ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ನಿಸ್ವಾರ್ಥ ಮನೋಭಾವವನ್ನು ಬೆಳೆಸಿಕೊಳ್ಳಲು ಎನ್‍ಎಸ್‍ಎಸ್ ಸಹಕಾರಿಯಾಗಿದೆ-ಡಾ. ನಾಗರಾಜ್ ಪರಿಸರ

ಶಿವಮೊಗ್ಗ: ನಿಸ್ವಾರ್ಥ ಮನೋಭಾವವನ್ನು ಬೆಳೆಸಿಕೊಳ್ಳಲು ಎನ್‍ಎಸ್‍ಎಸ್ ಸಹಕಾರಿಯಾಗಿದೆ ಎಂದು ಕುವೆಂಪು ವಿವಿ ಎನ್‍ಎಸ್‍ಎಸ್ ಸಂಯೋಜನಾಧಿಕಾರಿ ಡಾ. ನಾಗರಾಜ್ ಪರಿಸರ ಅಭಿಪ್ರಾಯಪಟ್ಟರು.
ಅವರು ಸಹ್ಯಾದ್ರಿ ಕಲಾ ಕಾಲೇಜಿನ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆಯ 2022-23ನೇ ಸಾಲಿನ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಇಂದು ನಾವೆಲ್ಲರೂ ಹೆಚ್ಚು ಹೆಚ್ಚು ಸ್ವಾರ್ಥಿಗಳಾಗುತ್ತಿದ್ದೇವೆ. ನಿಸ್ವಾರ್ಥ ಮನೋಭಾವ ಎನ್ನುವುದು ಮರೀಚಿಕೆಯಾಗಿದೆ. ವಿದ್ಯಾರ್ಥಿಗಳು ಕಲಿಕೆಯ ಹಂತದಲ್ಲಿ ನಿಸ್ವಾರ್ಥ ಮನೋಭಾವ ರೂಡಿಸಿಕೊಳ್ಳಲು ಎಸ್‍ಎಸ್‍ಎಸ್ ಒಂದು ಉತ್ತಮ ವೇದಿಕೆಯಾಗಿದೆ ಎಂದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಡಾ.ಕೆ.ಜಿ ವೆಂಕಟೇಶ್, ವಿದ್ಯಾರ್ಥಿಗಳು ಕೇವಲ ಅಕ್ಷರ ಜ್ಞಾನ ಪಡೆಯುವುದು ಮಾತ್ರ ಮುಖ್ಯವಲ್ಲ ಜೊತೆಗೆ ಸಾಮಾಜಿಕ ಪ್ರಜ್ಞೆಯನ್ನು ರೂಡಿಸಿಕೊಳ್ಳಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ಪ್ರಭಾರ ಪ್ರಾಚಾರ್ಯ ಡಾ. ಟಿ. ಅವಿನಾಶ್ ಅಧ್ಯಕ್ಷತೆ ವಹಿಸಿದ್ದರು. ಎನ್‍ಎಸ್‍ಎಸ್ ಸಮಿತಿ ಸಂಚಾಲಕ ಡಾ. ಕೆ.ಎನ್. ಮಂಜುನಾಥ್, ಕಾರ್ಯಕ್ರಮ ಅಧಿಕಾರಿಗಳಾದ ಡಾ. ಪ್ರಕಾಶ್ ಮರ್ಗನಳ್ಳಿ ಡಾ. ಮುದುಕಪ್ಪ, ಕನ್ನಡ ಪ್ರಾಧ್ಯಾಪಕರಾದ ಡಾ. ಹಾಲಮ್ಮ ಎಂ., ಲವ ಜಿ.ಆರ್ . ಉಪಸ್ಥಿತರಿದ್ದರು.

Related posts

ಲಯನ್ಸ್ ಸಂಸ್ಥೆ ಸೇವೆ ಎಲ್ಲರಿಗೂ ಸಲ್ಲಬೇಕು-ಲಯನ್ಸ್  ಜಿಲ್ಲಾ ಗವರ್ನರ್ ನೆರಿ ಕರ್ನಲ್ಲಿಯೋ

ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ನಟ ಪ್ರೇಮ್..

ರಾಜ್ಯದಲ್ಲಿ ಶಕ್ತಿ ಯೋಜನೆಯಡಿ: 46 ಕೋಟಿ ಜನ ಪ್ರಯಾಣ- ಸಾರಿಗೆ ಸಚಿವ ರಾಮಲಿಂಗರೆಡ್ಡಿ