ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಡಿಸಿಎಂ ಡಿಕೆ ಶಿವಕುಮಾರ್ ಗೆ ಎದುರಾಯ್ತು ಸಂಕಷ್ಟ: ಸಿಬಿಐ ತನಿಖೆಗೆ ಅನುಮತಿ ನೀಡಿದ ಹೈಕೋರ್ಟ್.

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಗೆ ಮತ್ತೆ ಸಂಕಷ್ಟ ಎದುರಾಗಿದೆ ಸಿಬಿಐ ತನಿಖೆಗೆ  ಅನುಮತಿ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಡಿಕೆ ಶಿವಕುಮಾರ್ ವಿರುದ್ದದ ಆದಾಯ ಮೀರಿ ಆಸ್ತಿ ಗಳಿಕೆ  ಪ್ರಕರಣದ ಸಿಬಿಐ ತನಿಖೆ ಸಂಬಂಧ ಕರ್ನಾಟಕ ಹೈಕೋರ್ಟ್  ಇಂದು  ಮಹತ್ವದ ತೀರ್ಪು ಪ್ರಕಟಿಸಿದೆ. ಸಿಬಿಐ ತನಿಖೆ ರದ್ದು ಕೋರಿ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಇದೀಗ ಡಿಕೆ ಶಿವಕುಮಾರ್  ಅರ್ಜಿ ವಜಾಗೊಳಿಸಿರುವ  ಹೈಕೋರ್ಟ್ ಸಿಬಿಐ ತನಿಖೆಗೆ ಅಸ್ತು ಎಂದಿದೆ.

ಡಿಕೆ ಶಿವ ಕುಮಾರ್ ಹೈಕೋರ್ಟ್ ಗೆ ತಡವಾಗಿ ಅರ್ಜಿ ಸಲ್ಲಿಸಿದ್ದಾರೆ. ತನಿಖೆ ವಿಳಂಬವಾದರೇ ಸಿಬಿಐಗೆ ನಿರ್ದೇಶನ ನೀಡಬಹದು  3 ತಿಂಗಳಲ್ಲಿ ತನಿಖೆ ಪೂರ್ಣಗೊಳಿಸುವಂತೆ ಸಿಬಿಐಗೆ ಹೈಕೋರ್ಟ್  ಸೂಚಿಸಿದೆ.

ಪ್ರಕರಣ ಹಿನ್ನೆಲೆ

ಡಿಕೆ ಶಿವಕುಮಾರ್ ಅವರು 2023ರಿಂದ 2018ರ ಮಧ್ಯದ ಅವಧಿಯಲ್ಲಿ ತಮ್ಮ ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ ಎಂದು ಸಿಬಿಐ, 2020ರ ಅಕ್ಟೋಬರ್ 3ರಂದು ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಅಡಿಯಲ್ಲಿ 13(2), 13(1)ಇ ಕ್ರಿಮಿನಲ್ ಪ್ರಕರಣ ದಾಖಲಿಸಿತ್ತು. ಈ ಪ್ರಕರಣವನ್ನು ರದ್ದು ಕೋರಿ ಡಿಕೆ ಶಿವಕುಮಾರ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ತನಿಖೆಗೆ ಮಧ್ಯಂತರ ತಡೆ ತಡೆಯಾಜ್ಞೆ ನೀಡಿತ್ತು. ಅಲ್ಲದೇ ಮೇಲಿಂದ ಮೇಲೆ ತಡೆಯಾಜ್ಞೆಯನ್ನು ಕೋರ್ಟ್ ವಿಸ್ತರಿಸಿತ್ತು.

ಈ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಕೆ ಶಿವಕುಮಾರ್‌ ವಿರುದ್ಧದ ಸಿಬಿಐ ತನಿಖೆಗೆ ಕರ್ನಾಟಕ ಹೈಕೋರ್ಟ್‌ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸುವಂತೆ ಸಿಬಿಐ ಸುಪ್ರೀಂಕೋರ್ಟ್​ ಮೆಟ್ಟಿಲೇರಿತ್ತು. ಆದ್ರೆ, ಮೊನ್ನೆ ಅಷ್ಟೇ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌, ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು. ಅಲ್ಲದೇ ಈ ಬಗ್ಗೆ ಅಭಿಪ್ರಾಯ ಕೇಳಿ ಡಿಕೆ ಶಿವಕುಮಾರ್‌ ಅವರಿಗೆ ನೋಟಿಸ್‌ ಜಾರಿ ಮಾಡಿತ್ತು.

Related posts

ಭಾರತವಿಲ್ಲದೆ ಅಂತಾರಾಷ್ಟ್ರೀಯ ಸಮಸ್ಯೆಗಳಿಗೆ ಪರಿಹಾರ ಅಸಾಧ್ಯ : ಹಾಡಿ ಹೊಗಳಿದ ನಾರ್ವೆ ಸಚಿವ

ವಿದ್ಯಾರ್ಥಿಗಳ ಜೊತೆ ಶಿಕ್ಷಕರು ಆಪ್ತ ಸಮಾಲೋಚಕರಾಗಿ-ಖ್ಯಾತ ಮನಶಾಸ್ತ್ರಜ್ಞ ಡಾ.ಪ್ರೀತಿ ಶಾನಭಾಗ.

ಜಗತ್ತಿನ ಎಲ್ಲಾ ಧರ್ಮಗಳೂ ಶಾಂತಿಯನ್ನೇ ಬೋಸುತ್ತವೆ-ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ