ಕನ್ನಡಿಗರ ಪ್ರಜಾನುಡಿ
ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ರಾಜ್ಯದ ಪ್ರತಿ ಶಾಸಕರ ಕ್ಷೇತ್ರಕ್ಕೆ ಮೂರು ಕೆ ಪಿ ಎಸ್ ಶಾಲೆ – ಸಚಿವ ಮಧು ಬಂಗಾರಪ್ಪ

ಚಿಕ್ಕಮಗಳೂರು : ರಾಜ್ಯದ ಪ್ರತಿ ಶಾಸಕರ ಕ್ಷೇತ್ರಕ್ಕೆ ತಲಾ ಮೂರು ಕೆ ಪಿ ಎಸ್ ಶಾಲೆಗಳನ್ನು ಮಂಜೂರು  ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು

ತರೀಕೆರೆ ತಾಲೂಕಿನ ಬಾವಿಕೆರೆಯಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಗುಂಪು ಆಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

 ಸರಿಯಾಗಿ ಓದಿ ಉತ್ತೀರ್ಣರಾಗಲು ವಿದ್ಯಾರ್ಥಿಗಳಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ತಾವು ಈ ಬಾರಿ ಒಂದೇ

   ಕೆಪಿಎಸ್ ಶಾಲೆಗಳನ್ನು ತೆರೆಯುವುದರಿಂದ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣ ಹೆಚ್ಚುತ್ತದೆ ಜೊತೆಗೆ ಶಿಕ್ಷಕರ ಕೊರತೆ ನೀಗುತ್ತದೆ ಎಂದು ತಿಳಿಸಿದರು.  ವರ್ಷದಲ್ಲಿ ಮೂರು ಬಾರಿ ಬೋರ್ಡ್ ಎಕ್ಸಾಮ್ ನಡೆಸಿರುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು
ತಾವು ಒಂದೇ ವರ್ಷದಲ್ಲಿ ಮೂರು ಬಾರಿ ಬೋರ್ಡ್ ಎಕ್ಸಾಮ್ ನಡೆಸಿದ್ದರಿಂದಾಗಿ ಫೇಲಾದ ವಿದ್ಯಾರ್ಥಿಗಳಿಗೆ ಒಂದು ವರ್ಷ ವೇಸ್ಟ್ ಆಗುವುದು ತಪ್ಪಿತು ರಾಜ್ಯದ 42 ಸಾವಿರ ವಿದ್ಯಾರ್ಥಿಗಳಿಗೆ ಆ ವರ್ಷದಲ್ಲೇ ಮತ್ತೆ ಪರೀಕ್ಷೆ ಎದುರಿಸಿ  ಪಾಸ್ ಆಗಲು ಸಾಧ್ಯವಾಯಿತು ಎಂದರು
ಒಂದೇ ವರ್ಷದಲ್ಲಿ ಮೂರು ಬಾರಿ ಬೋರ್ಡ್ ಎಕ್ಸಾಮ್ ನಡೆಸಿರುವುದು ದೇಶದ ಇತಿಹಾಸದಲ್ಲಿ ಇದೇ ಪ್ರಥಮವಾಗಿದೆ ಎಂದ ಅವರು ಈ ಎಕ್ಸಾಮ್ ಗಳಲ್ಲಿ ರಾಜ್ಯದ ಒಂದು ಲಕ್ಷದ ಇಪ್ಪತ್ತು ಸಾವಿರ ವಿದ್ಯಾರ್ಥಿಗಳು ಮರು ಪರೀಕ್ಷೆ ಬರೆದಿದ್ದು ಅದರಲ್ಲಿ 42 ಸಾವಿರ ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಆ ಎಲ್ಲಾ ವಿದ್ಯಾರ್ಥಿಗಳು ಇದೇ ವರ್ಷ ಕಾಲೇಜಿಗೆ ದಾಖಲಾಗುತ್ತಾರೆ ಎಂದು ತಿಳಿಸಿದರು

  ಮುಂದಿನ ವರ್ಷ ಎಸ್ ಎಸ್ ಎಲ್ ಸಿ ಗೂ ವರ್ಷದಲ್ಲಿ ಮೂರು ಬಾರಿ ಬೋರ್ಡ್ ಎಕ್ಸಾಮ್ ನಡೆಸಲಾಗುವುದು ಎಂದು ಹೇಳಿದರು

 ಈ ಹಿಂದೆ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ಮೊಟ್ಟೆ ನೀಡಲಾಗುತ್ತಿತ್ತು  ತಾವು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಕ್ಕಳ ಪರಿಸ್ಥಿತಿಯನ್ನು ಮನವರಿಕೆ ಮಾಡಿ ಈಗ ಎರಡು ಮೊಟ್ಟೆ ನೀಡುವ ಕೆಲಸ ಆರಂಭಿಸಿದ್ದೇವೆ ಎಂದರು

ಮುಂದಿನ ವರ್ಷದಿಂದ ಮಕ್ಕಳ ಶಾಲಾ ಬ್ಯಾಗಿನ ಹೊರೆಯನ್ನು ಅರ್ಧದಷ್ಟು ಕಡಿಮೆ ಮಾಡಲಾಗುವುದು ಆ ದಿನಕ್ಕೆ ಅಗತ್ಯವಿರುವ ಪುಸ್ತಕಗಳನ್ನು ಮಾತ್ರ ತೆಗೆದುಕೊಂಡು ಹೋಗಲು ಅನುವು ಮಾಡಿಕೊಡಲಾಗುವುದು ಎಂದು ತಿಳಿಸಿದರು
ಶಿಕ್ಷಣ ಇಲಾಖೆ ಎದುರುಸುತ್ತಿರುವ ಸಮಸ್ಯೆಗಳು ಪರಿಹಾರಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಲ್ಲವನ್ನೂ ಬಗೆಹರಿಸಲು ಸಾಧ್ಯವಾಗದಿದ್ದರೂ ಕೆಲವನ್ನಾದರೂ ಖಂಡಿತ ಪರಿಹರಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ತರೀಕೆರೆ ಶಾಸಕರಾದ ಶ್ರೀನಿವಾಸ್, ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಮಾಜಿ ಸಂಸದರಾದ ಬಿ.ಎನ್. ಚಂದ್ರಪ್ಪನವರು ,  ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಡಾ. ಅಂಶುಮತ್, ರಾಜ್ಯ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಜಿ.ಡಿ.ಮಂಜುನಾಥ್ , ಕಾಂಗ್ರೆಸ್ ಮುಖಂಡ ರಾಜೇಶ್ ಶೆಟ್ಟಿ  ಮತ್ತಿತರರು ಉಪಸ್ಥಿತರಿದ್ದರು.

Related posts

ರಾಗಿಗುಡ್ಡ ಘಟನೆ ಕುರಿತು ಬಿಜೆಪಿ ಬೇಜವಾಬ್ದಾರಿ ಹೇಳಿಕೆ ನೀಡುವುದನ್ನು ನಿಲ್ಲಿಸಲಿ-ಹೆಚ್.ಎಸ್. ಸುಂದರೇಶ್ ಕಿಡಿ.

ಹೊಯ್ಸಳ ದೇವಾಲಯಗಳು ಯುನೆಸ್ಕೋ ವಿಶ್ವಪರಂಪರೆ ಪಟ್ಟಿಗೆ ಸೇರ್ಪಡೆ: ಸಿಎಂ ಸಂತಸ

ಯುವಸಮೂಹದಲ್ಲಿ ಮಾನಸಿಕ ಗೊಂದಲವೇ ಹೆಚ್ಚು- ಶಿಕ್ಷಣ ತಜ್ಞ ಸಮನ್ವಯ ಕಾಶಿ ಅಭಿಮತ