸ್ ಕುವೆಂಪು ಶಾಲೆಯ ನೂತನ ಕಟ್ಟಡ, ಮುಖ್ಯಮಂತ್ರಿಗಳಿಂದ ಉದ್ಘಾಟನೆ.

 ಮೈತ್ರಿ ಮಾತುಕತೆ ಬಹಳ ಅವಶ್ಯಕ: ಸ್ಥಾನಗಳ ಹಂಚಿಕೆ ಬಗ್ಗೆ ಮುಂದೆ ತೀರ್ಮಾನ- ಮಾಜಿ ಸಿಎಂ ಬೊಮ್ಮಾಯಿ ಅಭಿಮತ.