ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ವಿರೋಧಿಸಿ ಕರುನಾಡು ಸಂರಕ್ಷಣಾ ವೇದಿಕೆ ಪ್ರತಿಭಟನೆ.

ಶಿವಮೊಗ್ಗ: ತಮಿಳುನಾಡಿಗೆ ಕಾವೇರಿ ನದಿ ನೀರು ಹಾಯಿಸುತ್ತಿರುವುದನ್ನು ವಿರೋಧಿಸಿ ಕರುನಾಡು ಸಂರಕ್ಷಣಾ ವೇದಿಕೆ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಇಂದು ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಕರ್ನಾಟಕ ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಕೊಟ್ಟಿರುತ್ತದೆ. ಆದರೆ ನಮ್ಮ ರಾಜ್ಯದಲ್ಲಿ ಈಗಾಗಲೇ ಬರಗಾಲ ಸಂಭವಿಸಿದ್ದು, ರಾಜ್ಯದ ರೈತರಿಗೆ ಸಕಾಲದಲ್ಲಿ ಮಳೆ ಬಾರದೇ ರೈತರ ಬೆಳೆಗಳು ಒಣಗಿರುತ್ತವೆ. ಆದರೆ ನಮ್ಮ ರಾಜ್ಯದ ಮುಖ್ಯಮಂತ್ರಿಗಳು ರಾಜ್ಯದ ರೈತರ ಹಿತ ಕಾಪಾಡುವುದನ್ನು ಬಿಟ್ಟು ತಮಿಳು ನಾಡಿಗೆ ನೀರನ್ನು ಕೊಟ್ಟಿರುತ್ತಾರೆ ಎಂದು ಆಗ್ರಹಿಸಿದರು.
ಕಾವೇರಿ ನದಿ ನೀರು ಬೆಂಗಳೂರು ನಗರಕ್ಕೆ ಮತ್ತು ಇತರೆ 2-3 ಜಿಲ್ಲೆಗಳಿಗೆ ಕುಡಿಯುವ ನೀರಿಗೆ ಆಸರೆ ಆಗಿದೆ. ಮಳೆ ಆಗದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯದ ಜನತೆಗೆ ಕುಡಿಯಲು ನೀರಿಲ್ಲದಂತೆ ಪರದಾಡುವ ಪರಿಸ್ಥಿತಿ ಬರುವ ಸಾಧ್ಯತೆ ಇರುತ್ತದೆ. ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ಇದೆ ಎಂದು ಕೇಂದ್ರಕ್ಕೆ ಮನವಿ ಸಲ್ಲಿಸಿರುವುದಾಗಿ ಮುಖ್ಯಮಂತ್ರಿಗಳು ಹೇಳುತ್ತಿದ್ದಾರೆ. ಬರಗಾಲವಿದ್ದರೂ ಸಹ ಕಾವೇರಿ ನದಿ ನೀರನ್ನು ತಮಿಳು ನಾಡಿಗೆ ಬಿಡುವ ಉದ್ದೇಶವಾದರೂ ಏನಿತ್ತು? ಎಂಬುದನ್ನು ರಾಜ್ಯದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರು ಸಾರ್ವಜನಿಕರಿಗೆ ಉತ್ತರ ಕೊಡಬೇಕು ಎಂದು ಒತ್ತಾಯಿಸಿದರು.

ರಾಜ್ಯ ಸರ್ಕಾರ ಮುಂಬರುವ ಲೋಕಸಭಾ ಚುನಾವಣೆಗೆ ತಮಿಳು ನಾಡಿನ ಲೋಕಸಭಾ ಸದಸ್ಯರ ಬೆಂಬಲ ಪಡೆಯುವ ಉದ್ದೇಶದಿಂದ ತಮಿಳುನಾಡಿಗೆ ನೀರನ್ನು ಹರಿಸಿರುವ ಸಾಧ್ಯತೆ ಇದೆ. ಇದನ್ನು ನಾವೆಲ್ಲರೂ ತೀವ್ರವಾಗಿ ವಿರೋಧಿಸುತ್ತೇವೆ. ರಾಜ್ಯ ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ರಾಜ್ಯದ ಜನತೆಯ ಹಾಗೂ ರೈತರ ಹಿತ ಕಾಪಾಡುವ ಸದುದ್ದೇಶದಿಂದ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕೆಂದು ಒತ್ತಾಯಿಸಿ.
ಈಗಾಗಲೇ ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಕೊಟ್ಟಿರುವ ವಿಚಾರದಲ್ಲಿ ಸಂಸದೆ ಸುಮಲತಾರವರು ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಹೋರಾಟವನ್ನು ನಡೆಸಿರುತ್ತಾರೆ. ಅವರ ಹೋರಾಟಕ್ಕೆ ಹಾಗೂ ರಾಜ್ಯ ರೈತ ಸಂಘದ ಹೋರಾಟಕ್ಕೆ ಕರುನಾಡು ಸಂರಕ್ಷಣಾ ವೇದಿಕೆ ಸಂಪೂರ್ಣ ಬೆಂಬಲ ನೀಡುತ್ತದೆ. ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ನಿಲ್ಲಿಸಬೇಕು. ಇಲ್ಲವಾದಲ್ಲಿ ಹೋರಾಟ ತೀವ್ರ ಗೊಳಿಸಬೇಕಾತ್ತದೆ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷ ಶಿವಮೂರ್ತಿ ಎಸ್.ಪಿ. ಶಿವಣ್ಣ, ಕೂಡ್ಲು ಶ್ರೀಧರ್, ಹೇಮಂತ್ ಕುಮಾರ್, ಮೂರ್ತಿ ಸಿ., ಎಂ. ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.

Related posts

ದಿನಕ್ಕೆ ಕನಿಷ್ಟ 4 ಸಾವಿರ ಹೆಜ್ಜೆ ಹಾಕಿದ್ರೆ ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನ ಗೊತ್ತೆ..?

ನನ್ನನ್ನು ಪಕ್ಷದಿಂದ ಓಡಿಸಲು ರೆಡಿಯಾಗಿದ್ದಾರೆ- ಸ್ವಪಕ್ಷ ಬಿಜೆಪಿ ವಿರುದ್ಧವೇ ತಿರುಗಿಬಿದ್ದ ಶಾಸಕ ಎಸ್.ಟಿ ಸೋಮಶೇಖರ್.

ಲೋಕಸಭೆ ಚುನಾವಣೆ: ಬಿಜೆಪಿ ಮತದಾರ ಚೇತನ ಮಹಾಭಿಯಾನ ಆಯೋಜನೆ-ಸದಸ್ಯ ಬಿ.ವೈ. ರಾಘವೇಂದ್ರ