ಕನ್ನಡಿಗರ ಪ್ರಜಾನುಡಿ
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಕನ್ನಡ ಸೇರಿ 15 ಪ್ರಾದೇಶಿಕ ಭಾಷೆಗಳಲ್ಲಿ ಕೇಂದ್ರ ಸರ್ಕಾರಿ ನೇಮಕಾತಿ ಪರೀಕ್ಷೆಗೆ ಅಸ್ತು..

ನವದೆಹಲಿ: ಕೇವಲ ಹಿಂದಿ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಮಾತ್ರ ನಡೆಯುತ್ತಿದ್ದ ಕೇಂದ್ರ ನೇಮಕಾತಿ ಪರೀಕ್ಷೆಗಳು ಈಗ ಪ್ರಾದೇಶಿಕ ಭಾಷೆಗಳಲ್ಲೂ ನಡೆಯಲಿವೆ. ಹೌದು, ಭಾಷೆ ಸಮಸ್ಯೆಯಿಂದ ಯುವಕರು ಉದ್ಯೋಗ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಕೇಂದ್ರ ಸರ್ಕಾರ 15 ಪ್ರಾದೇಶಿಕ ಭಾಷೆಗಳಲ್ಲಿ ಸರ್ಕಾರಿ ಉದ್ಯೋಗ ನೇಮಕಾತಿ ಪರೀಕ್ಷೆ ನಡೆಸುವ ಮಹತ್ವದ ತೀರ್ಮಾನ ಕೈಗೊಂಡಿದೆ.

ಕೇವಲ ಹಿಂದಿ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಮಾತ್ರ ಪರೀಕ್ಷೆ ನಡೆಯುತ್ತಿದ್ದರಿಂದ ಸಾಕಷ್ಟು ಹುದ್ದೆ ಆಕಾಂಕ್ಷಿ ಯುವಕರು ವಂಚಿತರಾಗುತ್ತಿದ್ದರು. ಹೀಗಾಗಿ ಪ್ರಾದೇಶಿಕ ಭಾಷೆಗಳಲ್ಲೂ ಕೇಂದ್ರ ನೇಮಕಾತಿ ಪರೀಕ್ಷೆಗಳನ್ನ ನಡೆಸುವಂತೆ ಪ್ರಬಲ ಒತ್ತಾಯ ಕೇಳಿ ಬಂದಿತ್ತು.

ಇದೀಗ ಇಂಗ್ಲಿಷ್, ಹಿಂದಿ ಜೊತೆಗೆ ಕನ್ನಡ, ಅಸ್ಸಾಮಿ, ಬಂಗಾಳಿ, ಗುಜರಾತಿ, ಮರಾಠಿ, ಮಲಯಾಳಂ, ಒಡಿಯಾ, ತೆಲುಗು, ಉರ್ದು, ತಮಿಳು, ಪಂಜಾಬಿ, ಮಣಿಪುರಿ, ಕೊಂಕಣಿ ಭಾಷೆಗಳಲ್ಲಿಯೂ ನೇಮಕಾತಿ ಪರೀಕ್ಷೆ ನಡೆಸಲಾಗುವುದು.

ಸಿಬ್ಬಂದಿ, ಸಾರ್ವಜನಿಕ ಕುಂದು ಕೊರತೆಗಳು ಮತ್ತು ಪಿಂಚಣಿ ಸಚಿವಾಲಯಕ್ಕೆ ಸಂಬಂಧಿಸಿದ 14ನೇ ಹಿಂದಿ ಸಲಹಾ ಸಮಿತಿ ಸಭೆಯನ್ನುದ್ದೇಶಿ ಮಾತನಾಡುವ ಸಂದರ್ಭದಲ್ಲಿ ಪ್ರಧಾನಿ ಕಾರ್ಯಾಲಯದ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಈ ಮಾಹಿತಿ ನೀಡಿದ್ದಾರೆ.

ಕೇಂದ್ರದ ಈ ನಿರ್ಧಾರದಿಂದ ಲಕ್ಷಾಂತರ ಉದ್ಯೋಗ ಆಕಾಂಕ್ಷಿಗಳಿಗೆ ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆ ಬರೆಯಲು ಸಾಧ್ಯವಿದ್ದು, ಸರ್ಕಾರಿ ನೌಕರರಿಗೆ ಆಯ್ಕೆಯಾಗುವ ಸಾಧ್ಯತೆ ಹೆಚ್ಚಿಸಲಿದೆ ಎಂದು ಹೇಳಲಾಗಿದೆ.

 

Related posts

ನಾಲ್ಕು ತಲೆಮಾರಿನಿಂದಲೂ ಗಣೇಶ ಮೂರ್ತಿ ತಯಾರಿ: ವಿದೇಶಕ್ಕೂ ತಲುಪಿದ ಗಣಪನ ಮೂರ್ತಿ: ಈ ಅಪರೂಪ ಕುಟುಂಬದ ಶ್ರದ್ಧೆ ಮತ್ತು ಭಕ್ತಿಗೆ ಒಂದು ನಮನ.

ನವರಾತ್ರಿ ಹಬ್ಬ ಮುಗಿಯುತ್ತಿದ್ದಂತೆ ಗಗನಕ್ಕೇರಿದ ಈರುಳ್ಳಿ ಬೆಲೆ: ದರ ನಿಯಂತ್ರಣಕ್ಕೆ ಸರಕಾರದ ಕಸರತ್ತು.

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ.