ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಭರ್ಜರಿ ಕಾರ್ಯಾಚರಣೆ: ರೌಡಿಗಳ ಮನೆಗಳ ಮೇಲೆ ದಾಳಿ ಮಾಡಿ ಪೊಲೀಸರಿಂದ ಪರಿಶೀಲನೆ.

ಶಿವಮೊಗ್ಗ: ಜಿಲ್ಲೆಯಾದ್ಯಂತ ಇಂದು ಭರ್ಜರಿ ಕಾರ್ಯಾಚರಣೆ ನಡೆಸಿರುವ ಪೊಲೀಸರು ಬೆಳಕು ಹರಿಯುವ ಮುನ್ನವೇ ರೌಡಿಗಳ ಮನೆಬಾಗಿಲು ತಟ್ಟಿ, ರೌಡಿಗಳಿಗೆ ಬಿಗ್ ಶಾಕ್ ನೀಡಿದ್ದಾರೆ.
ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆ ಹಿತದೃಷ್ಟಿಯಿಂದ ಮುಂಜಾಗರೂಕತಾ ಕ್ರಮವಾಗಿ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಜಿ.ಕೆ. ಅವರ ನೇತೃತ್ವದಲ್ಲಿ ಇಂದು ಬೆಳಗಿನಜಾವ ಜಿಲ್ಲೆಯಾದ್ಯಂತ ರೌಡಿಗಳ ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಎಲ್ಲಾ ಉಪ ವಿಭಾಗದಲ್ಲಿ ಹಾಗೂ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಪೊಲೀಸ್ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಪ್ರತ್ಯೇಕ ತಂಡಗಳು ಏಕಕಾಲದಲ್ಲಿ ರೌಡಿಗಳ ಮನೆಗಳ ಮೇಲೆ ದಾಳಿ ಮಾಡಿದ್ದು, ಅವರ ಹಾಜರಾತಿ, ಹಾಲಿ ಮಾಡುತ್ತಿರುವ ಕೆಲಸ ಮನೆಯಲ್ಲಿ ಮಾದಕ ವಸ್ತು ಹಾಗೂ ಮಾರಕಾಸ್ತ್ರಗಳನ್ನಿಟ್ಟುಕೊಂಡಿರುವ ಬಗ್ಗೆ ಪರಿಶೀಲನೆ ನಡೆಸಲಾಯಿತು.
ಮುಂಬರುವ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಸಂದರ್ಭದಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಮತತು ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ, ಶಾಂತಿಗೆ ಭಂಗವನ್ನು ಉಂಟು ಮಾಡುವಂತಹ ಕೃತ್ಯಗಳಲ್ಲಿ ಭಾಗಿಯಾಗದಂತೆ ಸೂಕ್ತ ಎಚ್ಚರಿಕೆ ನೀಡಲಾಯಿತು.
ಶಿವಮೊಗ್ಗ ಎ ಉಪ ವಿಭಾಗದಲ್ಲಿ 39, ಶಿವಮೊಗ್ಗ ಬಿ ಉಪ ವಿಭಾಗದಲ್ಲಿ 38, ಭದ್ರಾವತಿ ಉಪ ವಿಭಾಗದಲ್ಲಿ 72, ಸಾಗರ ಉಪ ವಿಭಾಗದಲ್ಲಿ 21, ಶಿಕಾರಿಪುರ ಉಪ ವಿಭಾಗದಲ್ಲಿ 27, ತೀರ್ಥಹಳ್ಳಿ ಉಪ ವಿಭಾಗದಲ್ಲಿ 44 ಸೇರಿ ಜಿಲಾದÀ್ಯಂತ ಒಟ್ಟು 241 ರೌಡಿಗಳ ಮನೆಗಳಲ್ಲಿ ಪರಿಶೀಲನೆ ನಡೆಸಲಾಗಿದೆ.
ಈ ಸಂದರ್ಭದಲ್ಲಿ ಎಲ್ಲಾ ಠಾಣೆಗಳ ನಿರೀಕ್ಷಿಕರು, ಉಪ ನಿರೀಕ್ಷಿಕರು ಮತ್ತು ಪೊಲೀಸ್ ಸಿಬ್ಬಂದಿ ಹಾಜರಿದ್ದರು.

Related posts

 ಮುನಿರತ್ನಗೆ ಅನುದಾನ ಬೇಕಿದ್ರೆ ಸಿಎಂ ಬಳಿ ಹೋಗಿ ಕೇಳಲಿ- ಸಂಸದ ಡಿ.ಕೆ ಸುರೇಶ್  ತಿರುಗೇಟು.

ಒಂದು ದಿನ ಮಳೆ ಆಗದಿದ್ರೆ ಸರ್ಕಾರಕ್ಕೆ 1 ಸಾವಿರ ಕೋಟಿ ನಷ್ಟ- ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ.

ಮೈಸೂರಿನ ಕೆಆರ್‌ ನಗರದಲ್ಲಿ ಎರಡು ಅಪರಿಚಿತ ಶವ ಪತ್ತೆ

TOD News