ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಸರ್ಕಾರದ ವಿರುದ್ಧ ನಾವು ಯಾರೂ ಕಮಿಷನ್ ಆರೋಪ ಮಾಡಿಲ್ಲ- ಕ್ಲೀನ್ ಚಿಟ್ ನೀಡಿದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ

ಬೆಂಗಳೂರು:  ಸರ್ಕಾರದ ವಿರುದ್ಧ ನಾವು ಯಾರೂ ಕಮಿಷನ್ ಆರೋಪ ಮಾಡಿಲ್ಲ. ಯಾವ ಸಚಿವರೂ ಕಮಿಷನ್ ಕೇಳಿಲ್ಲ. ಆಗಸ್ಟ್ 31ರೊಳಗೆ ಗುತ್ತಿಗೆದಾರರಿಗೆ ಬಿಲ್ ಪಾವತಿ ಮಾಡಬೇಕು ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಸರ್ಕಾರಕ್ಕೆ ಡೆಡ್ ಲೈನ್ ನೀಡಿದರು.

ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಕೆಂಪಣ್ಣ,  ಏಳು ತಿಂಗಳಿಂದ ಹಣ ಬಾಕಿ ಇದೆ. ಇದರಲ್ಲಿ ಸ್ವಲ್ಪ ಹಣ ಬಿಡುಗಡೆಯಾಗಿದೆ. ನೂರು ಕೋಟಿ ಸಾಲಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಮನವಿ ಮಾಡಿದ್ದೇವೆ. ಅವರು ಎಷ್ಟು ತಿಂಗಳು ಅಂತ ಕೇಳಿದರು. ಅದಕ್ಕೆ ಮೂರು ವರ್ಷದಿಂದ ಅಂತ ಹೇಳಿದ್ದೇವೆ. ಕಂಟ್ರಾಕ್ಟರ್ಸ್ ಸೂಸೈಡ್ ಮಾಡಿಕೊಳ್ಳಬೇಕಾದ ಪರಿಸ್ಥಿತಿ ಬಂದಿದೆ ಅಂತ ಹೇಳಿದ್ದೇವೆ. ಯಾವ ಸಚಿವರು ಕಮಿಷನ್ ಕೇಳಿಲ್ಲ. ನಮಗೆ ರಾಜ್ಯಾದ್ಯಂತ ಮಾಹಿತಿ ಬಂದಿದೆ‌. ಯಾವುದೇ ಗುತ್ತಿಗಾರರು ಬಂದು ನನ್ನ ಬಳಿ ದೂರು ಹೇಳಿಲ್ಲ ಎಂದು ಹೇಳಿದರು.

ಆಗಸ್ಟ್ 31ರೊಳಗೆ ಸರ್ಕಾರ ಹಣ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇವೆ. ಆತ್ಮಹತ್ಯೆ ಮಾತ್ರ ದಾರಿ ಅನ್ನೋ ಪರಿಸ್ಥಿತಿ ಬಂದಿದೆ. ಸಿದ್ದರಾಮಯ್ಯ ಅವರಿಗೆ ನಿನ್ನೆ ಕೂಡ ಪತ್ರ ಬರೆದಿದ್ದೇನೆ. ಎಲ್ಲರನ್ನೂ ಕರೆದು ಸಭೆ ಮಾಡಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ. ಕೆಲ ಬಿಬಿಎಂಪಿ ಗುತ್ತಿಗೆದಾರರು ಬಿಜೆಪಿ ನಾಯಕರ ಬಳಿ ಯಾಕೆ ಹೋದರು ? ನನಗೆ ಅನಿಸುತ್ತಿದೆ ಇದು ರಾಜಕೀಯ ಪ್ರೇರಿತ ಅಂತ  ಎಂದು ಕೆಂಪಣ್ಣ  ತಿಳಿಸಿದರು.

Related posts

ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಖಾಯಂ ಸ್ಥಾನಕ್ಕೆ ಭಾರತ ಆಗ್ರಹ: ಟರ್ಕಿ ಬೆಂಬಲ

ಪ್ರೇರಣಾ ಶಕ್ತಿ ವೃದ್ಧಿಸುವ ಸ್ಕೌಟ್ಸ್ ಗೈಡ್ಸ್-ಡಾ. ವಿಷ್ಣುಮೂರ್ತಿ

ಸಮಾಜದ ಎಲ್ಲಾ ಜಾತಿ-ವರ್ಗದ ಜನಗಳು ಸಂಘಟಿತರಾಗಿ ಸಂವಿಧಾನ ಬದ್ದ ಹಕ್ಕುಗಳನ್ನು ಪಡೆದುಕೊಳ್ಳಬೇಕು-ಸಿಎಂ ಸಿದ್ದರಾಮಯ್ಯ ಕರೆ