ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಕನ್ನಡ ಶಿಕ್ಷಕಿ ಫೌಜಿಯಾ ಸರಾವತ್ ರಿಗೆ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ.

ಶಿವಮೊಗ್ಗ: ಕರ್ನಾಟಕ ಶಿಕ್ಷಣ ಇಲಾಖೆಯು ನೀಡಲ್ಪಡುವ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯು ಈ ಬಾರಿ ಹೊಸನಗರ ತಾಲೂಕಿನ ಅರಸಾಳು ಕ್ಲಸ್ಟರ್ ಮಾದಾಪುರ ಸರ್ಕಾರಿ ಕಿರಿಯ ಪ್ರಾಥಾಮಿಕ ಶಾಲೆಯ ಕನ್ನಡ ಶಿಕ್ಷಕಿ ಫೌಜಿಯಾ ಸರಾವತ್ ಪಡೆದುಕೊಂಡು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಪ್ರಾಥಮಿಕ ಶಾಲಾ ವಿಭಾಗದಿಂದ ರಾಜ್ಯದಲ್ಲಿ 20 ಶಿಕ್ಷಕರಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ. ಹಾಗೆಯೇ ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ. ಹಾಗೆಯೇ ಶಿಕ್ಷಕಿಯರಿಗೆ ಸಾವಿತ್ರಿಭಾಯಿ ಪುಲೆ ಹೆಸರಲ್ಲಿ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆಯಂದು ಪ್ರಶಸ್ತಿಯನ್ನು ಬೆಂಗಳೂರಲ್ಲಿ ಪ್ರದಾನ ಮಾಡಲಾಗುವುದು.
ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಹೊಸನಗರ ತಾಲೂಕಿನ ಮಾದಾಪುರ ಹಿರಿಯ ಪ್ರಾಥಮಿಕ ಶಾಲೆಯ ಫೌಜಿಯಾ ಸರಾವತ್ ಅವರಿಗೆ ಪ್ರೌಢಶಾಲಾ ವಿಭಾಗದಿಂದ ಸಾಗರ ತಾಲೂಕಿನ ತ್ಯಾಗರ್ತಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ವಿಜಯ್ ಆನಂದರಾವ್ ಅವರಿಗೆ ಈ ಪ್ರಶಸ್ತಿ ನೀಡಲಾಗಿದೆ.
ಫೌಜಿಯಾ ಸರಾವತ್ ಬಗ್ಗೆ:
ಫೌಜಿಯಾ ಸರಾವತ್ ಅವರು 2007 ರಲ್ಲಿ ಶಿಕ್ಷಕ ವೃತ್ತಿಗೆ ಸೇರಿಕೊಂಡು ಸುಮಾರು 16 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಈಗಾಗಲೇ ಜಿಲ್ಲಾಮಟ್ಟದ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಇತ್ತೀಚೆಗೆ ಜಿಲ್ಲಾಮಟ್ಟದ ಸಾವಿತ್ರಿಭಾಯಿ ಪುಲೆ ಉತ್ತಮ ಶಿಕ್ಷಕಿ ಪ್ರಶಸ್ತಿ ಪಡೆದುಕೊಂಡಿದ್ದರು. ನಲಿ ಕಲಿ ಜಿಲ್ಲಾ ಸಂಪನ್ಮೂಲ ವ್ಯಕ್ತಿಯಾಗಿರುವ ಇವರು ಹಲವು ಕಾರ್ಯಕ್ರಮ ನಡೆಸಿ ಮಕ್ಕಳ ಕಲಿಕೆಗೆ ಸಹಕರಿಸಿದ್ದಾರೆ. ನಲಿ -ಕಲಿ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಕಳೆದ ಎರಡು ವರ್ಷಗಳಿಂದಲೂ ತಮ್ಮದಾಗಿಸಿಕೊಂಡಿದ್ದಾರೆ. ರಾಜ್ಯ, ರಾಷ್ಟ್ರಮಟ್ಟದಲ್ಲಿ, ಕ್ರೀಡೆ, ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಮಕ್ಕಳನ್ನು ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಪ್ರೋತ್ಸಾಹ ನೀಡಿದ್ದಾರೆ.
ನಲಿ-ಕಲಿ ಕ್ರಿಯಾಶೀಲ ತಾರೆಯರ ಗುಂಪಿನ ಮೂಲಕ ವಿವಿಧ ಚಟುವಟಿಕೆಗಳನ್ನು ಆಯೋಜನೆ ಮಾಡಿ ಪುನಶ್ಚೇತನಗೊಳಿಸಿ ವಿಶೇಷ ದಾಖಲಾತಿ ಆಂದೋಲನ ನಡೆಸಿ ದಾನಿಗಳಿಂದ ಶಾಲೆಗೆ, ಮಕ್ಕಳಿಗೆ ಉಪಕರಣಗಳನ್ನು ಕೊಡಿಸಿ ಶಾಲೆ ಬಿಟ್ಟ ಮಕ್ಕಳನ್ನು ಮತ್ತೆ ಶಾಲೆಗೆ ಸೇರಿಸುವುದು ಸೇರಿದಂತೆ ಅತ್ಯಂತ ಕ್ರಿಯಾಶೀಲವಾಗಿರುವ ಇವರಿಗೆ ಪ್ರಶಸ್ತಿ ಬಂದಿರುವುದು ಅತ್ಯಂತ ನ್ಯಾಯಸಮ್ಮತವಾಗಿದೆ ಎಂದು ಶಿಕ್ಷಕಿ ಭಾಗಿರಥಿ ಅಭಿಪ್ರಾಯಪಡುತ್ತಾರೆ.

Related posts

ರಾಜ್ಯಗಳಿಗೆ ಜಾತಿಗಣತಿ ನಡೆಸುವ ಅಧಿಕಾರ ಇಲ್ಲ- ಕೇಂದ್ರ ಸರ್ಕಾರ

ಅಸಹಾಯಕರು ಸೇರಿ ಮೈತ್ರಿ ಮಾಡಿಕೊಳ್ಳುತ್ತಿದ್ದಾರೆ- ಮಾಜಿ ಸಿಎಂ ಜಗದೀಶ್ ಶೆಟ್ಟರ್ ವ್ಯಂಗ್ಯ.

ವಿಶ್ವ ವಿಖ್ಯಾತ ಮೈಸೂರು ದಸರಾ: ಐತಿಹಾಸಿಕ ಜಂಬೂಸವಾರಿಗೆ ಕ್ಷಣಗಣನೆ.