ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಡಿಪ್ಲೋಮಾ, ಪದವೀಧರರಿಗೆ ಸರ್ಕಾರದಿಂದ ಸಿಹಿಸುದ್ದಿ: ನವಂಬರ್ ನಲ್ಲೇ ಯುವನಿಧಿ ಜಾರಿ.

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳಲ್ಲಿ ಈಗಾಗಲೇ ನಾಲ್ಕು ಯೋಜನೆಗಳನ್ನ ಜಾರಿಗೊಳಿಸುತ್ತಿದ್ದು ಐದನೇ ಗ್ಯಾರಂಟಿ ಯುವನಿಧಿ ಯೋಜನೆ ಡಿಸಂಬರ್ ವೇಳೆಗೆ ಜಾರಿಯಾಗಲಿದೆ ಎನ್ನಲಾಗಿತ್ತು. ಆದರೆ ಯುವನಿಧಿ ಯೋಜನೆ ನವೆಂಬರ್ ಕೊನೆ ವಾರದಲ್ಲಿ ಜಾರಿಯಾಗಲಿದೆಯಂತೆ.

ಹೌದು ಈ ಮೂಲಕ ಸರ್ಕಾರ ಡಿಪ್ಲೋಮಾ, ಪದವೀಧರರಿಗೆ ಸಿಹಿಸುದ್ದಿ ನೀಡಿದ್ದು, ನಿರುದ್ಯೋಗ ಭತ್ಯೆ ನೀಡುವ ಯುವ ನಿಧಿ ಯೋಜನೆಯನ್ನು ನವೆಂಬರ್ ಕೊನೆ ವಾರದಲ್ಲಿ ಜಾರಿಗೆ ತರಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ.

ನಿರುದ್ಯೋಗಿ ಡಿಪ್ಲೋಮಾ, ಪದವೀಧರರಿಗೆ ಮಾಸಿಕ ಸಹಾಯಧನ ನೀಡುವ ಯುವನಿಧಿ ಯೋಜನೆಗೆ ನವೆಂಬರ್ ಕೊನೆಯ ವಾರದಲ್ಲಿ ಮೈಸೂರು ನಗರದಲ್ಲಿ ಚಾಲನೆ ನೀಡುವ ಬಗ್ಗೆ ಮೈಸೂರು ಜಿಲ್ಲೆ ಶಾಸಕರ ಸಭೆಯಲ್ಲಿ ಚರ್ಚಿಸಲಾಗಿದೆ.

ರಾಜ್ಯ ಸರ್ಕಾರದ 5 ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಯನ್ನು ಡಿಸೆಂಬರ್ ಅಥವಾ ಜನವರಿಯಲ್ಲಿ ಚಾಲನೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಿರುದ್ಯೋಗಿ ಡಿಪ್ಲೋಮಾ, ಪದವೀಧರರಿಗೆ 2 ವರ್ಷಗಳವರೆಗೆ ಅಂದರೆ 24 ತಿಂಗಳು ಡಿಪ್ಲೋಮಾ ಮಾಡಿದವರಿಗೆ 1,500 ರೂ. ಹಾಗೂ ಪದವೀಧರರಿಗೆ 3000 ರೂ. ನಿರುದ್ಯೋಗ ಭತ್ಯೆ ನೀಡುವ ಯುವನಿಧಿ ಯೋಜನೆಯನ್ನು ನವೆಂಬರ್ ಕೊನೆ ವಾರದಲ್ಲಿ ಜಾರಿಗೆ ತರಲು ಸಿದ್ಧತೆ ನಡೆಸಲಾಗಿದೆ.

ವೃತ್ತಿಪರ ಕೋರ್ಸ್ ಒಳಗೊಂಡು ಎಲ್ಲಾ ಪದವೀಧರರರಿಗೆ ಪ್ರತಿ ತಿಂಗಳು 3,000 ರೂ. ಹಾಗೂ ಡಿಪ್ಲೊಮಾ ಪದವೀಧರರಿಗೆ ಮಾಸಿಕ 1,500 ರೂ. ನಿರುದ್ಯೋಗ ಭತ್ಯೆ ಸಿಗಲಿದೆ.

 

Related posts

ಸಂವಿಧಾನ ಪ್ರತಿಯ ಪ್ರಸ್ತಾವನೆಯಿಂದ ಜಾತ್ಯತೀತ ಮತ್ತು ಸಮಾಜವಾದ ಪದ ಕಿತ್ತುಹಾಕಿರುವುದು ದೇಶದ್ರೋಹ ಕೃತ್ಯ-ಸಿಎಂ ಸಿದ್ಧರಾಮಯ್ಯ ಕಿಡಿ.

‘ರಸ್ತೆ ಬದಿ ಇಡ್ಲಿ ಮಾರುತ್ತಿದ್ದಾರೆ ಚಂದ್ರಯಾನ-3’ ತಂತ್ರಜ್ಞ. ಕಾರಣವೇನು..?

ಭಾರತದ ಮಾರಕ ಬೌಲಿಂಗ್ ಗೆ ನಲುಗಿದ ಲಂಕಾ: ಟೀಂ ಇಂಡಿಯಾ ಮುಡಿಗೆ ಏಷ್ಯಾಕಪ್ ಕಿರಿಟ..!