ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಭಾಗ್ಯಲಕ್ಷ್ಮಿ ಯೋಜನೆಯನ್ನು ತಲುಪಿಸಲು ಕಾಂಗ್ರೆಸ್ ಕಾರ್ಯಕರ್ತರ ಶ್ರಮ ದೊಡ್ಡದಿದೆ-ಯುವ ಮುಖಂಡ ಹೆಚ್.ಸಿ. ಯೋಗೀಶ್

ಶಿವಮೊಗ್ಗ: ರಾಜ್ಯ ಸರ್ಕಾರದ ಭಾಗ್ಯಲಕ್ಷ್ಮಿ ಯೋಜನೆಯನ್ನು ತಲುಪಿಸಲು ಕಾಂಗ್ರೆಸ್ ಕಾರ್ಯಕರ್ತರ ಶ್ರಮ ದೊಡ್ಡದಿದೆ ಎಂದು ಮಹಾನಗರ ಪಾಲಿಕೆ ಸದಸ್ಯ ಹಾಗೂ ಹಾಗೂ ಕಾಂಗ್ರೆಸ್ ಯುವ ಮುಖಂಡ ಹೆಚ್.ಸಿ. ಯೋಗೀಶ್ ಹೇಳಿದರು.
ಅವರು ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವ ಹಲವು ಗ್ಯಾರಂಟಿಗಳನ್ನು ನೀಡಿತ್ತು. ಚುನಾವಣಾ ಪ್ರಚಾರ ಸಂದರ್ಭದಲ್ಲಿಯೂ ಕೂಡ ತಾವೂ ಸೇರಿದಂತೆ ಕಾಂಗ್ರೆಸ್ ಮುಖಂಡರು ಗ್ಯಾರಂಟಿ ಬಗ್ಗೆ ಪ್ರತಿ ಮನೆಗೂ ತಲುಪಿಸಿದ್ದರು. ನಂತರ ಕಾಂಗ್ರೆಸ್ ಆಡಳಿತಕ್ಕೆ ಬಂದಾಗಲೂ ಕೂಡ ಮುಖ್ಯವಾಗಿ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ವ್ಯಾಪಕ ಪ್ರಚಾರವನ್ನು ನಗರದೆಲ್ಲೆಡೆ ಮಾಡಲಾಗಿತ್ತು ಎಂದರು.
ಶಿವಮೊಗ್ಗ ನಗರ ಒಂದರಲ್ಲಿಯೇ ಸುಮಾರು 50,641 ಫಲಾನುಭವಿಗಳು ಇದ್ದಾರೆ. ಹಾಗೆಯೇ ಜಿಲ್ಲೆಯಲ್ಲಿ 3.56 ಲಕ್ಷ ಫಲಾನುಭವಿಗಳಿದ್ದಾರೆ. ಇವರೆಲ್ಲರಿಗೂ ನಾಳೆ ನಡೆಯಲಿರುವ ಗೃಹಲಕ್ಷ್ಮಿ ಯೋಜನೆಯ ಉದ್ಘಾಟನೆಯ ನಂತರ ಅವರ ಖಾತೆಗೆ ನೇರವಾಗಿ ಹಣ ಜಮಾ ಆಗಲಿದೆ ಎಂದರು.
ನಾಳೆ ಇದರ ಅಧಿಕೃತ ಉದ್ಘಾಟನೆಯು ಮೈಸೂರಿನಲ್ಲಿ ನಡೆಯಲಿದೆ. ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು ಸೇರಿದಂತೆ ಹಲವರು ಈ ಕಾರ್ಯಕ್ರಮದಲ್ಲಿ ಇರುತ್ತಾರೆ. ಸುಮಾರು ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಅದೇರೀತಿ ಅಂಬೇಡ್ಕರ್ ಭವನದಲ್ಲಿ ಕೂಡ ಈ ಕಾರ್ಯಕ್ರಮ ನಡೆಯಲಿದೆ. ನಗರದ ಎಲ್ಲಾ ಬಡಾವಣೆಗಳ ಮುಖ್ಯ ಸ್ಥಳಗಳಲ್ಲಿ ಕಾರ್ಯಕ್ರಮ ಆಯೋಜಿಸಿದ್ದು, ಮೈಸೂರಿನಲ್ಲಿ ನಡೆಯುವ ಸಮಾರಂಭದ ನೇರ ದೃಶ್ಯಗಳನ್ನು ದೊಡ್ಡ ಪರದೆಯ ಮೂಲಕ ತೋರಿಸಲಾಗುವುದು ಎಂದರು.
ಅಂಬೇಡ್ಕರ್ ಭವನದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಆಗಮಿಸಲಿದ್ದು, ಅವರು ಕೂಡ ಗೃಹಲಕ್ಷ್ಮಿ ಯೋಜನೆ ಜಾರಿಯ ಕಾರ್ಯಕ್ರಮಕ್ಕೆ ಚಾಲನೆ ನೀಡುವರು ಎಂದರು.
ಶಿವಮೊಗ್ಗ ನಗರದಲ್ಲಿ ಗೃಹಲಕ್ಷ್ಮಿ ಯೋಜನೆಯ ಮಾಹಿತಿ ಮತ್ತು ಅನುಷ್ಠಾನಕ್ಕೆ ಸಹಕಾರ ನೀಡುವ ಸಲುವಾಗಿ ಸುಮಾರು 200 ಜನರನ್ನು ಪ್ರಜಾಪ್ರತಿನಿಧಿ ಎಂದು ನೇಮಿಸಲಾಗಿತ್ತು. ಮನೆಮನೆಗೆ ಸ್ಟಿಕರ್ ಕೂಡ ಅಂಟಿಸಲಾಗಿತ್ತು. ಈ ಎಲ್ಲದರ ಪರಿಣಾಮ ಫಲಾನುಭವಿಗಳು ಹೆಚ್ಚಾಗಿದ್ದಾರೆ, ಶಿವಮೊಗ್ಗ ಜಿಲ್ಲೆಯೊಂದಕ್ಕೇ ಸುಮಾರು 92.75 ಕೋಟಿ ಹಣ ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾವಣೆಯಾಗಲಿದೆ ಎಂದರು.
ಪತ್ರಿಕಾ ಗೋಷ್ಠಿಯಲ್ಲಿ ಪ್ರಮುಖರಾದ ಶಮೀರ್ ಖಾನ್, ದೇವೇಂದ್ರಪ್ಪ, ವಿಶ್ವನಾಥ ಕಾಶಿ, ಸವಿತಾ, ರೇಶ್ಮಾ, ಶಿವಕುಮಾರ್, ಪರ್ವಿಜ್ ಅಹ್ಮದ್, ಆಸೀಫ್, ಜ್ಯೋತಿ, ನರಸಮ್ಮ ಮತ್ತಿತರರು ಇದ್ದರು.

Related posts

236 ಬಾರಿ ಚುನಾವಣೆಗಳಲ್ಲಿ ಸ್ಪರ್ಧೆ, 1 ಕೋಟಿ ರೂ. ಠೇವಣಿ ಕಳೆದುಕೊಂಡ ವ್ಯಕ್ತಿ ಮತ್ತೆ ಕಣಕ್ಕೆ…

ಜಿಎಸ್ಟಿ ಸಂಗ್ರಹದಲ್ಲಿ ಕರ್ನಾಟಕಕ್ಕೆ ನಂಬರ್ 2ನೇ ಸ್ಥಾನ

ಕರ್ನಾಟಕದಲ್ಲಿ ಮಕ್ಕಳಿಗೆ ಮಾತೃಭಾಷೆ ಕನ್ನಡ ಕಡ್ಡಾಯ- ಶಿಕ್ಷಣ ಸಚಿವ ಮಧು ಬಂಗಾರಪ್ಪ .