ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಸಾಮಾನ್ಯ ವರ್ಗದಲ್ಲಿ ಹುದ್ದೆಗಳಿಗೆ ಆಯ್ಕೆಯಾದವರಿಗೆ ಸಿಂಧುತ್ವ ಪ್ರಮಾಣ ಪತ್ರ ಕಡ್ಡಾಯವಿಲ್ಲ.

ಬೆಂಗಳೂರು: ರಾಜ್ಯ ನಾಗರಿಕ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿಯ ರಿಯಾಯಿತಿ ಪಡೆಯದೆ ಸಾಮಾನ್ಯ ವರ್ಗದ ಹುದ್ದೆಗಳಿಗೆ ಆಯ್ಕೆಯಾದವರಿಗೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಸಿಂಧುತ್ವ ಪ್ರಮಾಣ ಪತ್ರವನ್ನು ಕಡ್ಡಾಯಗೊಳಿಸಬಾರದು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಈ ಕುರಿತು ಪತ್ರ ಬರೆದಿರುವ ಸಿಎಂ ಸಿದ್ಧರಾಮಯ್ಯ, ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ವರ್ಗಗಳ (ನೇಮಕಾತಿಗಳು ಮುಂತಾದವುಗಳ ಮೀಸಲಾತಿ) (ತಿದ್ದುಪಡಿ) ನಿಯಮಗಳು, 1992 ರನ್ವಯ ರಾಜ್ಯ ನಾಗರಿಕ ಸೇವಾ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಆಯ್ಕೆಗೊಳ್ಳುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಅಂತಿಮ ಆಯ್ಕೆಪಟ್ಟಿಯಲ್ಲಿ ವಿವಿಧ ಮೀಸಲಾತಿಯಡಿ ಆಯ್ಕೆ ಹೊಂದುವ ಹಾಗೂ ಸದರಿ ಮೀಸಲಾತಿಯಿಂದ ರಿಯಾಯತಿ ಪಡೆಯುವ ಅಭ್ಯರ್ಥಿಗಳು ಸಲ್ಲಿಸಿರುವ ಪ್ರಮಾಣ ಪತ್ರಗಳು ಸಿಂಧುವೇ ಎಂಬ ಬಗ್ಗೆ ಸಂಬಂಧಪಟ್ಟ ಪ್ರಾಧಿಕಾರದಿಂದ ಸಿಂಧುತ ಪ್ರಮಾಣ ಪತ್ರ ಪಡೆಯಬೇಕಾಗುತ್ತದೆ.

ಅದರ, ಮೀಸಲಾತಿ ಕೋರಿ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅಂತಿಮ ಆಯ್ಕೆ ಪಟ್ಟಿಯಲ್ಲಿ ಸಾಮಾನ್ಯ ವರ್ಗದ ಹುದ್ದೆಗಳಿಗೆ ಎದುರಾಗಿ ಆಯ್ಕೆಗೊಂಡಾಗಲೂ ಸಿಂಧುತ್ವ ಪ್ರಮಾಣ ಪತ್ರ ಸಲ್ಲಿಸುವಂತೆ ಕೆಲವು ನೇಮಕಾತಿ ಪ್ರಾಧಿಕಾರಿಗಳು ಅಭ್ಯರ್ಥಿಗಳಿಗೆ ಸೂಚಿಸುತ್ತಿವೆ. ಇದರಿಂದ ಅಂತಿಮ ಆಯ್ಕೆಪಟ್ಟಿಯಲ್ಲಿ ಮೆರಿಟ್ ಆಧಾರದಲ್ಲಿ ಸಾಮಾನ್ಯ ವರ್ಗದ ಹುದ್ದೆಗಳಿಗೆ ಎದುರಾಗಿ ಆಯ್ಕೆಯಾದ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಅನಾವಶ್ಯಕ ತೊಂದರೆಯಾಗುತ್ತಿದೆ.

ಆದ್ದರಿಂದ, ಮೀಸಲಾತಿ ಕೋರಿ ರಾಜ್ಯ ನಾಗರಿಕ ಸೇವಾ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ, ಮೀಸಲಾತಿಯಿಂದ ಯಾವುದೇ ರಿಯಾಯತಿ ಪಡೆಯದೆ ಅಂತಿಮ ಆಯ್ಕೆ ಪಟ್ಟಿಯಲ್ಲಿ ಸಾಮಾನ್ಯ ವರ್ಗದ ಹುದ್ದೆಗಳಿಗೆ ಎದುರಾಗಿ ಆಯ್ಕೆಗೊಂಡ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಸಿಂಧು ಪ್ರಮಾಣ ಪತ್ರವನ್ನು ಕಡ್ಡಾಯಗೊಳಿಸದಂತೆ ಸಂಬಂಧಪಟ್ಟ ಇಲಾಖಾ ಮುಖ್ಯಸ್ಮರಿಗೆ ಸೂಕ್ತ ನಿರ್ದೇಶನ ನೀಡಲು ಸೂಚಿಸಿದೆ ಎಂದು ಪತ್ರದಲ್ಲಿ ಸಿಎಂ ಸಿದ್ಧರಾಮಯ್ಯ ಉಲ್ಲೇಖಿಸಿದ್ದಾರೆ.

 

Related posts

ಚಾಕುವಿನಿಂದ ಇರಿದು ಅಪ್ರಾಪ್ತೆ ಕಿಡ್ನಾಪ್ : ಸಿನಿಮೀಯ ರೀತಿ ಚೇಸ್ ಮಾಡಿ ಯುವಕನನ್ನ ಹೆಡೆಮುರಿ ಕಟ್ಟಿದ ಪೊಲೀಸರು. 

ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿಸಿರುವ ಜಾಗಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಆಗ್ರಹ.

ರಬೇತಿ ಶಿಬಿರಗಳು ಬೌದ್ಧಿಕ ತಿಳವಳಿಕೆ ವೃದ್ಧಿಸುವ ಜತೆಯಲ್ಲಿ ಆತ್ಮವಿಶ್ವಾಸ ಮೂಡಿಸಲು ಸಹಕಾರಿ-ಎಚ್.ಡಿ.ರಮೇಶ್ ಶಾಸ್ತ್ರೀ