ಚೆನ್ನೈ: ಸನಾತನ ಧರ್ಮವನ್ನು ಮಲೇರಿಯಾ ಮತ್ತು ಡೆಂಘೆಗೆ ಹೋಲಿಕೆ ಮಾಡುವ ಮೂಲಕ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಪುತ್ರ ಹಾಗೂ ಸಚಿವ ಉದಯನಿಧಿ ಸ್ಟಾಲಿನ್ ಅವರು ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ.
ನಾವು ಡೆಂಗ್ಯೂ, ಸೊಳ್ಳೆಗಳು, ಮಲೇರಿಯಾ ಅಥವಾ ಕರೋನಾವನ್ನು ವಿರೋಧಿಸಲು ಸಾಧ್ಯವಿಲ್ಲ. ಅದೇ ರೀತಿ ನಾವು ಸನಾತನವನ್ನು ನಿರ್ಮೂಲನೆ ಮಾಡಬೇಕು ಎಂಬ ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.
ಸನಾತನವನ್ನು ವಿರೋಧಿಸುವುದಕ್ಕಿಂತ, ಅದನ್ನು ನಾವು ನಿರ್ಮೂಲನೆ ಮಾಡಬೇಕು. ‘ಸನಾತನ’ ಎನ್ನುವ ಪದ ಸಂಸ್ಕೃತದಿಂದ ಬಂದಿದೆ. ಇದು ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ವಿರೋಧಿಯಾಗಿದೆ ಎಂದು ಸ್ಟಾಲಿನ್ ಹೇಳಿದ್ದಾರೆ ಎನ್ನಲಾಗಿದೆ.
ಸನಾತನ ಧರ್ಮವು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ. ಸನಾತನವನ್ನು ಹಿಂಬಾಲಿಸುವ 80% ಜನ ಸಂಖ್ಯೆಯ ನರಮೇಧಕ್ಕೆ ಕರೆ ನೀಡುತ್ತಿದ್ದಾರೆ ಎಂದು ಸಚಿವ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ.
ಉದಯನಿಧಿ ಸ್ಟ್ಯಾಲಿನ್ ಅವರ ಭಾರೀ ಆಕ್ರೋಶ ವ್ಯಕ್ಯವಾಗಿದ್ದು, ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರು ಸ್ಟ್ಯಾಲಿನ್ ಹೇಳಿಕೆಯನ್ನು ಖಂಡಿಸಿದ್ದಾರೆ.