ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸೂಕ್ತ ಪ್ರೋತ್ಸಾಹ ಅಗತ್ಯ-ಸತೀಶ್ ಚಂದ್ರ

ಶಿವಮೊಗ್ಗ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಪ್ರತಿಭಾವಂತರಿದ್ದು, ಸೂಕ್ತ ವೇದಿಕೆಗಳನ್ನು ಒದಗಿಸುವ ಜತೆಯಲ್ಲಿ ಪ್ರತಿಭೆ ಅನಾವರಣಕ್ಕೆ ಪ್ರೋತ್ಸಾಹ ನೀಡಬೇಕು ಎಂದು ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಸತೀಶ್ ಚಂದ್ರ ಹೇಳಿದರು.

ಕೊಮ್ಮನಾಳುವಿನ ಸರ್ಕಾರಿ ಪ್ರೌಢಶಾಲೆಯಲ್ಲಿ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ನೋಟ್ ಪುಸ್ತಕ ಲೇಖನ ಸಾಮಾಗ್ರಿ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಕೊಮ್ಮನಾಳು ಸರ್ಕಾರಿ ಪ್ರೌಢಶಾಲೆ ಶಿವಮೊಗ್ಗ ಜಿಲ್ಲೆಯಲ್ಲಿ ಮಾದರಿ ಶಾಲೆಯಾಗಿದ್ದು, ಪ್ರತಿ ವರ್ಷ ಉತ್ತಮ ಫಲಿತಾಂಶ ನೀಡುವುದರ ಜತೆಯಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುವಲ್ಲಿ ಇಂಟರಾಕ್ಟ್ ಕ್ಲಬ್ ಸಹಕಾರಿಯಾಗುತ್ತದೆ. ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಲು ಕಾರಣವಾಗುತ್ತದೆ ಎಂದು ಹೇಳಿದರು.

ಪ್ರೌಢಶಾಲೆ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಶಬ್ಧಕೋಶ ಹಾಗೂ ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ನೋಟ್ ಪುಸ್ತಕ, ಲೇಖನ ಸಾಮಾಗ್ರಿಗಳನ್ನು ರೋಟರಿ ಮುಖಾಂತರ ನೀಡಿದರು.

ಇದೇ ಸಂದರ್ಭದಲ್ಲಿ ಇಂಟರಾಕ್ಟ್ ಕ್ಲಬ್ ನೂತನ ಅಧ್ಯಕ್ಷರಾಗಿ ಪ್ರೀತಿ, ಕಾರ್ಯದರ್ಶಿಯಾಗಿ ಶ್ರೇಯಾ ಪದಾಧಿಕಾರಿಗಳೊಂದಿಗೆ ಅಧಿಕಾರ ಸ್ವೀಕರಿಸಿದರು. ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮುಖ್ಯಶಿಕ್ಷಕಿ ಜ್ಯೋತಿ ಮಾತನಾಡಿ, ಸರ್ಕಾರದ ಜತೆಯಲ್ಲಿ ಸಂಘ ಸಂಸ್ಥೆಗಳು ನೀಡುವ ನೆರವು ಅತ್ಯಂತ ಉಪಯುಕ್ತ ಆಗುತ್ತದೆ. ಈಗಾಗಲೇ ರೋಟರಿ ಸಂಸ್ಥೆಯು ನಮ್ಮ ಶಾಲೆಯನ್ನು ದತ್ತು ಪಡೆದು ಅಭಿವೃದ್ಧಿ ಕಾರ್ಯಗಳನ್ನು ನಡೆಸಿಕೊಂಡು ಬಂದಿದೆ ಎಂದು ಹೇಳಿದರು.

ಸಂಯೋಜಕ ರಾಘವೇಂದ್ರ, ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಕಿಶೋರ್ ಕುಮಾರ್, ಶಿಕ್ಷಕರು, ಗ್ರಾಮಸ್ಥರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ವಿಪಕ್ಷಗಳು ಸರ್ಕಾರ ಬೀಳಿಸುವ ಚಿಂತನೆ ಬಿಟ್ಟು ಆಡಳಿತ ಪಕ್ಷದೊಂದಿಗೆ ಸಹಕರಿಸಲಿ- ಸಚಿವ ಮಧು ಬಂಗಾರಪ್ಪ

ಆಗಸ್ಟ್ ಅಂತ್ಯದಲ್ಲಿ ಗೃಹಲಕ್ಷ್ಮೀ, ಡಿಸೆಂಬರ್ ನಂತರ ಯುವ ನಿಧಿ ಯೋಜನೆ ಜಾರಿ..

ಅತಿಥಿ ಉಪನ್ಯಾಸಕರ ಸೇವಾ ಖಾಯಾಂತಿಗೆ ಆಗ್ರಹಿಸಿ ಪ್ರತಿಭಟನೆ , ಮನವಿ ಸಲ್ಲಿಕೆ.