ಶಿವಮೊಗ್ಗ: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿಗೆ ಆರನೇ ಬಾರಿ ಅಧ್ಯಕ್ಷರಾಗಿ ಆಯ್ಕೆಯಾದ ಆರ್.ಎಂ. ಮಂಜುನಾಥ ಗೌಡರಿಗೆ ಪುಷ್ಪ ಗುಚ್ಛ ನೀಡುವ ಮೂಲಕ ಗೌರವ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ, ಪಾಲಿಕೆ ಸದಸ್ಯ ಧೀರರಾಜ್ ಹೊನ್ನವಿಲೆ, ಮಹಾನಗರ ಪಾಲಿಕೆಯ ಮಾಜಿ ಮಹಾಪೌರ ಎಸ್.ಕೆ. ಮರಿಯಪ್ಪ, ಮಹಾನಗರ ಪಾಲಿಕೆಯ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಐಡಿಯಲ್ ಗೋಪಿ, ಕಾಂಗ್ರೆಸ್ ಮುಖಂಡ ಹಿರಣ್ಣಯ್ಯ ಉಪಸ್ಥಿತರಿದ್ದರು.