ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ನಾಳಿನ ಕರ್ನಾಟಕ ಬಂದ್ ಗೆ ಶಿವಮೊಗ್ಗ ಜಿಲ್ಲೆಯ ವಿವಿಧ ಸಂಘಟನೆಗಳಿಂದ ಬೆಂಬಲ

ಶಿವಮೊಗ್ಗ: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವುದನ್ನು ವಿರೋಧಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೆ.29ರಂದು ಕರೆನೀಡಿರುವ ಕರ್ನಾಟಕ ಬಂದ್‍ಗೆ ಜಿಲ್ಲೆಯಲ್ಲಿಯೂ ಅನೇಕ ಸಂಘಟನೆಗಳು ಬೆಂಬಲ ನೀಡಿವೆ.
ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ನಡುವೆ ಕೆಆರ್‍ಎಸ್‍ನಲ್ಲಿ ನೀರಿಲ್ಲದಿದ್ದರೂ ತಮಿಳುನಾಡಿಗೆ ನೀರು ಬಿಟ್ಟಿರುವುದು ಸರಿಯಲ್ಲಿ. ನಾಡಿನ ನೆಲ., ಜಲ, ಭಾಷೆ ವಿಷಯದಲ್ಲಿ ಎಲ್ಲರೂ ಒಟ್ಟಾಗಬೇಕು. ಹೀಗಾಗಿ ಬಂದ್‍ಗೆ ಬೆಂಬಲ ನೀಡಬೇಕೆಂದು ಸಂಘಟನೆಗಳ ಮುಖಂಡರು ಮನವಿ ಮಾಡಿದ್ದಾರೆ.
ರೈತಸಂಘ, ವಿವಿಧ ಕನ್ನಡಪರ ಸಂಘಟನೆಗಳು ಹಾಗೂ ವಿವಿಧ ವೃತ್ತಿಪರ ಸಂಘಟನೆಗಳು ಬಂದ್‍ಗೆ ಬೆಂಬಲ ನೀಡಿವೆ.
ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ತೀರ್ಪು ನೀಡುವ ಮೊದಲೇ ತಮಿಳುನಾಡಿಗೆ ನೀರು ಬಿಟ್ಟಿರುವುದು ಬಹಳ ಖಂಡನೀಯ. ನಾಳೆ ನಡೆಯಲಿರುವ ಬಂದ್‍ಗೆ ಸಂಪೂರ್ಣ ಸಹಕಾರ ರೈತ ಸಂಘ ನೀಡುತ್ತದೆ ಎಂದು ರೈತಸಂಘದ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ತಿಳಿಸಿದ್ದಾರೆ.

 

Related posts

ಕಷ್ಟಗಳನ್ನು ಅರಗಿಸಿಕೊಂಡು ಪರಿಪಕ್ವವಾದವರು ಆರ್.ಎಂ ಮಂಜುನಾಥ ಗೌಡರು-ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ನುಡಿ

ಕೆ.ಎ. ದಯಾನಂದ್ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ವಾಚನಾಲಯ ಕಟ್ಟಡ ಲೋಕಾರ್ಪಣೆ

ಸಲಿಂಗ ವಿವಾಹ ಮಾನ್ಯತೆ ವಿಚಾರವಾಗಿ ಸರ್ಕಾರ ಸಮಿತಿ ರಚಿಸಲಿ- ಸುಪ್ರೀಂಕೋರ್ಟ್ ಸಲಹೆ.