ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ರಾಜ್ಯಮಟ್ಟದ ಗಾಯನ ಸ್ಪರ್ಧೆಗೆ ವಿದ್ಯಾ ಎಸ್, ಮಂಜುನಾಥ್ ಟಿ.ಎನ್.

ಶಿವಮೊಗ್ಗ: ಸ್ಕೌಟ್ ದಳದ ನಾಯಕ ನಾಯಕಿಯರ ಜಿಲ್ಲಾ ಮಟ್ಟದ ಗೀತ ಗಾಯನ ಸ್ಪರ್ಧೆಯಲ್ಲಿ ಜ್ಞಾನದೀಪ ಶಾಲೆಯ ವಿದ್ಯಾರ್ಥಿನಿ ವಿದ್ಯಾ ಎಸ್. ಹಾಗೂ ಹೋಲಿ ರೀಡಿಮರ್ ಎಚ್‌ಪಿಎಸ್ ಶಾಲೆಯ ಟಿ.ಎನ್.ಮಂಜುನಾಥ್ ಅವರು ರಾಜ್ಯಮಟ್ಟದ ದೇಶಭಕ್ತಿ ಗೀತ ಗಾಯನ ವಿಭಾಗಕ್ಕೆ ಆಯ್ಕೆಯಾಗಿದ್ದಾರೆ.

ನಾಡೋಜ ಪ್ರಶಸ್ತಿ ಪುರಸ್ಕೃತ ಡಾ. ಗೋ.ರು.ಚನ್ನಬಸಪ್ಪ ಹೆಸರಿನಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ವತಿಯಿಂದ ಜಿಲ್ಲಾ ಸ್ಕೌಟ್ ಭವನದಲ್ಲಿ ಸ್ಕೌಟ್ ನ ದಳ ನಾಯಕ ನಾಯಕಿಯರ ಜಿಲ್ಲಾ ಮಟ್ಟದ ಗೀತ ಗಾಯನ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಕಾರ್ಯದರ್ಶಿ ಪರಮೇಶ್ವರ್ ಎಚ್.ಮಾತನಾಡಿ, ದಳ ನಾಯಕರು, ಸ್ಕೌಟ್ ಮತ್ತು ಗೈಡ್ಸ್ ಮಕ್ಕಳಲ್ಲಿ ದೇಶಪ್ರೇಮ, ಸೇವಾ ಮನೋಭಾವನೆ ಹಾಗೂ ಸಂಸ್ಕಾರ ಬೆಳೆಸುವಲ್ಲಿ ಇಂತಹ ಕಾರ್ಯಕ್ರಮಗಳು ಸಹಕಾರಿ ಆಗುತ್ತವೆ. ರಾಜ್ಯ ಸಂಸ್ಥೆಯು ಎಲ್ಲ ಜಿಲ್ಲಾ ಸಂಸ್ಥೆಗಳಲ್ಲಿ ಸ್ಪರ್ಧೆ ನಡೆಸುತ್ತಿದೆ. ಇದರ ಸದುಪಯೋಗ ಪಡಿಸಿಕೊಂಡು ರಾಜ್ಯಮಟ್ಟದಲ್ಲಿ ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಕೌಟ್ ಜಿಲ್ಲಾ ಆಯುಕ್ತ ಕೆ.ಪಿ.ಬಿಂದುಕುಮಾರ್, ಜಿಲ್ಲಾ ಮಟ್ಟದಿಂದ ರಾಜ್ಯಮಟ್ಟಕ್ಕೆ ಆಯ್ಕೆಯಾದವರಿಗೆ ಪ್ರಶಸ್ತಿ ಪತ್ರ, ನೆನಪಿನ ಕಾಣಿಕೆ ವಿತರಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿ, ಸೇವಾ ಚಟುವಟಿಕೆಗಳ ಜತೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಮಕ್ಕಳ ಮನಸ್ಸನ್ನು ಅರಳಿಸುತ್ತವೆ. ಮಕ್ಕಳಿಗೆ ಮುಂದಿನ ದಿನಗಳಲ್ಲಿ ತರಬೇತಿ ನೀಡಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.

ರಾಜ್ಯ ಸಂಘಟನಾ ಸಹಾಯಕ ಆಯುಕ್ತ ಭಾರತಿ ಡಯಾಸ್, ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯ್‌ಕುಮಾರ್, ಸ್ಥಳೀಯ ಸಂಸ್ಥೆಗಳ ಕಾರ್ಯದರ್ಶಿ ರಾಜೇಶ ವಿ.ಅವಲಕ್ಕಿ, ಮಲ್ಲಿಕಾರ್ಜುನ ಕಾನೂರ್, ತೀರ್ಪುಗಾರರಾದ ಸಂಧ್ಯಾರಾಣಿ, ಅನಿತಾ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

Related posts

ತಾಯಿ-ಮಗು ಆರೋಗ್ಯದಿಂದಿರಲು ರಕ್ತಹೀನತೆ ತಡೆಯಬೇಕು : ಡಾ.ರಾಜೇಶ್ ಸುರಗಿಹಳ್ಳಿ

ನ.22ರಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟ ಪ್ರತಿಭಟನೆ.

ರಾಗಿಗುಡ್ಡ ಘಟನೆ: ಪ್ರಚೋದನಾಕಾರಿ ಹೇಳಿಕೆಗಳಿಗೆ ಕಿವಿಗೊಡದೇ ಶಾಂತಿ ಕಾಪಾಡಬೇಕು-ಆಮ್ ಆದ್ಮಿ ಪಾರ್ಟಿ ಮನವಿ.