ಸೊರಬ: ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ನೈಋತ್ಯ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರರ ಕ್ಷೇತ್ರ ಚುನಾವಣೆಯ ಕುರಿತು ನಡೆದ ಸಭೆಯಲ್ಲಿ ವಿಧಾನ ಪರಿಷತ್ ಶಾಸಕ ಡಿ.ಎಸ್. ಅರುಣ್ ಪಾಲ್ಗೊಂಡು ಮತದಾರರ ಪಟ್ಟಿಗೆ ನೋಂದಣಿ ಮಾಡಿಸುವ ಕಾರ್ಯದ ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ ಸೊರಬ ತಾಲೂಕು ಬಿಜೆಪಿ ಅಧ್ಯಕ್ಷ ಪ್ರಕಾಶ್ ತಲಕಾಲುಕೊಪ್ಪ, ಉಪಾಧ್ಯಕ್ಷ ದೇವೇಂದ್ರಪ್ಪ, ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ಗುರುಕುಮಾರ್ ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.