ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬರ, ರಾಜ್ಯದ ಜನರ ಸಂಕಷ್ಟದ ನಡುವೆಯೂ ಸಚಿವರು, ಶಾಸಕರ ವೇತನ ಹೆಚ್ಚಳಕ್ಕೆ ಒಪ್ಪಿಗೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟು ಬರಗಾಲ ಆವರಿಸಿದೆ. ಜನರು ಸಂಕಷ್ಟಕ್ಕೀಡಾಗಿದ್ದಾರೆ. ಇತ್ತ ನೀಡಿದ್ದ 5 ಗ್ಯಾರಂಟಿಗಳ ಭರವಸೆಯನ್ನ ಈಡೇರಿಸಿರುತ್ತಿರುವ ಸರ್ಕಾರಕ್ಕೆ ಹಣ ಹೊಂದಿಸುವುದೇ  ಸವಾಲಾಗಿದೆ. ಪರಿಸ್ಥಿತಿ ಹೀಗಿದ್ದರೂ ಸಹ  ಹಿಂದಿನ ಬಿಜೆಪಿ ಸರ್ಕಾರ ನಿರ್ಣಯ ಮಾಡಿದ್ದ  ಸಚಿವರು, ಶಾಸಕರ ವೇತನ ಹೆಚ್ಚಳಕ್ಕೆ ಈಗಿನ ಕಾಂಗ್ರೆಸ್ ಸರ್ಕಾರ ಸಂಪುಟದಲ್ಲಿ ಒಪ್ಪಿಗೆ ನೀಡಿದೆ.

ಸಚಿವರು, ಶಾಸಕರ ವೇತನ ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ ನೀಡಿದೆ. ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ 2022 ರಲ್ಲಿ ಸಚಿವರು, ಶಾಸಕರ ವೇತನ, ಭತ್ಯೆ ಹೆಚ್ಚಳ ಮಾಡಿದ್ದ ನಿರ್ಣಯಕ್ಕೆ ಸಂಪುಟ ಸಭೆಯಲ್ಲಿ ಘಟನೋತ್ತರ ಒಪ್ಪಿಗೆ ನೀಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಚಿವರು, ಶಾಸಕರ ವೇತನ ಹೆಚ್ಚಳಕ್ಕೆ ಒಪ್ಪಿಗೆ ನೀಡಲಾಗಿದೆ. 2022 ರ ಫೆಬ್ರವರಿಯಲ್ಲಿ ಕಾಯ್ದೆಗೆ ತಿದ್ದುಪಡಿ ತಂದು ವೇತನ, ಭತ್ಯೆ ಪರಿಷ್ಕರಣೆ ಮಾಡಲಾಗಿತ್ತು. ಇದುವರೆಗೆ ಸಚಿವರು, ಶಾಸಕರು ಪರಿಷ್ಕೃತ ವೇತನ ಪಡೆಯುತ್ತಿದ್ದರು. ಆದರೆ, ಇದಕ್ಕೆ ಸಚಿವ ಸಂಪುಟ ಒಪ್ಪಿಗೆ ಪಡೆಯದ ಹಿನ್ನೆಲೆಯಲ್ಲಿ ಘಟನೋತ್ತರ ಒಪ್ಪಿಗೆ ನೀಡಲಾಗಿದೆ ಎಂದು ಸಂಪುಟ ಸಭೆಯ ಬಳಿಕಾಯ ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.

ಕಡ್ಡಾಯ ಗ್ರಾಮೀಣ ಸೇವೆಯಿಂದ ವೈದ್ಯರಿಗೆ  ಸಿಹಿಸುದ್ದಿ

ಕಡ್ಡಾಯ ಗ್ರಾಮೀಣ ಸೇವೆಯಿಂದ ವೈದ್ಯರಿಗೆ ವಿನಾಯಿತಿ ನೀಡಿ ನಿರ್ಧಾರ ಕೈಗೊಳ್ಳಲಾಗಿದೆ. ಕಡ್ಡಾಯ ಗ್ರಾಮೀಣ ಸೇವೆ ತಿದ್ದುಪಡಿ ಬಿಲ್ಗೆ ಸಂಪುಟ ಸಭೆ ಅನುಮೋದನೆ ನೀಡಿದೆ. ಸುಗ್ರೀವಾಜ್ಞೆ ಮೂಲಕ ವಿಧೇಯಕಕ್ಕೆ ಅನುಮೋದನೆ ಪಡೆಯಲು ನಿರ್ಧಾರ ಕೈಗೊಳ್ಳಲಾಗಿದೆ. ವೈದ್ಯರಿಗೆ ಕಡ್ಡಾಯ ಗ್ರಾಮೀಣ ಸೇವೆಯನ್ನು ಬದಲಾವಣೆ ಮಾಡಲು ತೀರ್ಮಾನಿಸಲಾಗಿದ್ದು, ಖಾಲಿ ಹುದ್ದೆಗಳಿಗೆ ಅಗತ್ಯವಿರುವಷ್ಟು ಮಾತ್ರ ಕಡ್ಡಾಯ ಗ್ರಾಮೀಣ ಸೇವೆ ನಿಗದಿಪಡಿಸಲು ತೀರ್ಮಾನ ಕೈಗೊಳ್ಳಲಾಗಿದೆ.

ಹೊಸದಾಗಿ 21 ತಾಲೂಗಳು ಬರಪೀಡಿತ ಎಂದು ಘೋಷಿಸಲು ಒಪ್ಪಿಗೆ

ನೈಋತ್ಯ ಮುಂಗಾರಿನಲ್ಲಿ ಮಳೆ ಕೊರತೆಯಿಂದ ಬರಗಾಲ ಘೋಷಣೆ ಮಾಡಲಾಗಿದೆ. 195 ತಾಲೂಕುಗಳು ಬರಪೀಡಿತ ಎಂದು ಘೋಷಣೆ ಮಾಡಿದ್ದೆವು. ಇದರ ಜೊತೆಗೆ 21 ತಾಲೂಕುಗಳು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಹೊಸದಾಗಿ 21 ತಾಲೂಕು ಬರಪೀಡಿತ ಎಂದು ಘೋಷಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಹೆಚ್ಕೆ ಪಾಟೀಲ್ ಮಾಹಿತಿ ನೀಡಿದರು.

ಅನ್ನಭಾಗ್ಯ ಯೋಜನೆ: ಈಗಿರುವ ಪದ್ಧತಿ ಮುಂದುವರಿಸಲು ನಿರ್ಧಾರ

ಅಹಾರ ಇಲಾಖೆಯಿಂದ ಅಕ್ಕಿ ಒದಗಿಸುವ ವ್ಯವಸ್ಥೆ ಬಗ್ಗೆ ಚರ್ಚೆಯಾಗಿದೆ. ಈಗ ಇರುವ ಪದ್ಧತಿಯನ್ನೇ ಮುಂದುವರೆಸಲು ನಿರ್ಧಾರ ಕೈಗೊಳ್ಳಲಾಗಿದೆ. ಐದು ಕೆಜಿ ಅಕ್ಕಿ ಕೊಡಬೇಕಾ ಅಥವಾ ನೀಡಲಾಗುತ್ತಿರುವ ಹಣ ಮುಂದುವರಿಸಬೇಕಾ ಎಂಬ ಚರ್ಚೆಯಾಗಿದೆ. ಸದ್ಯದ ಪದ್ದತಿಯನ್ನೇ ಮುಂದುವರಿಸಲು ಕ್ಯಾಬಿನೆಟ್ ನಿರ್ಧಾರ ಕೈಗೊಂಡಿದೆ ಎಂದು ಪಾಟೀಲ್ ತಿಳಿಸಿದರು.

 

Related posts

ವೈಜ್ಞಾನಿಕವಾಗಿ ವರದಿ ಆಗಬೇಕು ಎಂದಿದ್ದಾರೆ ತಪ್ಪೇನು …? ಜಾತಿ ಜನಗಣತಿ ವರದಿ ಸ್ವೀಕಾರ ವಿರೋಧಿ ನಿಲುವಿಗೆ ಸಹಿ ಹಾಕಿದ್ದನ್ನ ಒಪ್ಪಿಕೊಂಡ ಡಿಸಿಎಂ ಡಿಕೆ ಶಿವಕುಮಾರ್

ನಾಟಕ ಪ್ರದರ್ಶನ ವೇಳೆ ಸ್ಟೇಜ್ ಮೇಲೆಯೇ ಹೃದಯಾಘಾತ:  ಕುಸಿದು ಬಿದ್ದು  ಕಲಾವಿದ ಸಾವು.

ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ