ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷ ಸಭೆ ಆರಂಭ: ಡಿಸಿಎಂ ಡಿ.ಕೆ ಶಿವಕುಮಾರ್, ಮಾಜಿ ಸಿಎಂಗಳು, ಸಚಿವರು ಭಾಗಿ.

ಬೆಂಗಳೂರು: ಕಾವೇರಿ, ಮೇಕೆದಾಟು ಮತ್ತು ಮಹಾದಾಯಿ ಜಲ ವಿವಾದಗಳ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ವಪಕ್ಷ ಸಭೆ ಆರಂಭವಾಗಿದೆ.

ಸಭೆಯಲ್ಲಿ ಜಲ ಸಂಪನ್ಮೂಲ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್‌, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಬಿ.ಎಸ್. ಯಡಿಯೂರಪ್ಪ, ಹೆಚ್.ಡಿ. ಕುಮಾರಸ್ವಾಮಿ, ಜಗದೀಶ ಶೆಟ್ಟರ್, ಡಿ.ವಿ. ಸದಾನಂದಗೌಡ, ವೀರಪ್ಪ ಮೊಯ್ಲಿ, ಸಚಿವರಾದ ಹೆಚ್‌.ಕೆ. ಪಾಟೀಲ್, ಚಲುವರಾಯಸ್ವಾಮಿ, ಡಾ. ಜಿ. ಪರಮೇಶ್ವರ್, ಕೆ.ಜೆ. ಜಾರ್ಜ್‌, ಕೃಷ್ಣ ಬೈರೇಗೌಡ, ನವದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಎಲ್ಲ ಪಕ್ಷಗಳ ಶಾಸಕರು ಸಂಸದರು, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್‌ ಸಿಂಗ್‌, ಅಡ್ವೊಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ, ಹಿರಿಯ ವಕೀಲರಾದ ಮೋಹನ್‌ ಕಾತರಕಿ ಮತ್ತು ಇತರ ಕಾನೂನು ತಜ್ಞರು, ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದಾರೆ.

ರಾಜ್ಯದಲ್ಲಿ ಸರಿಯಾಗಿ ಮಳೆಯಾಗದೆ ಬರದ ಛಾಯೆ ಆವರಿಸುತ್ತಿದ್ದು ಆದರೂ ಸಹ ಕೆಆರ್ ಎಸ್ ಡ್ಯಾಂನಿಂದ ತಮಿಳುನಾಡಿಗೆ ಸರ್ಕಾರ ಕಾವೇರಿ ನೀರು ಹರಿಸಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ನಡೆಯನ್ನ ಖಂಡಿಸಿ ರೈತರಪರ ಸಂಘಟನೆಗಳು, ವಿಪಕ್ಷಗಳು ಪ್ರತಿಭಟನೆ ನಡೆಸಿದ್ದವು.

Related posts

ರಾಜ್ಯದಲ್ಲಿ 5 ದಿನಗಳ ಕಾಲ ಮಳೆ : ಹವಮಾನ ಇಲಾಖೆ ಮುನ್ಸೂಚನೆ.

ಗ್ಯಾರಂಟಿಗಳಲ್ಲೇ ಮುಳುಗಿರುವ ರಾಜ್ಯ ಸರ್ಕಾರ ರೈತರನ್ನು ಮರೆತಿದೆ-ಕೆ.ಎಸ್. ಈಶ್ವರಪ್ಪ

ನ.05ರಿಂದ ರಾಜ್ಯದ ವಿವಿಧೆಡೆ ಬರ ಅಧ್ಯಯನ ಪ್ರವಾಸ- ಮಾಜಿ ಸಿಎಂ ಬಿಎಸ್ ವೈ