ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

 ಹೈಕೋರ್ಟ್ ನಿಂದ ಸಮನ್ಸ್ : ಪುತ್ರನ ಬಳಿಕ ಇದೀಗ ಹೆಚ್.ಡಿ ರೇವಣ್ಣ ಶಾಸಕ ಸ್ಥಾನಕ್ಕೂ ಕುತ್ತು.

 

ಬೆಂಗಳೂರು:  ಪುತ್ರ ಪ್ರಜ್ವಲ್​ ರೇವಣ್ಣ  ಸಂಸದ ಸ್ಥಾನದಿಂದ ಅನರ್ಹಗೊಂಡ ಬೆನ್ನಲ್ಲೆ ಇದೀಗ ಶಾಸಕರಾಗಿ ಹೆಚ್​.ಡಿ.ರೇವಣ್ಣ ಆಯ್ಕೆ ಅಸಿಂಧು ಕೋರಿ ಅರ್ಜಿ ವಿಚಾರಣೆಗೆ ಬಂದಿದ್ದು ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ಶಾಸಕ ಹೆಚ್.ಡಿ.ರೇವಣ್ಣ ಸೇರಿದಂತೆ ಎಲ್ಲಾ ಅಭ್ಯರ್ಥಿಗಳಿಗೂ ಕರ್ನಾಟಕ ಹೈಕೋರ್ಟ್ ಸಮನ್ಸ್ ಜಾರಿಗೆ ಆದೇಶಿಸಿದೆ.  ಪರಾಜಿತ ಬಿಜೆಪಿ ಅಭ್ಯರ್ಥಿ ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ಇಂದುವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಶಾಸಕ ಹೆಚ್.ಡಿ.ರೇವಣ್ಣ ಸೇರಿದಂತೆ ಅವರ ವಿರುದ್ಧ ಸ್ಪರ್ಧಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ವಿಧಾನಸಭೆ ಕಾರ್ಯದರ್ಶಿ ಮೂಲಕ ಸಮನ್ಸ್ ಜಾರಿ ಮಾಡಲು ಆದೇಶ  ಹೊರಡಿಸಿದೆ

ಇದೇ ಚುನಾವಣಾ ತಕರಾರು ಅರ್ಜಿ ಸಂಬಂಧ ಶಾಸಕ ಹೆಚ್. ಡಿ.ರೇವಣ್ಣ ವಿರುದ್ಧ ಪರಾಜಿತ ಬಿಜೆಪಿ ಅಭ್ಯರ್ಥಿ ದೇವರಾಜೇಗೌಡ ಸಲ್ಲಿಸಿದ್ದ ಅರ್ಜಿ ವಿಚಾರವಾಗಿ ಹೈಕೋರ್ಟ್ ಏಕಸದಸ್ಯ ಪೀಠದಿಂದ ನೋಟಿಸ್​ ಜಾರಿ ಮಾಡಿತ್ತು. ಇದೀಗ ಸಮನ್ಸ್​ ಜಾರಿಗೆ ಆದೇಶಿಸಿದೆ.

ಚುನಾವಣಾ ಅಕ್ರಮಗಳಿಂದ ಹೆಚ್.ಡಿ. ರೇವಣ್ಣ ಜಯಗಳಿಸಿದ್ದಾರೆ. 2ನೇ ಸ್ಥಾನದಲ್ಲಿದ್ದ ಶ್ರೇಯಸ್ ಪಟೇಲ್ ಮತದಾರರಿಗೆ ಆಮಿಷ ಒಡ್ಡಿದ್ದಾರೆ. ಹೀಗಾಗಿ ಇವರಿಬ್ಬರ ಮತಗಳಿಕೆಯನ್ನು ಅಸಿಂಧುಗೊಳಿಸುವಂತೆ ಬಿಜೆಪಿ ಪರಾಜಿತ ಅಭ್ಯರ್ಥಿ ದೇವರಾಜೇಗೌಡ ಅವರು ಕೋರ್ಟ್​ಗೆ  ಅರ್ಜಿ ಸಲ್ಲಿಸಿದ್ದರು.

Related posts

ಶಿಕ್ಷಣದ ಜತೆಯಲ್ಲಿ ಮೌಲ್ಯಯುತ ಅಂಶಗಳ ಕಲಿಕೆ ಮುಖ್ಯ-ಬಿ.ಕೃಷ್ಣಪ್ಪ

ರಕ್ತದಾನ ಮಹತ್ವದ ಅರಿವು ಪ್ರತಿಯೊಬ್ಬರಿಗೂ ಅವಶ್ಯಕ-ಡಾ. ಎಂ.ವೆಂಕಟೇಶ್

ಬರ, ಕಾವೇರಿ ಎಲ್ಲದಕ್ಕೂ ಕೇಂದ್ರದತ್ತ ಬೊಟ್ಟು: ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ಕಿಡಿ.