ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ರಾಜ್ಯದ 105  ತಾಲ್ಲೂಕುಗಳು ಬರ ಪೀಡಿತ: ಸರ್ಕಾರದಿಂದ ಅಧಿಕೃತ ಘೋಷಣೆ.

ಬೆಂಗಳೂರು :  ರಾಜ್ಯದಲ್ಲಿ 161 ತಾಲ್ಲೂಕುಗಳು ತೀವ್ರ ಬರಪೀಡಿತ  ಎಂದು ರಾಜ್ಯ ಸರ್ಕಾರ ಅಧಿಕೃತ ಘೋಷಣೆ ಮಾಡಿದೆ.

ರಾಜ್ಯ ಸಚಿವ ಸಂಪುಟ ಉಪ ಸಮಿತಿಯ ಶಿಫಾರಸ್ಸಿನಂತೆ ರಾಜ್ಯದ 195 ತಾಲೂಕುಗಳು ಬರ ಪೀಡಿತ ಎಂದು ಅಧಿಕೃತವಾಗಿ ಘೋಷಣೆ ಮಾಡಿ ಆದೇಶ ಹೊರಡಿಸಿದೆ. ಜಿಲ್ಲಾಧಿಕಾರಿಗಳಿಂದ ಬೆಳೆಹಾನಿಯ ಸಮೀಕ್ಷೆಯ ವರದಿಯ ಅನುಸಾರ 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲೂಕುಗಳ ಪೈಕಿ 195 ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಕಂಡು ಬಂದಿದೆ.  195 ತಾಲ್ಲೂಕುಗಳ ಪೈಕಿ 161 ತಾಲ್ಲೂಕುಗಳನ್ನು ತೀವ್ರ ಬರಪೀಡಿತ ತಾಲ್ಲೂಕು ಹಾಗೂ 34 ತಾಲೂಕುಗಳನ್ನು ಸಾಧಾರಣ ಬರಪೀಡಿತ ತಾಲೂಕು ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ 6 ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಯಾವುದೇ ಮೊದಲು ಅಲ್ಲಿಯವರೆಗೂ ಘೋಷಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ಬರ ನಿರ್ವಹಣೆಯ ಕಾರ್ಯಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಸೂಚಿಸಿದ್ದು, ಕಾಲ ಕಾಲಕ್ಕೆ ಎಸ್​ಡಿಆರ್​ಎಫ್, ಎನ್​ಡಿಆರ್​ಎಫ್ ನಿಯಮಗಳ ಅನ್ವಯ ಮಾರ್ಗಸೂಚಿಗಳನ್ನು ನೀಡಲಾಗುವುದು ಎಂದು ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ.

Related posts

ನಾನು‌ ಜೆಡಿಎಸ್ ರಾಜ್ಯಾಧ್ಯಕ್ಷನಾಗಿದ್ರೆ ಹೆಚ್.ಡಿ ಕುಮಾರಸ್ವಾಮಿಯವರನ್ನ 6 ವರ್ಷ ಅಮಾನತು ಮಾಡ್ತಿದ್ದೆ- ಎಂಎಲ್ ಸಿ ಹೆಚ್.ವಿಶ್ವನಾಥ್

ಆಸ್ಕರ್ ಪ್ರಶಸ್ತಿಗೆ ‘12th ಫೇಲ್’ ನಾಮನಿರ್ದೇಶನ..

ಕುವೆಂಪು ವಿವಿಯಿಂದ ರಾಷ್ಟ್ರ ಮತ್ತು ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಭಾಗವಹಿಸಲು ಆಯ್ಕೆಗೆ ಹೊರಟ ಸ್ವಯಂ ಸೇವಕಿಯರು.