ಕಲ್ಬುರ್ಗಿ: ಇಂದು ರಾಜ್ಯಾದ್ಯಂತ ಕೆಪಿಎಸ್ಸಿಯ ವಿವಿಧ ಇಲಾಖೆಗಳ ಪರೀಕ್ಷೆ ನಡೆದಿದ್ದು, ಪರೀಕ್ಷೆಯಲ್ಲಿ ಬ್ಲೂಟೂತ್ ಬಳಕೆ ಮಾಡಿ ಪರೀಕ್ಷೆ ಬರೆಯುತ್ತಿದ್ದ ಓರ್ವ ಅಭ್ಯರ್ಥಿಯನ್ನ ಪೊಲೀಸರು ವಶಕ್ಕೆ ಪಡೆದ ಘಟನೆ ಯಾದಗಿರಿಯಲ್ಲಿ ನಡೆದಿದೆ.
ನಕಲು ಅಭ್ಯರ್ಥಿಯೇ ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯಲು ಬಂದಿದ್ದಾಗಿ ಮಾಹಿತಿ ಸಿಕ್ಕಿದೆ. ಪೊಲೀಸರು ಅಭ್ಯರ್ಥಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸೀನಿಯರ್ ಅಸಿಸ್ಟೆಂಟ್ ಹುದ್ದೆ, ಫುಡ್ ಕ್ಯಾಟಗೇರಿಜೇಷನ್ ಸಿಸ್ಟಮ್ ನ ಸೀನಿಯರ್ ಅಸಿಸ್ಟೆಂಟ್ ಸೇರಿ ವಿವಿಧ ನಿಗಮ ಮಂಡಳಿಗಳಲ್ಲಿ ಖಾಲಿ ಹುದ್ದೆ ಭರ್ತಿಗಾಗಿ ಪರೀಕ್ಷೆ ನಡೆಯುತ್ತಿದ್ದು ಯಾದಗಿರಿ ಜಿಲ್ಲೆಯ 17 ಪರೀಕ್ಷಾ ಕೇಂದ್ರಗಳಲ್ಲಿ 7,884 ಅಭ್ಯರ್ಥಿಗಳು ಕೆಪಿಎಸ್ಸಿ ಪರೀಕ್ಷೆ ಬರೆಯುತ್ತಿದ್ದಾರೆ. ಪರೀಕ್ಷಾ ಕೇಂದ್ರದಲ್ಲಿ ಕಟ್ಟುನಿಟ್ಟಿನ ಕ್ರಮ ಇದ್ರೂ, ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯುತ್ತಿರುವುದು ಕಂಡು ಬಂದಿತ್ತು.
ಕಲಬುರಗಿ ನಗರದ ಶ್ರೀ ಶರಣಬಸವೇಶ್ವರ ವಿಶ್ವ ವಿದ್ಯಾಲಯ ಪರೀಕ್ಷಾ ಕೇಂದ್ರದಲ್ಲಿ ಓರ್ವ ಅಭ್ಯರ್ಥಿ ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ. ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ಪರೀಕ್ಷಾ ಅಭ್ಯರ್ಥಿ ತ್ರೀಮೂರ್ತಿ ಎಂಬಾತ ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ. ಕೂಡಲೇ ತ್ರಿಮೂರ್ತಿಯನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.