ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಶಾಲೆಗಳಲ್ಲಿ ಕಡ್ಡಾಯವಾಗಿ ಪ್ರತಿ ವಿದ್ಯಾರ್ಥಿಗೆ ಜಾಗ ಮೀಸಲಿಡಿ- ಸುತ್ತೋಲೆ ಹೊರಡಿಸಿದ ಶಿಕ್ಷಣ ಇಲಾಖೆ..

ಬೆಂಗಳೂರು: ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಜಾಗದ ಕುರಿತು ಶಾಲಾ ಮತ್ತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಶಾಲೆಗಳು ಪ್ರತಿ ವಿದ್ಯಾರ್ಥಿಗೆ ಕೊಠಡಿಗಳಲ್ಲಿ ಒಂದು ಚದರ ಮೀಟರ್ ಸ್ಥಳ ಕಡ್ಡಾಯವಾಗಿ ಮೀಸಲಿಡಬೇಕು ಎಂದು ಶಿಕ್ಷಣ ಇಲಾಖೆ     ಸುತ್ತೋಲೆ ಹೊರಡಿಸಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಈ ಕುರಿತು ಸುತ್ತೋಲೆ ಹೊರಡಿಸಿದ್ದು, 9, 10ನೇ ತರಗತಿವರೆಗೆ ವಿಸ್ತರಿಸಲು ಬಯಸುವ ಶಾಲೆಗಳು ಪ್ರತಿ ವಿದ್ಯಾರ್ಥಿಗಳಿಗೆ ಕೊಠಡಿಗಳಲ್ಲಿ ಒಂದು ಚದರ ಮೀಟರ್ ಸ್ಥಳ ಕಡ್ಡಾಯವಾಗಿ ಮೀಸಲಿಡಬೇಕು ಎಂದು ತಿಳಿಸಿದೆ.

ಕೆಲವು ಖಾಸಗಿ ಶಾಲೆಗಳಲ್ಲಿ ಒಂದು ಬೆಂಚ್ ನಲ್ಲಿ ಮೂವರು ವಿದ್ಯಾರ್ಥಿಗಳನ್ನು ಕೂರಿಸಲಾಗುತ್ತಿದೆ. ಇದರಿಂದ ಮಕ್ಕಳು ಪಾಠದ ಕಡೆ ಗಮನ ಕೇಂದ್ರೀಕರಿಸಲು ಸಾಧ್ಯವಾಗುತ್ತಿಲ್ಲ. ಮಕ್ಕಳಿಗೆ ತೊಂದರೆಯಾಗುತ್ತಿದೆ. ಕೆಲವೊಮ್ಮೆ ಮಕ್ಕಳ ನಡುವೆ ಜಗಳಕ್ಕೆ ಕಾರಣವಾಗಿದೆ. ಇದು ಇಲಾಖೆಯ ಗಮನಕ್ಕೆ ಬಂದಿದ್ದು, ಹೀಗಾಗಿ ಪ್ರತಿ ವಿದ್ಯಾರ್ಥಿಗೆ ಕೊಠಡಿಗಳಲ್ಲಿ ಒಂದು ಚದರ ಮೀಟರ್ ಜಾಗ ಕಡ್ಡಾಯವಾಗಿ ಮೀಸಲಿಡಬೇಕೆಂದು ಹೇಳಿದೆ.

 

Related posts

ಹಳೇ ಪಿಂಚಣಿ ನಿರೀಕ್ಷೆಯಲ್ಲಿದ್ದ ನೌಕರರಿಗೆ ಗುಡ್ ನ್ಯೂಸ್

ಹೊಸ ಗಿನ್ನೆಸ್ ದಾಖಲೆ: ಅಯೋಧ್ಯೆ ಬೆಳಗಿದ 22 ಲಕ್ಷ ಹಣತೆ…

ಸಿಎಂ ಸಿದ್ದರಾಮಯ್ಯ ಬಗ್ಗೆ ಪೋಸ್ಟ್ ಹಾಕಿ ನೆಟ್ಟಿಗರಿಗೆ ಆಹಾರವಾದ ಚಕ್ರವರ್ತಿ ಸೂಲಿಬೆಲೆ.