ಬೆಂಗಳೂರು: ಭದ್ರಾ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸುವ ಸಂಬಂಧ ಇಂದು ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಗೃಹ ಕಚೇರಿಯಲ್ಲಿ ಸಭೆ ನಡೆಸಲಾಯಿತು.
ಈ ವೇಳೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ, ದಾವಣಗೆರೆ ಜಿಲ್ಲೆಯ ಶಾಸಕರು, ಹರಪನಹಳ್ಳಿ ಶಾಸಕರು, ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.