ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ಸೈಕಲ್’ ವಿತರಣೆಗೆ ನಿರ್ಧಾರ.

ಬೆಂಗಳೂರು: ರಾಜ್ಯ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ  ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕಳೆದ ಎರಡ್ಮೂರು ವರ್ಷಗಳಿಂದ ನಿಂತು ಹೋಗಿದ್ದ ಸೈಕಲ್ ವಿತರಣೆಗೆ ಮುಂದಾಗಿದೆ. ಮುಂದಿನ ವರ್ಷದಿಂದ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಮಾಡಲಿದೆ ಎನ್ನಲಾಗಿದೆ.

ಈ ಕುರಿತು ಮಾತನಾಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ,  ಮುಂದಿನ ವರ್ಷದಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಮಾಡಲಾಗುವುದು ಎಂದು  ಹೇಳಿದ್ದಾರೆ.

ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲಾ ಮಕ್ಕಳಿಗೆ ಸೈಕಲ್ ವಿತರಿಸಲಾಗುವುದು. ಶಾಲೆ ಆರಂಭವಾಗಿ ಮೂರ್ನಾಲ್ಕು ತಿಂಗಳು ಕಳೆದಿರುವುದರಿಂದ ೀಗ ಸೈಕಲ್ ವಿತರಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ.

ಇನ್ನು 13 ಸಾವಿರ ಶಿಕ್ಷಕರನ್ನು ನೇಮಕ ಮಾಡಿದ್ದು, ಸದ್ಯದಲ್ಲೇ ಶಿಕ್ಷಕರು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಹೆಚ್ಚುವರಿಯಾಗಿ 2 ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲು ಗಮನಹರಿಸಲಾಗಿದೆ ಎಂದರು.

 

Related posts

ಅ.14, 15ರಂದು ಶಿವಮೊಗ್ಗದಲ್ಲಿ ಕನ್ಯಾದಾನ

ಓದುವಾಗ, ಡ್ರೈವಿಂಗ್ ಮಾಡುವಾಗ ನಿದ್ರೆ ಬಂದ್ರೆ ನೋ ಟೆನ್ಷನ್: ತಟ್ಟನೇ ಅಲರ್ಟ್ ಮಾಡುತ್ತೆ ಈ ಕನ್ನಡಕ..

ರಾಜೀ ಸಂಧಾನ ಮೂಲಕ ವ್ಯಾಜ್ಯಗಳ ಪರಿಹಾರ ಕಂಡುಕೊಳ್ಳಬೇಕು : ನ್ಯಾ.ಆರ್.ದೇವದಾಸ್