ಕನ್ನಡಿಗರ ಪ್ರಜಾನುಡಿ
ಕ್ರೈಮ್ದೇಶಪ್ರಧಾನ ಸುದ್ದಿಮುಖ್ಯಾಂಶಗಳು

ರೈಲು ಬೋಗಿಯಲ್ಲಿ ಅಗ್ನಿ ಅವಘಡ: 10 ಮಂದಿ ಪ್ರಯಾಣಿಕರು ಸಾವು: 20ಕ್ಕೂ ಹೆಚ್ಚು ಮಂದಿಗೆ ಗಾಯ.

ಚೆನ್ನೈ:   ಪ್ಯಾಸೆಂಜರ್ ರೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿ 10 ಪ್ರಯಾಣಿಕರು ಮೃತಪಟ್ಟಿರುವ  ಘಟನೆ ತಮಿಳುನಾಡಿನ ಮದುರೈ ರೈಲು ನಿಲ್ದಾಣದಲ್ಲಿ ನಡೆದಿದೆ.

ಇಂದು ಮುಂಜಾನೆ 5.15ಕ್ಕೆ ಈ ಘಟನೆ ಸಂಭವಿಸಿದೆ.  ಲಖನೌ-ರಾಮೇಶ್ವರಂ ಎಕ್ಸ್‌ ಪ್ರೆಸ್‌ ರೈಲಿನ ಬೋಗಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು 10 ಮಂದಿ ಸಾವನ್ನಪ್ಪಿದರೇ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ರೈಲಿನ ಬೋಗಿಯಲ್ಲಿ  50ಕ್ಕೂ  ಹೆಚ್ಚು ಪ್ರಯಾಣಿಕರಿದ್ದರು. ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಈ ಘಟನೆ ಸಂಭವಿಸಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಮೃತಪಟ್ಟವರಲ್ಲಿ ಆರು ಮಂದಿ ಉತ್ತರ ಪ್ರದೇಶದವರಾಗಿದ್ದು, ಅವರು ರಾಮೇಶ್ವರಂಗೆ ತೀರ್ಥಯಾತ್ರೆ ಸಲುವಾಗಿ ತೆರಳಿದ್ದರು. ರೈಲು ಬೋಗಿಗೆ ಅಕ್ರಮವಾಗಿ ಎಲ್ಪಿಜಿ ಸಿಲಿಂಡರ್ ತಂದು ಟೀ ಮಾಡುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ದುರ್ಘಟನೆಯಲ್ಲಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಮತ್ತು ರಕ್ಷಣಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯ ಪ್ರಗತಿಯಲ್ಲಿದೆ.

Related posts

ಧನಾತ್ಮಕ ಚಿಂತನೆಯನ್ನು ಶಿಕ್ಷಕರು ವಿದ್ಯಾರ್ಥಿಗಳಲ್ಲಿ ತುಂಬಬೇಕು- ಜಿಪಂ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ

8ನೇ ಖಂಡವನ್ನು ಪತ್ತೆಹಚ್ಚಿದ ವಿಜ್ಞಾನಿಗಳು: ಇದರ ವಿಶೇಷತೆ ಏನು…?

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನಕಲು ತಡೆಯಲು ಹೊಸ ಪ್ಲಾನ್: ಇನ್ಮುಂದೆ ಮೇಲ್ವಿಚಾರಕರಾಗಿ ಪ್ರಾಥಮಿಕ ಶಾಲೆ ಶಿಕ್ಷಕರು..