ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಮಹಾತ್ಮ ಗಾಂಧಿ ‌ಅಲೋಚನೆ ಇಂದಿಗೂ ಸ್ಫೂರ್ತಿ- ಎಸ್.ರಾಜಶೇಖರ್ 

ಶಿವಮೊಗ್ಗ: ಮಹಾತ್ಮ ಗಾಂಧಿಯವರ ಚಿಂತನೆಗಳು ಇಡೀ ಜಗತ್ತಿನಲ್ಲಿ ಸ್ಫೂರ್ತಿಯ ಆಲೋಚನೆಗಳನ್ನು ಮೂಡಿಸಿದ್ದು, ಇಂದಿನ ಯುವ ಪೀಳಿಗೆಗೆ ಮಹಾತ್ಮ ಗಾಂಧಿಯವರು ಸದಾ ಕಾಲಕ್ಕೂ ಮಾರ್ಗದರ್ಶಕರು ಎಂದು ದೇಶಿಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್.ರಾಜಶೇಖರ್ ಹೇಳಿದರು.

ದೇಶಿಯ ವಿದ್ಯಾಶಾಲಾ ಸಮಿತಿ ವತಿಯಿಂದ ಡಿವಿಎಸ್ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜನ್ಮದಿನ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಹಾತ್ಮ ಗಾಂಧಿ ಅವರು ದೇಶಕ್ಕೆ ನೀಡಿದ ಕೊಡುಗೆಗಳ ಬಗ್ಗೆ ಯುವ ಸಮೂಹಕ್ಕೆ ಅರಿವು ಮೂಡಿಸಬೇಕು. ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಗಾಂಧೀಜಿ ಹಾಗೂ ಶಾಸ್ತ್ರೀಯವರ ಜೀವನ ಚರಿತ್ರೆ ಬಗ್ಗೆ ಮಾಹಿತಿ ನೀಡಬೇಕು. ವಿದ್ಯಾರ್ಥಿಗಳು ಗಾಂಧೀಜಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಆತ್ಮಕಥೆ ಅಧ್ಯಯನ ನಡೆಸಬೇಕು. ಇದು ಉತ್ತಮ ಬದುಕು ‌ ರೂಪಿಸಿಕೊಳ್ಳಲು ಸಹಕಾರಿ ಎಂದು ತಿಳಿಸಿದರು.

ಕನ್ನಡ ಉಪನ್ಯಾಸಕ ಡಾ. ಉಮೇಶ್ ಅಂಗಡಿ ಮಾತನಾಡಿ, ಬಾಲ್ಯದಿಂದಲೇ  ಮಹಾತ್ಮ ಗಾಂಧಿ ಅವರು ಹೆಚ್ಚು ಹೆಚ್ಚು ಪುಸ್ತಕಗಳನ್ನು ಅಧ್ಯಯನ ನಡೆಸುತ್ತಿದ್ದರು. ವಿವಿಧ ಘಟನೆಗಳಿಂದ ಪ್ರೇರಿತರಾಗಿ ಉತ್ತಮ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಸುತ್ತಿದ್ದರು. ಸತ್ಯ ದಾರಿಯಲ್ಲಿ ಬದುಕುವ ಸಂಕಲ್ಪ ಮಾಡಿದರು. ಗಾಂಧಿ ಅವರ ಕುರಿತು ಇಡೀ ವಿಶ್ವ ಗೌರವ ನೀಡುತ್ತಿತ್ತು ಎಂದು ಹೇಳಿದರು.

ಕನ್ನಡ ಉಪನ್ಯಾಸಕ ಎನ್.ಸಂದೇಶ್ ಮಾತನಾಡಿ, ಜೈ ಜವಾನ್ ಜೈ ಕಿಸಾನ್ ಘೋಷ ವಾಕ್ಯ ನೀಡಿದ ಮಹಾನ್ ವ್ಯಕ್ತಿ ಲಾಲ್ ಬಹಾದ್ದೂರ್ ಶಾಸ್ತ್ರಿ ಇಡೀ ದೇಶಕ್ಕೆ ಸ್ಫೂರ್ತಿ ದಾಯಕ ವ್ಯಕ್ತಿ ಆಗಿದ್ದರು. ಸರಳ ಜೀವನಶೈಲಿ ರೂಢಿಸಿಕೊಂಡಿದ್ದ ಶಾಸ್ತ್ರೀ ಅವರು ದೇಶದ ಪ್ರತಿಯೊಬ್ಬ ವ್ಯಕ್ತಿಗೂ ಪ್ರೇರಣೆ ಆಗಿದ್ದರು. ಲಾಲ್ ಬಹಾದ್ದೂರ್ ಶಾಸ್ತ್ರಿ ಜೀವನ ಆದರ್ಶಗಳನ್ನು ನಾವೂ ಕೂಡ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ದೇಶಿಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಎನ್.ರುದ್ರಪ್ಪ‌ ಕೊಳಲೆ ಅಧ್ಯಕ್ಷತೆ ವಹಿಸಿದ್ದರು. ದತ್ತಮೂರ್ತಿ ಭಟ್ ಅವರು ರಾಮ ಭಜನೆಯ ಮಹತ್ವ ಕುರಿತು ವಿಶೇಷ ಉಪನ್ಯಾಸ ನೀಡಿದರು. ಉಪನ್ಯಾಸಕರ ತಂಡವು ಸಭಾ ಕಾರ್ಯಕ್ರಮಕ್ಕೂ ಮುನ್ನ ಭಜನಾ ಕ್ರಮವನ್ನು ನಡೆಸಿಕೊಟ್ಟಿತು. ವಿವಿಧ ಸ್ಪರ್ಧೆಯಲ್ಲಿ ವಿಜೇತ ಉಪನ್ಯಾಸಕರಿಗೆ ಬಹುಮಾನ ವಿತರಿಸಲಾಯಿತು.

ದೇಶಿಯ ವಿದ್ಯಾಶಾಲಾ ‌ಸಮಿತಿ ಸಹ ಕಾರ್ಯದರ್ಶಿ ಡಾ. ಎ.ಸತೀಶ್ ಕುಮಾರ್ ಶೆಟ್ಟಿ, ಡಿವಿಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್, ಡಿವಿಎಸ್ ಸ್ವತಂತ್ರ ಪಿಯು ಕಾಲೇಜಿನ ಪ್ರಾಚಾರ್ಯ ಎ.ಇ.ರಾಜಶೇಖರ್, ಎಚ್.ಸಿ.ಉಮೇಶ್, ಆರ್.ನಿತಿನ್ ಮತ್ತಿತರರು ಉಪಸ್ಥಿತರಿದ್ದರು

Related posts

ರಾಜ್ಯ ಸರ್ಕಾರ ಪಠ್ಯಪುಸ್ತಕ ಬದಲಾಣೆ ಮಾಡಿರುವುದು ದ್ವೇಷದ ರಾಜಕಾರಣ-ಪರಿಷತ್ ಸದಸ್ಯ ಡಿ.ಎಸ್. ಅರುಣ್

ಸಮಸಮಾಜ ಯುವ ಸಮೂಹದ ಗುರಿಯಾಗಲಿ-ಸ್ವಾಮಿ ವೀರೇಶಾನಂದ ಸರಸ್ವತಿ ಸ್ವಾಮೀಜಿ

ರಾಜ್ಯದಲ್ಲಿ ಎಲ್ಲೂ ಅಹಿತಕರ ಘಟನೆ ನಡೆಯಲು ಬಿಡುವುದಿಲ್ಲ- ಗೃಹ ಸಚಿವ ಪರಮೇಶ್ವರ್.