ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಮುಂದಿನ ಬಜೆಟ್ ನಲ್ಲಿ ಹಿರಿಯ ನಾಗರಿಕರಿಗೆ 2 ಸಾವಿರ ರೂ. ಮಾಶಾಸನ

ಬೆಂಗಳೂರು: ಸರ್ಕಾರದಿಂದ ಈಗಾಗಲೇ ಹಿರಿಯ ನಾಗರಿಕರಿಗೆ ಅಂಗವಿಕಲರಿಗೆ ತಿಂಗಳಲ್ಲಿ ಮಾಶಾಸನ ನೀಡಲಾಗುತ್ತಿದೆ.  ಈ ನಡುವೆ ಮುಂದಿನ ಬಜೆಟ್ನ ಲ್ಲಿ ಹಿರಿಯ ನಾಗರಿಕರ ಮಾಶಾಸನ ಹೆಚ್ಚಳಕ್ಕೆ ಕ್ರಮ ವಹಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಸಿಎಂ ಸಿದ್ಧರಾಮಯ್ಯ, ವೃದ್ಧರಿಗೆ 2 ಸಾವಿರ ರೂಪಾಯಿ ಮಾಶಾಸನ ನೀಡುವಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್  ಮಾಡಿದ್ದು ಇದನ್ನ ಗಂಭೀರವಾಗಿ ಪರಿಗಣಿಸಲಾಗುವುದು. ಮುಂದಿನ ಬಜೆಟ್ನಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ.

ವಿವಿಧ ಕ್ಷೇತ್ರಗಳ ರಾಜ್ಯ ಪ್ರಶಸ್ತಿ ಪುರಸ್ಕೃತ ಹಿರಿಯರನ್ನು ಸನ್ಮಾನಿಸಿ ಮಾತನಾಡಿದ ಅವರು, ಪ್ರತಿಯೊಬ್ಬರೂ ವಿಶ್ವ ಮಾನವರಾಗಿ ಬದುಕಿ, ವಿಶ್ವ ಮಾನವರಾಗಿಯೆ ಇಹಲೋಕ ತ್ಯಜಿಸಬೇಕು ಎಂದರು.

ಹಿರಿಯರನ್ನು ಗೌರವದಿಂದ ನಡೆಸಿಕೊಳ್ಳುವುದು ಮತ್ತು ಅವರ ಬದುಕಿನ ಮೌಲ್ಯಗಳನ್ನು ನಾವು ಅಳವಡಿಸಿಕೊಳ್ಳುವುದೆ ಹಿರಿಯರಿಗೆ ನಾವು ನೀಡುವ ಗೌರವ. ನಾವು, ನೀವೆಲ್ಲ ಎಷ್ಟು ವರ್ಷ ಬದುಕುತ್ತೀವಿ ಎನ್ನುವುದಕ್ಕಿಂತ ಇದ್ದಷ್ಟು ದಿನ ಸಾರ್ಥಕ ಬದುಕು ನಡೆಸುವುದು ಉತ್ತಮ ಎಂದು ತಿಳಿಸಿದರು.

 

Related posts

ಶಿವಮೊಗ್ಗ ದಸರಾಗೆ ಸರ್ಕಾರ ಕೂಡಲೇ ಒಂದು ಕೋಟಿ ರೂ. ಅನುದಾನ ನೀಡಬೇಕು-ಕೆ.ಬಿ. ಪ್ರಸನ್ನಕುಮಾರ್ ಆಗ್ರಹ

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ಸೈಕಲ್’ ವಿತರಣೆಗೆ ನಿರ್ಧಾರ.

ಪರಿಷತ್ ಗೆ ಮೂವರ ನಾಮನಿರ್ದೇಶನಕ್ಕೆ ರಾಜ್ಯಪಾಲರಿಂದ ಅನುಮೋದನೆ.