ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಇಂದು ಸಹ ತಮಿಳುನಾಡಿಗೆ ಹರಿದ ಕಾವೇರಿ ನೀರು: ರೈತರಲ್ಲಿ ಆತಂಕ.

ಮಂಡ್ಯ,:  ರಾಜ್ಯದಲ್ಲಿ ಸರಿಯಾಗಿ ಮಳೆಯಾಗದೇ ಯಾವುದೇ ಡ್ಯಾಂಗಳು ಭರ್ತಿಯಾಗಿಲ್ಲ. ಈ ಮಧ್ಯೆಯೂ ಕೆಆರ್ ಎಸ್ ಜಲಾಶಯದಿಂದ ತಮಿಳುನಾಡಿಗೆ ಕಾವೇರಿ ನೀರು ಇಂದು ಸಹ ಹರಿದಿದೆ.

ಕೆಆರ್ ಎಸ್ ಡ್ಯಾಂ ಭರ್ತಿಯಾಗದಿದ್ದರೂ ಸಹ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ವಿರೋಧಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರದ್ಧ ವಿವಿಧ ರೈತ ಸಂಘಟನೆಗಳು ಮತ್ತು ಬಿಜೆಪಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೂ ಸಹ ತಮಿಳುನಾಡಿಗೆ ನೀರುಬಿಡುಗಡೆ ಮುಂದುವರೆದಿದೆ.

ಇಂದು 10841 ಕ್ಯೂಸೆಕ್ ನೀರನ್ನ ತಮಿಳುನಾಡಿಗೆ ಹರಿಸಲಾಗಿದೆ. ನಿನ್ನೆ 12,631 ಕ್ಯೂಸೆಕ್ ನೀರು ಹರಿಸಲಾಗಿತ್ತು. ಇಂದು 2 ಸಾವಿರ ಕ್ಯೂಸೆಕ್ ಕಡಿಮೆ ನೀರು ಹರಿಸಲಾಗಿದೆ. ಇನ್ನು ನಿನ್ನೆ 105 ಅಡಿ ಇದ್ದ ಕೆಆರ್ ಎಸ್ ಡ್ಯಾಂ ನೀರಿನ ಮಟ್ಟ ಇಂದು 104ಕ್ಕೆ ಕುಸಿದಿದೆ. ಈ ಹಿನ್ನೆಲೆಯಲ್ಲಿ  ರಾಜ್ಯದಲ್ಲಿ ಕಾವೇರಿ ಕೊಳ್ಳದ ರೈತರಿಗೆ ಕೃಷಿಗೆ ನೀರು ಸಿಗುತ್ತೋ ಇಲ್ಲವೋ ಎಂಬ ಆತಂಕ ಶುರುವಾಗಿದೆ.

Related posts

ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ: ಪಕ್ಷಬೇಧ ಮರೆತು ಶಿವಮೊಗ್ಗದ ಶಾಂತಿಗಾಗಿ ಸಹಕರಿಸಬೇಕು-ಸಚಿವ ಮಧು ಬಂಗಾರಪ್ಪ

ಕಾಂಗ್ರೆಸ್ ಸೇರ್ಪಡೆಗೆ ಮುಖಂಡರ ಒಲವು:  ಆಪರೇಷನ್ ಹಸ್ತ ಅವಶ್ಯಕತೆ ಇಲ್ಲ-ಡಿಸಿಎಂ ಡಿಕೆ ಶಿವಕುಮಾರ್ ಟಾಂಗ್

ಯಾವುದೇ ಜೆಡಿಎಸ್ ಶಾಸಕರು ಪಕ್ಷ ಬಿಟ್ಟು ಹೋಗಲ್ಲ –ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ