ಕನ್ನಡಿಗರ ಪ್ರಜಾನುಡಿ
ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳು

ರಾಷ್ಟ್ರಧ್ವಜ ತಯಾರಿಕೆಯ ಗರಗ ಕ್ಷೇತ್ರೀಯ ಸೇವಾ ಸಂಘಕ್ಕೆ 2023 ರ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರಕಟ

ಚಿಕ್ಕಮಗಳೂರು:ರಾಷ್ಟ್ರ ಧ್ವಜಕ್ಕೆ ಬೇಕಾಗುವ ಬಟ್ಟೆ ಉತ್ಪಾದನೆಯಲ್ಲಿ ತೊಡಗಿಸಿಕೊಂಡಿರುವ ದೇಶದ ಮೊದಲ ಖಾದಿ ಗ್ರಾಮೋದ್ಯೋಗ ಸಂಸ್ಥೆ ಎಂಬ ಹಿರಿಮೆ ಹೊಂದಿರುವ ಧಾರವಾಡ ಜಿಲ್ಲೆಯ ಗರಗ ಕ್ಷೇತ್ರೀಯ ಸೇವಾ ಸಂಘವು   2023 ರ  ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಭಾಜನವಾಗಿದೆ.

   ಕರ್ನಾಟಕ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಬಿ.ವೀರಪ್ಪ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಆಯ್ಕೆ ಸಮಿತಿಯ ತೀರ್ಮಾನವನ್ನು ಅಂಗೀಕರಿಸಿ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಆದೇಶ ಹೊರಡಿಸಿದೆ.

   ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜನ್ಮದಿನ ಅಕ್ಟೋಬರ್ 2 ರಂದು ಸಂಜೆ 4.30 ಕ್ಕೆ  ನಗರದ ಭಗವಾನ್ ಮಹಾವೀರ(ಇನ್‌ಫೆಂಟ್ರಿ) ರಸ್ತೆಯ ವಾರ್ತಾ ಸೌಧದ ಸುಲೋಚನ ಸಭಾಂಗಣದಲ್ಲಿ  ನಡೆಯಲಿರುವ ವಿಶೇಷ ಸಮಾರಂಭದಲ್ಲಿ ಮುಖ್ಯಮಂತ್ರಿ  ಸಿದ್ದರಾಮಯ್ಯ  ಅವರು ಗರಗ ಕ್ಷೇತ್ರೀಯ ಸೇವಾ ಸಂಘಕ್ಕೆ  ಐದು ಲಕ್ಷ ರೂಪಾಯಿ ನಗದು ಒಳಗೊಂಡ ರಾಜ್ಯ ಸರ್ಕಾರದ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.

 ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉಪಸ್ಥಿತರಿರುವರು, ಶಾಸಕ ರಿಜ್ವಾನ್ ಅರ್ಷದ್ ಸಮಾರಂಭದ ಅಧ್ಯಕ್ಷತೆ ವಹಿಸುವರು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ  ಕಾರ್ಯದರ್ಶಿಯವರೂ ಆಗಿರುವ ಮುಖ್ಯಮಂತ್ರಿಯವರ  ಕಾರ್ಯದರ್ಶಿ ಎನ್.ಜಯರಾಮ್ ,ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ಎಂ.ನಿಂಬಾಳ್ಕರ್  ಸೇರಿದಂತೆ ಹಲವು ಗಣ್ಯರು ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

Related posts

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ನ.29ರವರೆಗೆ ಭಾರಿ ಮಳೆ-ಹವಮಾನ ಇಲಾಖೆ ಮುನ್ಸೂಚನೆ.

ಗ್ರಾಮೀಣ ಜನತೆಗೊಂದು ಮಾಹಿತಿ : ಇನ್ಮುಂದೆ `ಬಾಪೂಜಿ ಸೇವಾ ಕೇಂದ್ರಗಳಲ್ಲಿ ಈ ಎಲ್ಲಾ ಸೇವೆಗಳು ಲಭ್ಯ.

ಪ್ರಕೃತಿಯ ವಿಸ್ಮಯವು ಛಾಯಾಚಿತ್ರಗಳಲ್ಲಿ ಸೆರೆ- ಡಾ. ಶೇಖರ್ ಗೌಳೇರ್