ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬಿಜೆಪಿ-ಜೆಡಿಎಸ್ ಮೈತ್ರಿ ಕಾಂಗ್ರೆಸ್ ಗೆ ಲಾಭವೋ…? ನಷ್ಟವೋ..?

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ  20 ಸ್ಥಾನ ಗೆದ್ದೇ ಗೆಲ್ಲುತ್ತೇವೆ ಎಂಬ ವಿಶ್ವಾಸದಲ್ಲಿರುವ ಕಾಂಗ್ರೆಸ್ ಗೆ ಠಕ್ಕರ್ ಕೊಡಲು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಗೆ ಮುಂದಾಗಿವೆ.  2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆಗೆ ದೋಸ್ತಿ ಮಾಡಿ ಕೇವಲ ತಲಾ ಒಂದೊಂದು ಕ್ಷೇತ್ರದಲ್ಲಿ ಮಾತ್ರ ಎರಡು ಪಕ್ಷಗಳು ಗೆಲುವು ಸಾಧಿಸಿ ದ್ದವು. ಇದೀಗ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿ ಜೊತೆಗೆ ಚುನಾವಣಾ ಪೂರ್ವ ಹೊಂದಾಣಿಕೆ ಮಾಡಿಕೊಳ್ಳುವುದು ಬಹುತೇಕ ಖಚಿತವಾಗಿದೆ. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಹಾಗು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿ ಮೈತ್ರಿ ಮಾಡಿಕೊಂಡು ಸ್ಪರ್ಧೆ ಮಾಡುವ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗ್ತಿದೆ.

ರಾಜ್ಯದ 28 ಲೋಕಸಭಾ ಕ್ಷೇತ್ರದ ಹಳೇ ಮೈಸೂರು ಭಾಗದ 6 ಕ್ಷೇತ್ರಗಳನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಟ್ಟು, ಉಳಿದ 22 ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿ ಎನ್ನುವ ಮಾತುಕತೆ ಆಗಿದೆ ಎನ್ನಲಾಗ್ತಿದೆ. ಆದರೆ ಬಿಜೆಪಿ ಮಾತ್ರ ಜೆಡಿಎಸ್ಗೆ ನಾಲ್ಕು ಕ್ಷೇತ್ರಗಳಲ್ಲಿ ಸ್ಥಾನ ಬಿಟ್ಟುಕೊಡಬಹುದು ಎಂದು ಬಹಿರಂಗವಾಗಿಯೇ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಕಳೆದ ಬಾರಿ ನಡೆದ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್ ಹಾಗು ಜೆಡಿಎಸ್ ತಲಾ ಒಂದೊಂದೇ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಮಾತ್ರ ಸಾಧ್ಯವಾಗಿತ್ತು. ಕಳೆದ ಬಾರಿ ಬಿಜೆಪಿ ಗೆಲುವು ಸಾಧಿಸಿದಂತೆ ಈ ಬಾರಿ ಕಾಂಗ್ರೆಸ್ ಜಯದ ನಾಗಾಲೋಟ ನಡೆಸಲು ಕಾಂಗ್ರೆಸ್ ತಯಾರಿ ಮಾಡಿಕೊಳ್ತಿದೆ. ಈ ನಡುವೆ ಕಾಂಗ್ರೆಸ್ ಗೆಲುವಿಗೆ ಬ್ರೇಕ್ ಹಾಕಲು ಮುಂದಾಗಿರುವ ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡು ಗೆಲುವು ಸಾಧಿಸಲು ಮುಂದಾಗಿದೆ.

ಮೈತ್ರಿ ಬಗ್ಗೆ ಕಾಂಗ್ರೆಸ್ ಚಿಂತಿಸಬೇಕಾದ ಅನಿವಾರ್ಯತೆ..

BJP-JDS ಮೈತ್ರಿ  ಬಗ್ಗೆ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿಕೆ ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಮೈತ್ರಿ ಮಾಡಿಕೊಳ್ಳೋರು ಮಾಡಿಕೊಳ್ಳಲಿ, ನಮ್ಮದೇನು ಅಭ್ಯಂತರವಿಲ್ಲ ಎಂದಿದ್ದಾರೆ. ಇನ್ನು ಇಬ್ಬರ ಸಿದ್ಧಾಂತ ಯಾವ ರೀತಿ ಹೊಂದಾಣಿಕೆ ಆಗುತ್ತದೆ ನೋಡೋಣ ಎಂದು ಡಿಕೆಶಿ ಹೇಳಿದ್ದಾರೆ. ಆದರೂ ಒಂದು ಕ್ಷೇತ್ರದಲ್ಲಿ ಬಿಜೆಪಿ ಅಥವಾ ಜೆಡಿಎಸ್ ಕನಿಷ್ಟ ಐದತ್ತು ಸಾವಿರ ಮತಗಳನ್ನು ಹೊಂದಿದ್ದರೂ ಇಬ್ಬರ ಮತಗಳು ಕ್ರೂಢೀಕರಣ ಆದರೆ, ಕಾಂಗ್ರೆಸ್ನಲ್ಲಿ ಕಡಿಮೆ ಅಂತರದಲ್ಲಿ ಗೆಲ್ಲುವಂತಹ ಅಭ್ಯರ್ಥಿಗಳ ಗೆಲುವಿಗೆ ಅಡ್ಡಿಯಾಗುವುದರಲ್ಲಿ ಅಭ್ಯಂತರ ಇಲ್ಲ. ಅದರಲ್ಲೂ ಹಳೇ ಮೈಸೂರು ಭಾಗದಲ್ಲಿ ಇತ್ತೀಚಿಗೆ ಬಿಜೆಪಿ ಕೂಡ ನೆಲೆ ಕಂಡುಕೊಂಡಿದೆ. ಇನ್ನು ಉತ್ತರ ಕರ್ನಾಟಕ ಭಾಗದಲ್ಲೂ ಜೆಡಿಎಸ್ ಸಣ್ಣ ಪ್ರಮಾಣದಲ್ಲಿ ಶಕ್ತಿ ಹೊಂದಿದೆ. ಇವರಿಬ್ಬರ ಮೈತ್ರಿ ಬಗ್ಗೆ ಕಾಂಗ್ರೆಸ್ ಚಿಂತಿಸಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ಕಾಂಗ್ರೆಸ್ ಮೈತ್ರಿ ಬಗ್ಗೆ ಎಚ್ಚರ ವಹಿಸಬೇಕಿದೆ.

 

Related posts

ಅಂಬಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ದಸರಾ ಆನೆಗಳಿಗೆ ಸ್ವಾಗತ: ವಿಶೇಷ ಪೂಜೆ ಸಲ್ಲಿಕೆ

ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಹರಿಸಿ- ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸೂಚನೆ.

ಡಿಕೆಶಿ ಮತ್ತೆ ತಿಹಾರ್  ಜೈಲಿಗೆ ಹೋಗುವ ಕಾಲ ಸಮೀಪಿಸಿದೆ ಎಂದ ಹೆಚ್.ಡಿಕೆಗೆ ತಿರುಗೇಟು ಕೊಟ್ಟ ಡಿಸಿಎಂ ಡಿ.ಕೆ ಶಿವಕುಮಾರ್..