ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ವಿಶ್ವ ವಿಖ್ಯಾತ ಮೈಸೂರು ದಸರಾ: ಐತಿಹಾಸಿಕ ಜಂಬೂಸವಾರಿಗೆ ಕ್ಷಣಗಣನೆ.

ಮೈಸೂರು,: ವಿಶ್ವ ವಿಖ್ಯಾತ  ಮೈಸೂರು ದಸರಾದ ಕೇಂದ್ರ ಬಿಂದು, ಪ್ರಮುಖ ಆಕರ್ಷಣೆ  ಐತಿಹಾಸಿಕ ಜಂಬೂ ಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ.

ಇಂದು ವಿಜಯದಶಮಿಯಂದು ಜಂಬೂಸವಾರಿ ನಡೆಯಲಿದ್ದು , ಕ್ಯಾಪ್ಟನ್ ಅಭಿಮನ್ಯು 750 ಕೆಜಿ ಚಿನ್ನದ ಅಂಬಾರಿ ಜೊತ್ತು ರಾಜಪಥದಲ್ಲಿ ಸಾಗಲಿದ್ದಾರೆ,  ಅರಮನೆಯ ಬಲರಾಮ ದ್ವಾರದಲ್ಲಿ ಮಧ್ಯಾಹ್ನ 1.46ರಿಂದ 2.08ರೊಳಗೆ ನಂದಿಧ್ವಜಕ್ಕೆ ಸಿಎಂ ಸಿದ್ಧರಾಮಯ್ಯ ಪೂಜೆ ನೆರವೇರಿಸಲಿದ್ದಾರೆ. ಬಳಿಕ ಸಂಜೆ 4.40ರಿಂದ 5 ಗಂಟೆ ನಡುವೆ ಸಲ್ಲುವ ಶುಭ ಲಗ್ನದಲ್ಲಿ ಜಂಬೂ ಸವಾರಿ ಮೆರವಣಿಗೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾಪಿಸಿರುವ ಚಾಮುಂಡೇಶ್ವರಿ ಮಹಿಷಾಸುರ ಮರ್ಧಿನಿ ಮೂರ್ತಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ. ಇನ್ನು ವಿಶ್ವವಿಖ್ಯಾತ ದಸರಾ ಜಂಬೂಸವಾರಿಯಲ್ಲಿ 750 ಕೆ.ಜಿ. ಚಿನ್ನದ ಅಂಬಾರಿ ಹೊತ್ತು ಅಭಿಮನ್ಯು ಹೆಜ್ಜೆಹಾಕಿದರೇ ಇತರೇ ಆನೆಗಳು ಸಾಥ್ ನೀಡಲಿವೆ

ಈ ಬಾರಿ 14 ಆನೆಗಳು ಹಾಗೂ 47 ಸ್ತಬ್ದಚಿತ್ರಗಳು, ವಿವಿಧ ಕಲಾತಂಡಗಳು ಮೆರವಣಿಗೆಯಲ್ಲಿ ಭಾಗಿಯಾಗಲಿವೆ. ಈ ಅಮೋಘ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಜನ ಕಾತುರದಿಂದ ಕಾಯುತ್ತಿದ್ದಾರೆ.

Related posts

ಮೂರು ಡಿಸಿಎಂ ಸ್ಥಾನ ಸೃಷ್ಠಿಗೆ ಹೈಕಮಾಂಡ್ ಗೆ ಪತ್ರ ಬರೆಯುವೆ- ಸಚಿವ ಕೆ.ಎನ್ ರಾಜಣ್ಣ.

ಜೆಡಿಎಸ್​ ಶಾಸಕರಿಗೆ  ಶಾಕ್ ಕೊಟ್ಟ ರಾಜ್ಯ ಸರ್ಕಾರ

ರಾಷ್ಟ್ರ ದ್ರೋಹದ ಕೆಲಸಗಳಿಗೆ ರಾಜ್ಯ ಸರ್ಕಾರ ಕುಮ್ಮಕ್ಕು ಕೊಡಬಾರದು-ಶಾಸಕ ಎಸ್.ಎನ್. ಚನ್ನಬಸಪ್ಪ