ಕನ್ನಡಿಗರ ಪ್ರಜಾನುಡಿ
ದೇಶಪ್ರಧಾನ ಸುದ್ದಿಮುಖ್ಯಾಂಶಗಳು

ಇಸ್ರೇಲ್-ಪ್ಯಾಲೆಸ್ತೀನ್ ಯುದ್ಧದ ಎಫೆಕ್ಟ್: ಕಚ್ಚಾ ತೈಲ ಬೆಲೆ ಏರಿಕೆ.

ನವದೆಹಲಿ: ಇಸ್ರೇಲ್ ಮೇಲೆ ಪ್ಯಾಲೆಸ್ತೀನ್ ನ ಹಮಾಸ್ ಉಗ್ರರು ಸಾವಿರಾರು ರಾಕೆಟ್ಗಳೊಂದಿಗೆ ದಾಳಿ ನಡೆಸಿದ ಬೆನ್ನಲ್ಲೆ ಪ್ರತ್ಯುತ್ತರವಾಗಿ  ಇಸ್ರೇಲ್ ಕೂಡ ಯುದ್ಧ ಘೋಷಿಸಿ ವಾಯುದಾಳಿ ಮೂಲಕ ಗಾಜಾಪಟ್ಟಿ ಉಗ್ರರಿಗೆ ತಿರುಗೇಟು ನೀಡಿದ್ದು,  ಇಸ್ರೇಲ್ ಹಾಗೂ ಹಮಾಸ್ ನಡುವಿನ ಕದನ ದಿನೇ ದಿನೇ  ತೀವ್ರಗೊಳ್ಳುತ್ತಿದೆ

ಸಂಘರ್ಷ, ದಾಳಿ, ಪ್ರತಿದಾಳಿಯು ಎರಡು ರಾಷ್ಟ್ರಗಳಿಗೆ ಮಾತ್ರವಲ್ಲ ಜಗತ್ತಿಗೇ ಪರಿಣಾಮ ಬೀರುವ ಲಕ್ಷಣಗಳು ಗೋಚರಿಸಿವೆ. ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷದ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆಯು  ಏಕಾಏಕಿ ಶೇ.4ರಷ್ಟು ಏರಿಕೆಯಾಗಿದ್ದು,  ಇದರ ಪರಿಣಾಮವು ಭಾರತದ ಮೇಲೂ ಬೀಳಲಿದೆ ಎಂದು ತಿಳಿದುಬಂದಿದೆ.

ಜಾಗತಿಕ ಮಾರುಕಟ್ಟೆಗೆ ಪ್ಯಾಲೆಸ್ತೀನ್ನಿಂದ ಭಾರಿ ಪ್ರಮಾಣದ ಕಚ್ಚಾತೈಲದ ಪೂರೈಕೆಯಾಗುತ್ತದೆ. ಆದರೆ, ಹಮಾಸ್ ಉಗ್ರರು ಇಸ್ರೇಲ್ ಮೇಲೆ ದಾಳಿ ನಡೆಸಿರುವ ಕಾರಣ ಪ್ಯಾಲೆಸ್ತೀನ್ ಗೆ ಜಾಗತಿಕ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಕಚ್ಚಾ ತೈಲ ಪೂರೈಕೆ ಮಾಡುವುದು ಕಷ್ಟವಾಗುತ್ತಿದೆ. ವಿಶ್ವ ಮಾರುಕಟ್ಟೆಗೆ ಕಚ್ಚಾತೈಲದ ಸಮರ್ಪಕ ಪೂರೈಕೆಯಾಗದ ಕಾರಣ ಬ್ರೆಂಟ್ ಕಚ್ಚಾತೈಲದ ಬೆಲೆಯು ಶೇ.4ರಷ್ಟು ಏರಿಕೆಯಾಗಿದೆ.

ಬ್ರೆಂಟ್ ಕಚ್ಚಾತೈಲದ ಬೆಲೆಯು ಒಂದು ಬ್ಯಾರೆಲ್ಗೆ ವರ್ಷದಲ್ಲಿ ಇದೇ ಮೊದಲ ಬಾರಿಗೆ 95 ಡಾಲರ್ ಆಗಿದೆ. ರಷ್ಯಾ ಹಾಗೂ ಉಕ್ರೇನ್ ಸಂಘರ್ಷದ ಬಳಿಕ ತಹಬಂದಿಗೆ ಬಂದಿದ್ದ ಕಚ್ಚಾತೈಲದ ಬೆಲೆಯು ಏಕಾಏಕಿ ಏರಿಕೆಯಾಗಿರುವುದು ಕಚ್ಚಾತೈಲದ ಮೇಲೆಯೇ ಅವಲಂಬಿತವಾಗಿರುವ ಭಾರತದಂತಹ ರಾಷ್ಟ್ರಗಳ ಮೇಲೆ ಹೆಚ್ಚಿನ ಪ್ರಮಾಣದ ಪರಿಣಾಮ ಬೀರಲಿದೆ ಎಂದೇ ತಜ್ಞರು ವಿಶ್ಲೇಷಿಸಿದ್ದಾರೆ. ಹಾಗಾಗಿ, ಮುಂದಿನ ದಿನಗಳಲ್ಲಿ ಭಾರತದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೆಚ್ಚಾದರೂ ಅಚ್ಚರಿ ಇಲ್ಲ ಎನ್ನಲಾಗುತ್ತಿದೆ.

ಇಸ್ರೇಲ್ ಹಾಗೂ ಪ್ಯಾಲೆಸ್ತೀನ್ ಸಂಘರ್ಷ ಆರಂಭವಾದಾಗಿನಿಂದ ಇದುವರೆಗೆ 1,100 ಜನ ಮೃತಪಟ್ಟಿದ್ದಾರೆ. ಹಮಾಸ್ ಉಗ್ರರ ದಾಳಿಯಿಂದ ಇಸ್ರೇಲ್ನಲ್ಲಿ 44 ಯೋಧರು ಸೇರಿ 700ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಮತ್ತೊಂದೆಡೆ, ಇಸ್ರೇಲ್ ನಡೆಸಿದ ವಾಯುದಾಳಿಯಿಂದ ಗಾಜಾಪಟ್ಟಿಯಲ್ಲಿ 413 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.

 

Related posts

ಭಾರತೀಯ ವಿದ್ಯಾ ಭವನದಲ್ಲಿ ‘ಗೊಂಬೆ ಹಬ್ಬ’

ಅಪರೇಷನ್ ಕಮಲಕ್ಕೆ ಎಲ್ಲಿಂದ ಹಣ ಬರುತ್ತೆ ಉತ್ತರಿಸಲಿ – ಬಿಎಲ್ ಸಂತೋಷ್ ಗೆ ಸಚಿವ ಪ್ರಿಯಾಂಕ್ ಖರ್ಗೆ ಸವಾಲು.

ರೈಲ್ವೆ ಇಲಾಖೆ ಉದ್ಯೋಗಿಗಳಿಗೆ 4% ತುಟ್ಟಿಭತ್ಯೆ ಹೆಚ್ಚಳ.