ಶಿವಮೊಗ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಎನ್ಸಿಡಿ ಘಟಕ, ನ್ಯಾಷನಲ್ ಮೆಡಿಕೋಸ್ ಆರ್ಗನೈಸೇಷನ್, ಶಿವಮೊಗ್ಗ ಸೈಕಲ್ ಕ್ಲಬ್, ಸಿಮ್ಸ್, ವಾರ್ತಾ ಇಲಾಖೆ ಮತ್ತು ಭಾರತೀಯ ವೈದ್ಯಕೀಯ ಸಂಘ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ವಿಶ್ವ ಹೃದಯ ದಿನ ಮತ್ತು ವಿಶ್ವ ರೇಬೀಸ್ ದಿನದ ಅಂಗವಾಗಿ ಡಿಹೆಚ್ಒ ಕಚೇರಿ ಆವರಣದಿಂದ ಹಮ್ಮಿಕೊಂಡಿದ್ದ ಸೈಕಲ್ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ, ಡಿಹೆಚ್ಒ ಡಾ. ರಾಜೇಶ್ ಸುರಗೀಹಳ್ಳಿ, ಸಿಮ್ಸ್ ನಿರ್ದೇಶಕರಾದ ಡಾ. ವಿರೂಪಾಕ್ಷಪ್ಪ, ಡಾ. ಸಿದ್ದನಗೌಡ ಪಾಟೀಲ್, ಡಾ. ತಿಮ್ಮಪ್ಪ, ಡಾ.ಮಲ್ಲಪ್ಪ, ಡಾ. ಶಮಾ ಬೇಗಂ ಸೇರಿದಂತೆ ಆರೋಗ್ಯ ಇಲಾಖೆಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
previous post