ಕನ್ನಡಿಗರ ಪ್ರಜಾನುಡಿ
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

ರಾಹುಲ್ ಗಾಂಧಿ ಕುರಿತ ಬಿಜೆಪಿ ಪೋಸ್ಟರ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್ ನಾಯಕ!

ಜೈಪುರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ  ಅವರನ್ನು ‘ನವಯುಗದ ರಾವಣ’ ಎಂದು ಬಿಂಬಿಸುವ ರೀತಿ  ಬಿಂಬಿಸಿ ಬಿಜೆಪಿ ಹಾಕಿದ್ದ ಫೋಸ್ಟರ್ ಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರೊಬ್ಬರು ಇದೀಗ ಕೋರ್ಟ್ ಮೆಟ್ಟಿಲೇರಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಪಕ್ಷದ ಐಟಿ ಸೆಲ್ ಉಸ್ತುವಾರಿ ಅಮಿತ್ ಮಾಳವಿಯಾ ವಿರುದ್ಧ ಕಾಂಗ್ರೆಸ್ ನಾಯಕರೊಬ್ಬರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ರಾಜಸ್ಥಾನ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿ ಜಸ್ವಂತ್ ಗುರ್ಜರ್ ಅವರು ನ್ಯಾಯಾಲಯಕ್ಕೆ  ಅರ್ಜಿ  ಸಲ್ಲಿಸಿದ್ದಾರೆ.  ಬಿಜೆಪಿ ನಾಯಕರ ವಿರುದ್ಧ ಐಪಿಸಿ ಸೆಕ್ಷನ್ 499 (ಇನ್ನೊಬ್ಬ ವ್ಯಕ್ತಿಯ ವಿರುದ್ಧ ಸುಳ್ಳು ಆರೋಪ), 500 (ಮಾನನಷ್ಟ), 504 (ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂದು ಮನವಿ ಮಾಡಿದ್ದಾರೆ.

ಗುರ್ಜರ್ ಜೈಪುರ ಮೆಟ್ರೋಪಾಲಿಟನ್ ಕೋರ್ಟ್-11 ರಲ್ಲಿ ಅರ್ಜಿ ಸಲ್ಲಿಸಿದ್ದು, ಅಕ್ಟೋಬರ್ 9 ರಂದು ವಾದ ಆಲಿಸಲು ನ್ಯಾಯಾಲಯ ನಿರ್ಧರಿಸಿದೆ. ಬಿಜೆಪಿಯ ಅಧಿಕೃತ ಎಕ್ಸ್ ಖಾತೆಯಲ್ಲಿ ಹಾಕಲಾದ ಪೋಸ್ಟರ್ ನಲ್ಲಿ ರಾವಣನಂತೆ ಬಿಂಬಿಸುವ ಗಾಂಧಿ ಫೋಟೋ ವಿವಾದವನ್ನು ಹುಟ್ಟುಹಾಕಿದ್ದು, ಕಾಂಗ್ರೆಸ್ ನಿಂದ ತೀವ್ರ ಟೀಕೆಗೆ ಕಾರಣವಾಗಿದೆ. ಅರ್ಜಿಯನ್ನು ನ್ಯಾಯಾಲಯ ಅಂಗೀಕರಿಸಿದ್ದು, ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 9 ರಂದು ನಿಗದಿಪಡಿಸಲಾಗಿದೆ ಎಂದು ಗುರ್ಜರ್ ಹೇಳಿದ್ದಾರೆ.

ಅಕ್ಟೋಬರ್ 5 ರಂದು ಉದ್ದೇಶಪೂರ್ವಕವಾಗಿ ಫೋಸ್ಟರ್ ಫೋಸ್ಟ್ ಮಾಡಲಾಗಿದೆ. ಕಾಂಗ್ರೆಸ್ ಮತ್ತು ಅದಕ್ಕೆ ಸಂಬಂಧಿಸಿದ ಜನರ ಅಭಿಮಾನವನ್ನು ಅವಮಾನಿಸುವುದು ಮತ್ತು ಹಾನಿ ಮಾಡುವುದು ಮತ್ತು ರಾಜಕೀಯ ಲಾಭ ಗಳಿಸುವುದು ಇದರ ಉದ್ದೇಶವಾಗಿದೆ ಎಂದು ಅವರು ಅರ್ಜಿಯಲ್ಲಿ ಆರೋಪಿಸಿದ್ದಾರೆ. ಆರೋಪಿಗಳಿಬ್ಬರ ಹೇಳಿಕೆಗಳನ್ನು ದಾಖಲಿಸಿಕೊಂಡು ತನಿಖೆ ನಡೆಸುವಂತೆ ಅರ್ಜಿದಾರರು ನ್ಯಾಯಾಲಯದ ಮುಂದೆ ಮನವಿ ಮಾಡಿದ್ದಾರೆ.

 

Related posts

‘ರೈತ’ರಿಗೆ ಗುಡ್ ನ್ಯೂಸ್: ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ‘ಬಗರ್ ಹುಕುಂ’ ಸಮಿತಿ,

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿ ಗಣತಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರವಸೆ.

1,25,000 ವರ್ಷಗಳಲ್ಲಿಯೇ ಈ ವರ್ಷ ಅತ್ಯಂತ ತಾಪಮಾನ..