ಕನ್ನಡಿಗರ ಪ್ರಜಾನುಡಿ
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬಿಜೆಪಿ ಎದುರಿಸುವ ಪಾಠ ಕರ್ನಾಟಕದಿಂದ ಕಲಿತೆವು, 4 ರಾಜ್ಯಗಳಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸ- ರಾಹುಲ್ ಗಾಂಧಿ.

ನವದೆಹಲಿ: ಜನರ ಗಮನವನ್ನು ಬೇರೆಡೆ ಹರಿಸಿ ಚುನಾವಣೆ ಗೆಲ್ಲುವ ಬಿಜೆಪಿಯ ತಂತ್ರವನ್ನು ಹೇಗೆ ಎದುರಿಸಬೇಕು ಎಂಬ ಪಾಠವನ್ನು  ಕರ್ನಾಟಕದಿಂದ ಕಲಿತಿದ್ದೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನುಡಿದರು.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕಾಂಗ್ರೆಸ್ ರಾಹುಲ್ ಗಾಂಧಿ, ಬಿಜೆಪಿ ಹೇಗೆ ಎದುರಿಸಬೇಕು ಎಂಬ ಪಾಠವನ್ನ ಕರ್ನಾಟಕ ಚುನಾವಣೆಯಲ್ಲಿ ನಾವು ಕಲಿತಿದ್ದೇವೆ. ಮುಂದಿನ ಪಂಚರಾಜ್ಯ ಚುನಾವಣೆಯಲ್ಲಿ 4 ರಾಜ್ಯಗಳಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಬಿಜೆಪಿಯು ತನ್ನ ಸಾಧನೆಗಳಿಂದಲ್ಲ, ಬದಲಾಗಿ ಜನರ ಗಮನವನ್ನು ಬೇರೆಡೆ ಹರಿಸಿ ಮತ್ತು ವಿಷಯಗಳನ್ನು ತಿರುಚುವ ಮೂಲಕ ಚುನಾವಣೆಗಳಲ್ಲಿ ಗೆಲುವು ಸಾಧಿಸುತ್ತಿತ್ತು. ಹೀಗಾಗಿ ಏನನ್ನೂ ತಿರುಚಲು ಬಿಜೆಪಿಗೆ ಸಾಧ್ಯವಾಗದ ರೀತಿಯಲ್ಲಿ ಕರ್ನಾಟಕದಲ್ಲಿ ನಾವು ಬಿಜೆಪಿಯನ್ನು ಎದುರಿಸಿ ಗೆಲುವು ಸಾಧಿಸಿದೆವು. ಬೇರೆಡೆ ಗಮನ ಹರಿಸುವ ಬಿಜೆಪಿಯ ಯೋಜನೆಯನ್ನು ಎದುರಿಸುವುದು ಹೇಗೆ ಎಂದು ಕರ್ನಾಟಕ ಚುನಾವಣೆಯಿಂದ ನಾವು ಪಾಠ ಕಲಿತಿದ್ದೇವೆ’ ಎಂದು ರಾಹುಲ್ ಗಾಂಧಿ ತಿಳಿಸಿದರು.

ಅಲ್ಲದೇ ತೆಲಂಗಾಣ, ಮಧ್ಯ ಪ್ರದೇಶ, ಛತ್ತೀಸ್ ಗಢದಲ್ಲಿ ಕಾಂಗ್ರೆಸ್ ಜಯ ಖಚಿತವಾಗಿದೆ ಮತ್ತು ರಾಜಸ್ಥಾನದಲ್ಲಿ ಅತ್ಯಂತದ ಸಮೀಪದ ಸ್ಪರ್ಧೆ ಇದ್ದು, ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿದೆ. ಅಲ್ಲದೆ, ಮುಂಬರುವ ದಿನಗಳಲ್ಲಿ ನಡೆಯಲಿರುವ ಎಲ್ಲ ವಿಧಾನಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. 2024ರ ಲೋಸಕಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಆಘಾತ ಎದುರಿಸಲಿದೆ ಎಂದರು.

ಅಲ್ಲದೇ ಜಾತಿಗಣತಿಯಿಂದ ಪ್ರಸ್ತುತ ಸಮಸ್ಯೆಗಳಿಂದ ಜನರ ಗಮನ ಬೇರೆಡೆ ಹರಿಸಲು ಬಿಜೆಪಿಯು ಒಂದು ರಾಷ್ಟ್ರ ಒಂದು ಚುನಾವಣೆ ಮತ್ತು ಇಂಡಿಯಾ ಹೆಸರು ಬದಲಾವಣೆ ಬಗ್ಗೆ ಮಾತನಾಡುತ್ತಿದ್ದಾರೆ. ಅಲ್ಲದೇ ಇದಕ್ಕಾಗಿಯೇ ಬಿಜೆಪಿ ಸಂಸದ ರಮೇಶ್ ಬಿದೂರಿ ಮತ್ತು ಕಾಂಗ್ರೆಸ್ ಸಂಸದ ದಾನಿಶ್ ಅಲಿ ಅವರ ವಾಗ್ವಾದದ ವಿವಾದ ತಂದಿದ್ದಾರೆ. ಇದು ಗೊಂದಲಗಳನ್ನು ಸೃಷ್ಟಿಸುವ ಬಿಜೆಪಿಯ ತಂತ್ರವಾಗಿದೆ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು.

 

Related posts

ಬೆಂಗಳೂರು ವಿಭಾಗ ಮಟ್ಟದ ಷಟಲ್ ಬ್ಯಾಡ್ಮಿಂಟನ್ ನಲ್ಲಿ  ಗುರುಪುರದ ಬಿ ಜಿ ಎಸ್ ಶಾಲೆಗೆ ಬಂಗಾರದ ಪದಕ

ಅಂತೂ ಮದ್ಯಪ್ರಿಯರಿಗೊಂದು ಗುಡ್ ನ್ಯೂಸ್: ಏನು ಗೊತ್ತೆ..?

ಶೇ. 80ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್.