ಬೆಂಗಳೂರು: ನಾನು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಆಹಾರ ಖಾತೆ ಸಚಿವ ಕೆ.ಹೆಚ್.ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಚಿವ ಕೆ.ಹೆಚ್.ಮುನಿಯಪ್ಪ, ಸಚಿವ ಸ್ಥಾನ ಬಿಟ್ಟುಕೊಟ್ಟರೂ ಕೂಡ ನಾನು ಶಾಸಕನಾಗಿಯೇ ಇರುತ್ತೇನೆ. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಿದರೆ ನೋಡೋಣ. ಯುವಕರಿಗೆ ಅವಕಾಶ ಸಿಗಲಿ ಎಂಬುದು ವೈಯಕ್ತಿಕ ಅಭಿಪ್ರಾಯ ಎಂದರು.
ಆಹಾರ ಇಲಾಖೆಗೆ ಅನುದಾನದ ಕೊರತೆ ಇಲ್ಲ
ಇನ್ನು ಆಹಾರ ಇಲಾಖೆಗೆ ಯಾವುದೇ ಅನುದಾನದ ಕೊರತೆ ಇಲ್ಲ. ಬಜೆಟ್ ನಲ್ಲಿ ಇಲಾಖೆಗೆ 10 ಸಾವಿರ ಕೋಟಿ ಹಣ ಕೊಟ್ಟಿದ್ದಾರೆ. ಅಕ್ಕಿ ನೀಡುವ ಭರವಸೆ ಕೊಟ್ಟು ನಾವು ಅಧಿಕಾರಕ್ಕೆ ಬಂದಿದ್ದೇವೆ. ಸಿಎಂ ಸಿದ್ದರಾಮಯ್ಯಗೂ ಸಾಕಷ್ಟು ಅನುಭವ ಇದೆ ಎಂದು ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು.