ಕನ್ನಡಿಗರ ಪ್ರಜಾನುಡಿ
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಳ: ಈ ರೀತಿ ಲಕ್ಷಣಗಳು ಕಂಡುಬಂದ್ರೆ ವೈದ್ಯರನ್ನ ಸಂಪರ್ಕಿಸಿ..

ಬೆಂಗಳೂರು: ದೇಶದಲ್ಲಿ ಕೊರೋನಾ ಹಾವಳಿ  ಹೋಗಿ ಜನಜೀವನ ಎಂದಿನಂತೆ ಸಹಜಸ್ಥಿತಿಗೆ ಬಂದು ಎಲ್ಲವೂ ನಾರ್ಮಲ್ ಆಗಿದೆ.  ಈ ಮಧ್ಯೆ ಇದೀಗ ಡೆಂಗ್ಯೂ ಮಹಾಮಾರಿ ಲಗ್ಗೆ ಇಟ್ಟಿದ್ದು, ಜನರಲ್ಲಿ ಆತಂಕವನ್ನುಂಟು ಮಾಡಿದೆ.    ದೇಶಾದ್ಯಂತ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಿದ್ದು, ಇದೀಗ ರಾಜ್ಯದಲ್ಲೂ ಡೆಂಗ್ಯೂ ರೋಗಿಗಳ ಸಂಖ್ಯೆ ಹೆಚ್ಚಾಗಿದೆ.

ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ಮಲೇರಿಯಾ ಪ್ರಕರಣಗಳು ಸಹ ಏರಿಕೆಯಾಗಿವೆ. ಜುಲೈ 1ರಿಂದ ಜುಲೈ 30ರ ವರೆಗೆ ಬೆಂಗಳೂರು ನಗರದಲ್ಲಿ ಬರೋಬ್ಬರಿ 1,649 ಪ್ರಕರಣ ದಾಖಲಾಗಿದೆ. ಆಗಸ್ಟ್ ನಲ್ಲಿ ಸ್ವಲ್ಪ ಮಟ್ಟಿಗೆ ಕಡಿಮೆ ಆಗಿದ್ದ ಡೆಂಗ್ಯೂ ಪ್ರಕರಣಗಳು, ಮೊನ್ನೆ ಸುರಿದ ಮಳೆಯಿಂದ ಮತ್ತೆ ಹೆಚ್ಚಳವಾಗಿವೆ. ಕಳೆದ ವರ್ಷಕ್ಕೆ ಹೋಲಿಸಿದರೆ, ಈ ಬಾರಿ ಶೇ.22 ರಷ್ಟು ಡೆಂಗ್ಯೂ ರೋಗಿಗಳ ಸಂಖ್ಯೆ ಏರಿಕೆಯಾಗಿದೆ.

ಪ್ರಸಕ್ತ ವರ್ಷ 5,526 ಪ್ರಕರಣ ದಾಖಲಾಗಿವೆ. ಬೆಂಗಳೂರು ಒಂದರಲ್ಲೇ 2,969 ಜನರಿಗೆ ಡೆಂಗ್ಯೂ ಕಾಡುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 22ಕ್ಕಿಂತ ಅಧಿಕ ಪ್ರಕರಣ ದಾಖಲಾಗಿವೆ ಎಂದು ಮೂಲಗಳು ತಿಳಿಸಿವೆ. ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಆರೋಗ್ಯ ಇಲಾಖೆ ಸಲಹೆ ನೀಡಿದೆ.

ಡೆಂಗ್ಯೂ ಜ್ವರ ಸೊಳ್ಳೆಯಿಂದ ಹರಡುವ ವೈರಲ್ ಸೋಂಕು. ಪ್ರಪಂಚದ ಉಷ್ಣವಲಯದ ಮತ್ತು ಉಪೋಷ್ಣವಲಯದ ಪ್ರದೇಶಗಳಲ್ಲಿ ಇದು ಸಾಮಾನ್ಯವಾಗಿದೆ. ಇದು ಹೆಣ್ಣು ಈಡಿಸ್ ಸೊಳ್ಳೆಗಳ ಕಚ್ಚುವಿಕೆಯಿಂದ ಉಂಟಾಗುತ್ತದೆ. ಸೊಳ್ಳೆಯು ಸೋಂಕಿತ ವ್ಯಕ್ತಿಯನ್ನು ಕಚ್ಚಿದಾಗ ಮತ್ತು ವೈರಸ್ ಅನ್ನು ಹೊತ್ತೊಯ್ಯುವಾಗ ಸೋಂಕಿಲ್ಲದ ವ್ಯಕ್ತಿಯನ್ನು ಕಚ್ಚಿದಾಗ ಮಾತ್ರ ಇದು ಸಂಭವಿಸುತ್ತದೆ.

ಈ ಗುಣಲಕ್ಷಣಗಳು ಕಂಡು ಬಂದರೇ ತಕ್ಷಣವೇ ವೈದ್ಯರನ್ನು ಸಂಪರ್ಕಿಸಿ.

ಕೀಲು ನೋವು, ಸ್ನಾಯು ನೋವು, ಕೆಳಹೊಟ್ಟೆಯಲ್ಲಿ ನೋವು, ವಾಂತಿ ಅಥವಾ ಮಲದಲ್ಲಿ ರಕ್ತ, ತ್ವಚೆಯ ಮೇಲೆ ಸಣ್ಣ ಕೆಂಪು ಚುಕ್ಕೆಗಳು, ಪದೇ ಪದೇ ಜ್ವರ ಮರುಕಳಿಸುವುದು, ಜ್ವರದ ತಾಪಮಾನವು 104 ಡಿಗ್ರಿವರೆಗೆ ಏರುವುದು, ಮೈ-ಕೈ ನೋವು ಮತ್ತು ಸ್ನಾಯುಗಳ ಸೆಳೆತ ಎಲ್ಲವೂ ಡೆಂಗ್ಯೂ ರೋಗದ ಲಕ್ಷಣಗಳಾಗಿವೆ. ಈ ರೀತಿಯಾದ ಲಕ್ಷಣ ಕಂಡುಬಂದಲ್ಲಿ ತಕ್ಷಣ ವೈದ್ಯರನ್ನು ಸಂಪರ್ಕಿಸಿ.

 

Related posts

ನಾನು ಕೊಟ್ಟ ಜಾತಿಗಣತಿ ವರದಿ ನೈಜ ಮತ್ತು ವೈಜ್ಞಾನಿಕ- ಕಾಂತರಾಜು ಸ್ಪಷ್ಟನೆ

ಲಾರಿಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು: ಒಂದೇ ಕುಟುಂಬದ ಮೂವರು ದುರ್ಮರಣ.

ಪಿ.ಇ.ಎಸ್. ಕ್ಯಾಂಪಸ್‍ನಲ್ಲಿ ಸೆಂಟರ್ ಫಾರ್ ಅಡ್ವಾನ್ಸ್ಡ್ ಡಿಜಿಟಲ್ ಕನ್ಸ್ಟ್ರಕ್ಷನ್ ಆರಂಭ