ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಬಿಪಿಎಲ್ ಕಾರ್ಡುದಾರರಿಗೆ ಎದುರಾಯ್ತು ಮತ್ತೊಂದು ಸಂಕಷ್ಟ: ಈ ರೀತಿ ಮಾಡದಿದ್ರೆ ಅನ್ನಭಾಗ್ಯ ಗೃಹಲಕ್ಷ್ಮಿ ಯೋಜನೆ ಲಾಭ ಸಿಗಲ್ಲ.

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಆದರೆ ಈ ಮಧ್ಯೆ ಬಿಪಿಎಲ್ ಫಲಾನುಭವಿಗಳಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಹೌದು  ಬಿಪಿಎಲ್ ಕಾರ್ಡ್ನಲ್ಲಿ ಮುಖ್ಯಸ್ಥರು ಪುರುಷರಾಗಿದ್ದರೆ ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆ ಭಾಗ್ಯದ ಲಾಭಪಡೆಯಲಾಗಲ್ಲ. ಮೊನ್ನೆಯಷ್ಟೇ ಜಾರಿಯಾದ ಗೃಹಲಕ್ಷ್ಮಿ ಯೋಜನೆಗೆ ಇದೀಗ ಹೊಸ ಸಂಕಷ್ಟ ಎದುರಾಗಿದೆ. ಹೌದು, ಬಿಪಿಎಲ್ ಕಾರ್ಡ್ನಲ್ಲಿ ಪುರುಷರು ಮುಖ್ಯಸ್ಥರಿದ್ದವರಿಗೆ ಗೃಹ ಲಕ್ಷ್ಮಿ ಸ್ಕೀಮ್ ಹಾಗೂ ಅನ್ನಭಾಗ್ಯ ಯೋಜನೆಯ ಲಾಭ ಸಿಗುವುದಿಲ್ಲ ಎಂದು ಹೇಳಲಾಗುತ್ತಿದೆ.

ಬಿಪಿಎಲ್ ಕಾರ್ಡ್ಗಳ ಹೆಡ್ ಆಫ್ ದಿ ಪ್ಯಾಮಿಲಿ  ಮಹಿಳೆಯರಾಗಿರಬೇಕು. ಸಧ್ಯ ಕಾರ್ಡ್ ನಲ್ಲಿ 18 ವರ್ಷದ ಒಳಗಿದ್ದ ಬಾಲಕಿಯರು ಇದ್ರೆ ತೊಂದರೆ ಇಲ್ಲ. ಆದರೆ ವಯಸ್ಕ ಮಹಿಳೆ ಇದ್ದೂ ಕಾರ್ಡ್ ಮುಖ್ಯಸ್ಥ ಗಂಡಸರಾಗಿದ್ದರೆ ಅನ್ನಭಾಗ್ಯ ಯೋಜನೆ ಸಿಗುವುದಿಲ್ಲ. ಗೃಹಲಕ್ಷ್ಮಿ ಅರ್ಜಿ ಸಲ್ಲಿಸಲು ಬಿಪಿಎಲ್, ಎಪಿಎಲ್ ಕಾರ್ಡ್ ಮನೆಯೊಡತಿಯೇ ಇರಬೇಕು. ಇಲ್ಲದಿದ್ದರೆ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಎರಡೂ ಸ್ಕೀಂಗೂ ಅನರ್ಹರಾಗಿರುತ್ತಾರಂತೆ. ಯಾಕಂದ್ತೆ ಈ ಎರಡು ಯೋಜನೆಗಳು ಮಹಿಳೆಯರಿಗೆ ಹೆಚ್ಚು ಪ್ರಧಾನ್ಯತೆಯನ್ನ ನೀಡುತ್ತಿರುವುದುರಿಂದ ಜೊತೆಗೆ ಬ್ಯಾಂಕ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಆಗಿರುವ ಮಾಹಿತಿಯನ್ನ ಆಧರಿಸಿ ಈ ನಿಯಮವನ್ನ ಕಡ್ಡಾಯ ಮಾಡಲಾಗಿದೆ. ಸಧ್ಯ ಆಹಾರ ಇಲಾಖೆಯ ಪ್ರಕಾರ ಈಗಿರುವ ಬಿಸಿಎಲ್ ಕಾರ್ಡ್ ದಾರರ ಪೈಕಿ ಆರು ಲಕ್ಷಕ್ಕೂ ಹೆಚ್ಚು ಬಿಪಿಎಲ್ ಪುರುಷ ಮುಖ್ಯಸ್ಥ ಕಾರ್ಡ್ ದಾರರು ಇರುವುದು ಕಂಡುಬಂದಿದೆ.

ನಿಯಮದ ಪ್ರಕಾರ. ಮನೆಯೊಡತಿ ಹೆಸರು ಬದಲಾವಣೆಗೆ ಸೆಪ್ಟಂಬರ್ 1ರಿಂದ  ಸೆಪ್ಟಂಬರ್ 10ರವರೆಗೆ ಅವಕಾಶ ನೀಡಿದ್ದು, ಈ ಹತ್ತು ದಿನದಲ್ಲಿ ಹೆಸರು ಬದಲಾವಣೆ ಮಾಡಿಸಿಕೊಳ್ಳಲು ಅವಕಾಶ ನೀಡಿದೆ.

ಇನ್ನು, ಆಹಾರ ಇಲಾಖೆಯ ಪ್ರಕಾರ 94 % ರಷ್ಟು ಮಹಿಳೆಯರು ಬಿಪಿಎಲ್ ಕಾರ್ಡ್ ಗಳ ಮುಖ್ಯಸ್ಥರಾಗಿದ್ದಾರೆ. ಇನ್ನು 5 % ರಷ್ಟು ಕಾರ್ಡ್ ಗಳಲ್ಲಿ ಪುರುಷರು ಮುಖ್ಯಸ್ಥರಾಗಿದ್ದಾರೆ. ಹೀಗಾಗಿ ಈಗಾಗಲೆ ಗೃಹಲಕ್ಷ್ಮಿಗೆ ಅರ್ಜಿ ಸಲ್ಲಿಕೆ ಮಾಡಿದ 1.28 ಕೋಟಿ ಫಲಾನುಭವಿಗಳ ಪೈಕಿ ಸಧ್ಯ 1.11 ಕೋಟಿಯಷ್ಟು ಅರ್ಜಿಸಲ್ಲಿಕೆಯಾಗಿದ್ದು, ಇನ್ನು 18 ಲಕ್ಷದಷ್ಟು ಮಹಿಳೆಯರು ಅರ್ಜಿ ಸಲ್ಲಿಸುವುದು ಬಾಕಿ ಇದೆ. ಇದರಲ್ಲಿ ಆರು ಲಕ್ಷದಷ್ಟು ಕಾರ್ಡ್ ಗಳು ಬಿಪಿಎಲ್ ಕಾರ್ಡ್ ಗಳಲ್ಲಿ ಮುಖ್ಯಸ್ಥೆಯರು ಅಲ್ಲದೇ ಇರುವುದು ಕಂಡುಬಂದಿರುವುದೇ ಅರ್ಜಿ ಸಲ್ಲಿಕೆಗೆ ಸಮಸ್ಯೆಯಾಗುತ್ತಿದೆ ಎನ್ನಲಾಗುತ್ತಿದೆ. ಆದಷ್ಟು ಬೇಗ ಮಹಿಳೆಯರು ಬೆಂಗಳೂರು ಒನ್ ಕೇಂದ್ರಗಳಲ್ಲಿ, ಗ್ರಾಮ ಒನ್ ಸೆಂಟರ್, ಕರ್ನಾಟಕ ಒನ್ ಸೆಂಟರ್ ಗಳಲ್ಲಿ ತಮ್ಮ ಹೆಸರುಗಳನ್ನ ಬದಲಾವಣೆ ಮಾಡಿಕೊಳ್ಳಬಹುದಾಗಿದೆ.

 

Related posts

ಡಿಕೆಶಿ ಮತ್ತೆ ಜೈಲಿಗೆ ಹೋಗ್ತಾರೆಂಬ ಹೆಚ್.ಡಿಕೆ ಹೇಳಿಕೆಗೆ ತಿರುಗೇಟು ಕೊಟ್ಟ ಸಚಿವ ಜಮೀರ್ ಅಹ್ಮದ್ ಖಾನ್

ಹೃದಯ ದಿನ: ಸೆ.25ರಿಂದ ಸೆ.29ರವರೆಗೆ ಬಾನುಲಿ ಸರಣಿ ಕಾರ್ಯಕ್ರಮ.

ಇಬ್ಬರು ಬಿಜೆಪಿ ನಾಯಕರಿಂದ ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿ, ಚರ್ಚೆ.