ಶಿವಮೊಗ್ಗ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ,ಶಿವಮೊಗ್ಗ. ಹಾಗೂ ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಶಿವಮೊಗ್ಗ. ಇವರ ಸಂಯುಕ್ತ ಆಶ್ರಯದಲ್ಲಿ ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 17 ವರ್ಷ ವಯೋಮಿತಿ ಯೊಳಗಿನ ಪ್ರೌಢ ಶಾಲಾ ಬಾಲಕಿಯರು ತಾಲ್ಲೂಕು ಮಟ್ಟದ ಖೋ – ಖೋ ಪಂದ್ಯಾವಳಿಯಲ್ಲಿ, ತಮಡಿಹಳ್ಳಿ ಸರ್ಕಾರಿ ಪ್ರೌಢಶಾಲೆ ಬಾಲಕಿಯರು, ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಅತ್ಯುತ್ತಮ ಆಟದ ಪ್ರದರ್ಶನ ನೀಡಿ, ಉತ್ತಮ ದಾಳಿ, ಅಷ್ಟೇ ರಕ್ಷಣಾತ್ಮಕ ಆಟ ಆಡಿ, ಬಾಲಕಿಯರು ಪ್ರಥಮ ಸ್ಥಾನ ಪಡೆದು, ಬಹುಮಾನ ಮತ್ತು ಪ್ರಶಸ್ತಿ ಪತ್ರಗಳನ್ನು ಸಂಸ್ಥೆಯ ಮಡಿಲಿಗೆ ತಂದು ಕೊಟ್ಟಿದ್ದಾರೆ
ಜಿಲ್ಲಾ ಮಟ್ಟದಲ್ಲಿ ಭಾಗವಹಿಸುತ್ತಿರುವುದು ಮತ್ತೊಂದು ವಿಶೇಷ.
ಈ ಕ್ರೀಡಾ ಪ್ರತಿಭೆಗಳ ಮುಂದಿನ ಕ್ರೀಡಾ ಜೀವನ ಯಶಸ್ವಿಯಾಗಲೆಂದು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಸದಸ್ಯರು , ಮುಖ್ಯ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರಾದ ಎಸ್. ಕಾಳಾನಾಯ್ಕ , ತಂಡದ ವ್ಯವಸ್ಥಾಪಕರಾದ ಶ್ರೀಮತಿ ಜ್ಯೋತಿ ಹಾಗೂ ಅಧ್ಯಾಪಕರು, ಸಿಬ್ಬಂದಿ ವರ್ಗದವರು, ಮತ್ತು ತಮಡಿಹಳ್ಳಿ ಗ್ರಾಮದ ಗ್ರಾಮಸ್ಥರು ಶುಭ ಹಾರೈಸಿದ್ದಾರೆ.