ಶಿವಮೊಗ್ಗ: ಭದ್ರಾವತಿಯ ಹಿರಿಯ ಪತ್ರಕರ್ತ ಎನ್. ಶ್ರೀರಾಮ್(79) ಅನಾರೋಗ್ಯದಿಂದ ನಿನ್ನೆ ನಿಧನರಾದರು.
ಪ್ರಜಾವಾಣಿ, ಡೆಕ್ಕನ್ ಹೆರಾಲ್ಡ್ ಪತ್ರಿಕೆಗಳ ಏಜೆಂಟ್ ಆಗಿ ಹಾಗೂ ವಿವಿಧ ಪತ್ರಿಕೆಗಳಿಗೆ ಸುದ್ದಿ ಕಳಿಸುವ ಮೂಲಕ ಐದು ದಶಕಗಳ ಕಾಲ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದ ಅವರು, ಭದ್ರಾವತಿಯ ಪತ್ರಿಕಾ ಕ್ಷೇತ್ರದಲ್ಲಿ ಹೆಸರು ಮಾಡಿದ್ದವರು.
ಇವರ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಕೆ.ವಿ. ಶಿವಕುಮಾರ್ ಹಾಗೂ ಪದಾಧಿಕಾರಿಗಳು ಸದಸ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.