ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯಸಿನಿಮಾ

ಹುಲಿ ಉಗುರು ಪ್ರಕರಣ ಬೆನ್ನಲ್ಲೆ ನಟ ದರ್ಶನ್, ವಿನಯ್ ಗುರೂಜಿ ವಿರುದ್ಧ ದೂರು ದಾಖಲು

ಬೆಂಗಳೂರು: ಬಿಗ್ ಬಾಸ್ನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಿಗ್ ಬಾಸ್ ಮನೆಯಿಂದ ಓರ್ವ ಆಟಗಾರನನ್ನು ಬಂಧಿಸಿರುವ ಘಟನೆ ನಡೆದಿತ್ತು. ಹುಲಿ ಉಗುರು ಧರಿಸಿದ್ದ ಆರೋಪದ ಮೇಲೆ ಬಿಗ್ಬಾಸ್ ಮನೆಯಿಂದಲೇ  ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್ ಆಗಿದ್ದು ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇದೀಗ ನಟ ದರ್ಶನ್ ಮತ್ತು ವಿನಯ್ ಗುರೂಜಿ ವಿರುದ್ಧವೂ ದೂರು ದಾಖಲಾಗಿದೆ ಎನ್ನಲಾಗಿದೆ.  ಖ್ಯಾತ ನಟ ದರ್ಶನ್ ಹುಲಿ ಉಗುರಿನ ಲಾಕೆಟ್ ಧರಿಸಿದ್ದಾರೆ ಎಂಬ ಆರೋಪ ಬಂದಿದ್ದು, ಜೊತೆಗೆ ವಿನಯ್ ಗುರೂಜಿ ಹುಲಿಯ ಚರ್ಮದ ಮೇಲೆ ಕೂತಿದ್ದಾರೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಸರ್ವ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಿವಕುಮಾರ್ ಅವರು ಅರಣ್ಯಾಧಿಕಾರಿಗಳಿಗೆ ದೂರು ನೀಡಿದ್ದಾರೆ.                     ವರ್ತೂರು ಸಂತೋಷ್ ವಿರುದ್ಧ ಹುಲಿ ಉಗುರು ಧರಿಸಿರುವ ಆರೋಪ ವಿದ್ದು ಅವರ ವಿರುದ್ದ ಅರಣ್ಯ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಅರಣ್ಯ ಅಧಿಕಾರಿಗಳು ಅವರನ್ನು ಬಿಗ್ ಬಾಸ್ ಮನೆಯಿಂದಲೇ ಬಂಧಿಸಿ ನ್ಯಾಯಾಲಯದ ಆದೇಶದಂತೆ ವರ್ತೂರು ಸಂತೋಷ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇನ್ನು ನಟ ದರ್ಶನ್ ಹಾಕಿರುವ ಬಂಗಾರದ ಚೈನ್ನಲ್ಲಿ ಹುಲಿಯ ಉಗುರು ಇದೆ. ಅವರು ಕಾನೂನು ಉಲ್ಲಂಘಿಸಿದ್ದಾರೆ. ಅವಧೂತ ಎನಿಸಿಕೊಂಡಿರುವ ವಿನಯ್ ಗುರೂಜಿ ಹುಲಿಯ ಚರ್ಮದ ಮೇಲೆ ಕೂತಿದ್ದಾರೆ, ಹುಲಿ ಉಗುರು ಧರಿಸಿದ್ದಕ್ಕೆ ವರ್ತೂರು ಸಂತೋಷ್ ಅವರನ್ನು ಬಂಧಿಸಿದ್ದಾರೆ, ಅದೇ ರೀತಿ ದರ್ಶನ್ ಮತ್ತು ವಿನಯ್ ಗುರೂಜಿಯನ್ನು ಕರೆದು ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ.

ದರ್ಶನ್ ಧರಿಸಿರುವು ಹುಲಿ ಉಗುರು ಅಸಲಿಯೋ ನಕಲಿಯೋ ಎಂದು ಅಧಿಕಾರಿಗಳು ಪರಿಶೀಲನೆ ಮಾಡಬೇಕು. ದರ್ಶನ್ ಅವರು ಅರಣ್ಯ ಇಲಾಖೆಯ ರಾಯಭಾರಿ ಆಗಿದ್ದಾರೆ, ಅವರಿಗೆ ಈ ಬಗ್ಗೆ ಮಾಹಿತಿ ಇಲ್ಲವೇ, ಅವರು ಧರಿಸಿದ್ದ ಹುಲಿ ಉಗುರು ಅಸಲಿಯಾ ಅಥವಾ ನಕಲಿಯಾ ಎಂದು ಪರಿಶೀಲನೆ ಮಾಡುವುದು ಅರಣ್ಯಾಧಿಕಾರಿಗಳ ಜವಾಬ್ದಾರಿ ಎಂದರು.

ನಟ ದರ್ಶನ್ ಮತ್ತು ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಹುಲಿ ಉಗುರು ಧರಿಸಿದ್ದ ಫೋಟೊ ವೈರಲ್ ಆಗಿದ್ದು ಸಾಮಾಜಿಕ ಮಾಧ್ಯಮಗಳಲ್ಲಿ ಟೀಕೆ ವ್ಯಕ್ತವಾಗುತ್ತಿದೆ. ಇನ್ನು ವಿನಯ್ ಗುರೂಜಿ ಹುಲಿ ಚರ್ಮದ ಮೇಲೆ ಕುಳಿತಿರುವ ಫೋಟೊ ಕೂಡ ವೈರಲ್ ಆಗಿದ್ದು, ಇವರ ಮೇಲೆ ಕ್ರಮ ಯಾವಾಗ ಎಂದು ಪ್ರಶ್ನೆ ಮಾಡಿದ್ದಾರೆ.

ತಾನು ವ್ಯಕ್ತಿಯೋರ್ವನಿಂದ ಹುಲಿ ಉಗುರು ಖರೀದಿಸಿದ್ದೇನೆ ಎಂದು ವಿಚಾರಣೆ ವೇಳೆ ಸಂತೋಷ್ ಬಾಯಿ ಬಿಟ್ಟಿದ್ದಾರೆ ಎನ್ನಲಾಗಿದೆ.ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಅಡಿಯಲ್ಲಿ ಇವರ ಬಂಧನ ಆಗಿದೆ. ಆರೋಪ ಸಾಬೀತಾದರೆ 3 ರಿಂದ 7 ವರ್ಷಗಳವರೆಗೆ ಶಿಕ್ಷೆ ಆಗುತ್ತದೆ. 10,000ರಿಂದ 25,000ದವರೆಗೆ ದಂಡ ವಿಧಿಸುವ ಸಾಧ್ಯತೆ ಇದೆ.

 

Related posts

ಪ್ರೀತಿಸಿ ಮದುವೆಯಾದ ಜೋಡಿಗೆ ಕುಟುಂಬಸ್ಥರಿಂದ ಜೀವ ಬೆದರಿಕೆ; ರಕ್ಷಣೆ ಕೋರಿ ಸಿಎಂ ಮತ್ತು ಸಚಿವರಿಗೆ ಮನವಿ…

ಕಣ್ಮರೆಯಾಗುತ್ತಿರುವ ಭಾವನಾತ್ಮಕ ಸಂಬಂಧ : ಡಿ.ಎಸ್.ಅರುಣ್ ವಿಷಾದ

ನಾಳೆ ಆಕಾಶದಲ್ಲಿ ಕಾಣಲಿದೆ ಅಪರೂಪದ ಸೂಪರ್ ಬ್ಲೂ ಮೂನ್.