ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: 15,078 ಹುದ್ದೆ ಭರ್ತಿಗೆ ಪತ್ರ ಬರೆದ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ್ ಖರ್ಗೆ ಸಿಹಿಸುದ್ದಿ ನೀಡಿದ್ದು,ಕಲ್ಯಾಣ ಕರ್ನಾಟಕದ ಖಾಲಿ ಹುದ್ದೆಗಳ ಭರ್ತಿಗೆ ಎಲ್ಲ ಸಚಿವರಿಗೆ ಪತ್ರ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ.

ಭಾರತ ಸಂವಿಧಾನ ಅನುಚ್ಚೇದ 371 (ಜೆ) ಅಡಿ ಹೊರಡಿಸಲಾಗಿರುವ ಆದೇಶಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಮತ್ತು ಪರಾಮರ್ಶಿಸುವ ಕುರಿತು ರಚಿಸಲಾಗಿರುವ ಸಚಿವ ಸಂಪುಟ ಉಪಸಮಿತಿ ಅಧ್ಯಕ್ಷರು ಹಾಗೂ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ.

ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 15,078 ಖಾಲಿ ಹುದ್ದೆಗಳ ಭರ್ತಿ ಮಾಡಲು ಸಚಿವರು ಹಾಗೂ ಮುಖ್ಯಮಂತ್ರಿಗಳು ಹೊಂದಿರುವ ಖಾತೆಗಳ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ.

ಕಲ್ಯಾಣ ಕರ್ನಾಟಕ ಪ್ರದೇಶಗಳಲ್ಲಿ ನೇರ ನೇಮಕಾತಿ ಹಾಗೂ ಬಡ್ತಿ ಮೂಲಕ 15,078 ಹುದ್ದೆಗಳ ಭರ್ತಿ ಸಂಬಂಧ ಪತ್ರ ಬರೆಯಲಾಗಿದ್ದು, ಶೀಘ್ರವೇ ನೇಮಕಾತಿಗೆ ಕ್ರಮ ಕೈಗೊಳ್ಳುವಂತೆ ಹೇಳಿದ್ದಾರೆ.      ಕಲ್ಯಾಣ ಕರ್ನಾಟಕ ಭಾಗದಲ್ಲಿ ನೇರ ನೇಮಕಾತಿ ಮೂಲಕ 28,023 ಹುದ್ದೆಗಳನ್ನು ಭರ್ತಿ ಮಾಡಬೇಕಿದ್ದು, ಇವುಗಳಲ್ಲಿ 12,945 ಹುದ್ದೆಗಳನ್ನು ಭರ್ತಿ ಮಾಡುವ ಕ್ರಮ ಲೋಕ ಸೇವಾ ಆಯೋಗ ಹಾಗೂ ಇನ್ನಿತರ ಸಂಸ್ಥೆಗಳ ಮೂಲಕ ನಡೆಯುತ್ತಿದ್ದು, ಉಳಿದ 15,078 ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ.

2023ರ ಆಗಸ್ಟ್ 17ರಂದು ನಡೆದ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ತೆಗೆದುಕೊಳ್ಳಲಾದ ತೀರ್ಮಾನದಂತೆ ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ಸ್ಥಳೀಯ ವೃಂದದಲ್ಲಿನ ಮೀಸಲಿರಿಸಿರುವ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಬೇಕೆಂದು ಪ್ರಿಯಾಂಕ್ ಖರ್ಗೆ ಈ ಪತ್ರಗಳನ್ನು ಸಚಿವರಿಗೆ ಹಾಗೂ ಅಧಿಕಾರಿಗಳಿಗೆ ರವಾನಿಸಿದ್ದಾರೆ.

 

Related posts

ಕುಡಿಯುವ ನೀರು-ಜಾನುವಾರು ಮೇವಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲು ಸಚಿವ ಮಧು ಬಂಗಾರಪ್ಪ ಸೂಚನೆ

ವಿದ್ಯಾರ್ಥಿಗಳು, ಸಂಶೋಧನಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ಸಹಾಯಧನ ಭಾರಿ ಹೆಚ್ಚಳ

ಬಿಜೆಪಿ ಹಲವು ನಾಯಕರು ಕಾಂಗ್ರೆಸ್ ಸಂಪರ್ಕದಲ್ಲಿ – ಶಾಸಕ ಲಕ್ಷ್ಮಣ್ ಸವದಿ .