ಕನ್ನಡಿಗರ ಪ್ರಜಾನುಡಿ
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಉದ್ಯಮಿಗೆ ಚೈತ್ರಾ ಕುಂದಾಪುರ ಗ್ಯಾಂಗ್ ವಂಚನೆ ಕೇಸ್ : 8 ಆರೋಪಿಗಳ ಬಂಧನ: 2 ಕೋಟಿ ಹಣ ಜಪ್ತಿ.

 

ಬೆಂಗಳೂರು: ಬಿಜೆಪಿ ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂಪಾಯಿ ಪಡೆದು ಚೈತ್ರಾ ಕುಂದಾಪುರ ಗ್ಯಾಂಗ್ ನಿಂದ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 8 ಆರೋಪಿಗಳನ್ನ ಬಂಧಿಸಿ  2 ಕೋಟಿ ರೂ. ಹಣ ಜಪ್ತಿ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದರು.

ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿ ಮಾಹಿತಿ ನೀಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ವಂಚನೆ ಪ್ರಕರಣದಲ್ಲಿ ಇದುವರೆಗೆ 8 ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತ ಆರೋಪಿಗಳಿಂದ ಚಿನ್ನ, ನಗದು, ಠೇವಣಿ ಹಣ ಸೇರಿದಂತೆ ಒಟ್ಟು 2 ಕೋಟಿಗೂ ಹೆಚ್ಚು ಜಪ್ತಿ ಮಾಡಲಾಗಿದೆ. ಇನ್ನು ಈ ವಂಚನೆ ಪ್ರಕರಣದಲ್ಲಿ ಇನ್ನೂ ಹಲವರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು  ತಿಳಿಸಿದರು.

ಇನ್ನು ಈ ವಂಚನೆ ಪ್ರಕರಣದ  ತನಿಖೆ ಚುರುಕುಗೊಳಿಸಿದ ಸಿಸಿಬಿ ಪೊಲೀಸರು, ಚೈತ್ರಾ  ಕುಂದಾಪುರ ಬ್ಯಾಂಕ್ ನಲ್ಲಿ ಠೇವಣಿ ಇಟ್ಟಿದ್ದ 1 ಕೋಟಿ 8 ಲಕ್ಷ ರೂಪಾಯಿ ಹಣವನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಚೈತ್ರಾಳ ಮನೆಯಲ್ಲಿದ್ದ ಸುಮಾರು 65 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ಸಿಸಿಬಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ ಎನ್ನಲಾಗಿದೆ.

Related posts

ಕೆಇಎ ಪರೀಕ್ಷೆ ಅಕ್ರಮ ಕೇಸ್ :  ಕಿಂಗ್ ಪಿನ್ ಆರ್.ಡಿ ಪಾಟೀಲ್ ಅರೆಸ್ಟ್

13,352 ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆಗೆ ಗ್ರೀನ್ ಸಿಗ್ನಲ್ ನೀಡಿದ ಹೈಕೋರ್ಟ್.

ಕರ್ನಾಟಕ ರಾಜ್ಯೋತ್ಸವ ವಿಶಿಷ್ಟ ಆಚರಣೆ – ಯಶಸ್ವಿಗೊಳಿಸಲು ಡಿಸಿ ಮನವಿ