ಮಂಡ್ಯ,: ರಾಜ್ಯ ಸರ್ಕಾರ ತಮಿಳುನಾಡಿಗೆ ಹೆಚ್ಚುವರಿ ನೀರು ಹರಿಸಿದ ಹಿನ್ನೆಲೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 107 ಅಡಿಗೆ ಕುಸಿದಿದೆ.
ರಾಜ್ಯ ಸರ್ಕಾರ ತಮಿಳುನಾಡಿಗೆ ಹೆಚ್ಚುವರಿ ನೀರು ಹರಿಸುತ್ತಿದೆ. ಕೆಆರ್ಎಸ್ ಜಲಾಶಯದ ಗರಿಷ್ಠ ಮಟ್ಟ 124.80 ಅಡಿ. ಸದ್ಯ ಈಗ 107 ಅಡಿಗೆ ಕುಸಿದಿದೆ. ಕೆಆರ್ ಎಸ್ ಜಲಾಶಯ ಭರ್ತಿಯಾಗುವ ಮುನ್ನವೇ ತಮಿಳುನಾಡಿಗೆ ಸರ್ಕಾರ ನೀರು ಹರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಗಿದೆ.