ಬೆಂಗಳೂರು: ತಮ್ಮ ಲೋಪ ಮುಚ್ಚಿಕೊಳ್ಳಲು ಬಿಜೆಪಿ ಶಾಸಕರನ್ನು ಸೇರಿಸಿಕೊಳ್ತಿದ್ದಾರೆ’ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಡಿ.ಕೆ.ಶಿವಕುಮಾರ್ ತಿರುಗೇಟು ಕೊಟ್ಟಿದ್ದಾರೆ. ಕಾಂಗ್ರೆಸ್ ಪಕ್ಷ ಸಮುದ್ರ ಇದ್ದಂತೆ. ಯಾರು ಭವಿಷ್ಯವನ್ನು ನಿರ್ಮಾಣ ಮಾಡಿಕೊಳ್ಳಬೇಕು. ದೇಶ ಉಳಿಸಬೇಕು ಅಂತಾ ತೀರ್ಮಾನ ಮಾಡಿದ್ದಾರೆ, ಒಳ್ಳೆಯದು. ಬೇರೆ ರಾಜ್ಯಗಳಲ್ಲಿ ಬಿಜೆಪಿ ರಾಜಕಾರಣ ಮಾಡಿದಾಗ ಏನಾಗಿತ್ತು? ಮಧ್ಯಪ್ರದೇಶ, ಮಹಾರಾಷ್ಟ್ರ, ಕರ್ನಾಟಕದಲ್ಲಿ BJP ಮಾಡಿದ್ದು ಸರಿನಾ? ಅವರ ಅನುಕೂಲಕ್ಕೆ ತಕ್ಕಂತೆ ಅವರು ತೀರ್ಮಾನ ತೆಗೆದುಕೊಳ್ತಾರೆ. ನಾವು ನೀವು ನಿರ್ಬಂಧ ಮಾಡಲು ಆಗುತ್ತಾ ಎಂದು ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.
ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಆಗಸ್ಟ್ 23 ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗೆ ಮುಂದಾಗಿರುವ ಬಿಜೆಪಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಟಾಂಗ್ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆಗೆ ಅವಕಾಶವಿದೆ. ಆದರೆ ಮೊದಲು ಬಿಜೆಪಿ ನಾಯಕ ಯಾರೆಂದು ಹೇಳಲಿ. ನಂತರ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಲಿ ಎಂದು ಲೇವಡಿ ಮಾಡಿದರು.
ಶಾಸಕರ ಘರ್ ವಾಪಸಿ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಮಹಾರಾಷ್ಟರ ಮಧ್ಯ ಪ್ರದೇಶದಲ್ಲಿ ಬಿಜೆಪಿ ಮಾಡಿದ್ದು ಸರಿಯಾ..? ಬಿಜೆಪಿಯವರು ತಮ್ಮ ಅನುಕೂಲಕ್ಕೆ ತೀರ್ಮಾನ ಮಾಡಿಕೊಳ್ಳುತ್ತಾರೆ ಎಂದರು.