ಶಿವಮೊಗ್ಗ: ಗಾಡಿಕೊಪ್ಪ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಶಿವಮೊಗ್ಗ ನಗರದ ಶ್ರೀ ರಾಮಕೃಷ್ಣ ವಿದ್ಯಾನಿಕೇತನ ಶಾಲೆಯಲ್ಲಿ ನಡೆಸಲಾಯಿತು.
ಶಿವಮೊಗ್ಗ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಮಕೃಷ್ಣ ವಿದ್ಯಾನಿಕೇತನ ಸಂಸ್ಥೆಯ ಕಾರ್ಯದರ್ಶಿ ಶೋಭ ವೆಂಕಟರಮಣ ರವರು ವಹಿಸಿದ್ದರು .ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಎಲ್ಲ ಪದಾಧಿಕಾರಿಗಳು, ಬಿ ಆರ್ ಸಿ ಸಮನ್ವಯಾಧಿಕಾರಿ ಶಿವಪ್ಪ ಸಂಗಣ್ಣ, ರಾಮಕೃಷ್ಣ ಶಾಲೆಯ ಮುಖ್ಯೋಪಾಧ್ಯಾಯ ತೀರ್ಥೇಶ್. ಅರುಣ್, ಗಜೇಂದ್ರನಾಥ್ ಟಿ ವಿ. ಗಾಡಿ ಕೊಪ್ಪ ಕ್ಲಸ್ಟರ್ ಸಿ ಆರ್ ಶೈಲಶ್ರೀ ಮುಂತಾದವರು ಉಪಸ್ಥಿತರಿದ್ದರು.