ಶಿವಮೊಗ್ಗ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಿವಮೊಗ್ಗ. ಹಾಗೂ ಅನುದಾನ ರಹಿತ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ೧೪ ವರ್ಷ ವಯೋಮಿತಿಯೊಳಗಿನ ಅನುದಾನ ರಹಿತ ಹಿರಿಯ ಪ್ರಾಥಮಿಕ ಶಾಲಾ ಬಾಲಕ ಮತ್ತು ಬಾಲಕಿಯರ ವಲಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾ ಕೂಟ ಎರಡು ದಿನ ನಡೆಯಲಿದ್ದು, ನೆಹರೂ ಕ್ರೀಡಾಂಗಣದಲ್ಲಿ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ನಿರಂಜನ್ಮೂರ್ತಿ ಬಿ.ಹೆಚ್. ಗುಂಡು ಎಸೆಯುವುದರ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ರಾ.ಹ.ತಿಮ್ಮೇನಹಳ್ಳಿ, ಕಾರ್ಯದರ್ಶಿ ಕೆ.ಜಿ.ಮಠಪತಿ, ದೈಹಿಕ ಶಿಕ್ಷಕರಾದ ಅಜಯ್, ಗಿರೀಶ್, ಇಮ್ತಿಯಾಜ್ ಸೇರಿದಂತೆ ಮತ್ತಿತರರಿದ್ದರು.