ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ತಮಗೆ ಎಐಸಿಸಿ ಶಿಸ್ತು ಸಮಿತಿ ನೀಡಿರುವ ಶೋಕಾಸ್ ನೋಟಿಸ್ ಕುರಿತು ಕಾಂಗ್ರೆಸ್ ಎಂಎಲ್ ಸಿ ಬಿ.ಕೆ ಹರಿಪ್ರಸಾದ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ನೋಟಿಸ್ ಬಗ್ಗೆ ವಾಟ್ಸಾಪ್ ನಲ್ಲಿ ನೋಡಿದೆ. ಇಂದು ಕಾಪಿ ಬರಬಹುದು. ನೋಟಿಸ್ ನನಗೂ ಪಕ್ಷಕ್ಕೂ ಇರುವ ಸಂಬಂಧ. ನೋಟಿಸ್ ಅಧಿಕೃತವಾಗಿ ನನ್ನ ಕೈಗೆ ಸಿಕ್ಕಿದಾಗ ಉತ್ತರ ಕೊಡುತ್ತೇನೆ. 10 ದಿನ ಸಮಯ ಕೊಟ್ಟಿದ್ದಾರೆಂದು ಗೊತ್ತಾಗಿದೆ. ಶೋಕಾಸ್ ನೋಟಿಸ್ ನನ್ನ ಕೈಗೆ ಸಿಕ್ಕಾಗ ಉತ್ತರ ನೀಡುತ್ತೇನೆ. ಎಐಸಿಸಿಗೆ ಉತ್ತರ ಕೊಡುತ್ತೇನೆ ಎಂದು ತಿಳಿಸಿದರು.
ಇತ್ತೀಚೆಗೆ ನಡೆದ ಅತಿ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಬಿ.ಕೆ.ಹರಿಪ್ರಸಾದ್ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದರು. ಎಚ್ಚತ್ತ ಹೈಕಮಾಂಡ್ ಬಿಕೆ ಹರಿಪ್ರಸಾದ್ ಗೆ ಶೋಕಾಸ್ ನೋಟಿಸ್ ಜಾರಿಮಾಡಿದ್ದು, ಹತ್ತು ದಿನಗಳಲ್ಲಿ ಉತ್ತರಿಸುವಂತೆ ಸೂಚಿಸಿದೆ ಎನ್ನಲಾಗಿದೆ.